ಸೋಮಣ್ಣ ಭೇಟಿಯಾದ ಯಡಿಯೂರಪ್ಪ  
ರಾಜಕೀಯ

ಮುನಿಸು ಮರೆತು ಯಡಿಯೂರಪ್ಪ ಭೇಟಿಯಾದ ಸೋಮಣ್ಣ: ಬರೋಬ್ಬರಿ 4ವರ್ಷಗಳ ನಂತರ ದಿಗ್ಗಜರ ಸಮಾಗಮ!

ತುಮಕೂರು ಕ್ಷೇತ್ರದ ಲೋಕಸಭೆ ಟಿಕೆಟ್‌ಗೆ ಬೇಡಿಕೆ ಇಟ್ಟಿರುವ ಮಾಜಿ ಸಚಿವ ವಿ.ಸೋಮಣ್ಣ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ವರುಣ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸೋಲು ಕಂಡ ನಂತರ ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡಿದ್ದ ಮಾಜಿ ಸಚಿವ ವಿ.ಸೋಮಣ್ಣ ಅವರು ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

ತುಮಕೂರು ಕ್ಷೇತ್ರದ ಲೋಕಸಭೆ ಟಿಕೆಟ್‌ಗೆ ಬೇಡಿಕೆ ಇಟ್ಟಿರುವ ಮಾಜಿ ಸಚಿವ ವಿ.ಸೋಮಣ್ಣ ಯಡಿಯೂರಪ್ಪ ಭೇಟಿ ಮಾಡಿರುವುದು ಕೂತೂಹಲ ಕೆರಳಿಸಿದೆ. ಭೇಟಿ ಸಂದರ್ಭದಲ್ಲಿ ಸಂಸದ ಜಿ.ಎಸ್.ಬಸವರಾಜು ಕೂಡ ಹಾಜರಿದ್ದು ಸೋಮಣ್ಣ ಅವರಿಗೆ ಟಿಕೆಟ್ ಕೊಡಬೇಕು ಎಂದು ಬಿಎಸ್‌ವೈ ಬಳಿ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಜಿ.ಎಸ್.ಬಸವರಾಜು ಅವರು ಸ್ಫರ್ಧೆ ಮಾಡುವುದಿಲ್ಲ ಎಂದು ಹೇಳಿರುವುದರಿಂದ ತುಮಕೂರು ಕ್ಷೇತ್ರದಲ್ಲಿ ಟಿಕೆಟ್ ನೀಡಬೇಕು ಎಂದು ವರಿಷ್ಠರಲ್ಲಿ ಮನವಿ ಮಾಡಿದ್ದೇನೆ ಎಂದು ಪುನರುಚ್ಚರಿಸಿದರು.

ಭೇಟಿಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಕ್ಷದ ನಾಯಕರ ಜತೆ ಯಾವುದೇ ಮುನಿಸಿಲ್ಲ. ಇವೆಲ್ಲ ಮನೆಯ ಜಗಳ. ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ತರಬೇಕು. ರಾಜ್ಯದ ಎಲ್ಲ 28 ಸ್ಥಾನಗಳನ್ನು ಗೆಲ್ಲಬೇಕು ಎನ್ನುವುದೇ ಗುರಿ. ತುಮಕೂರು ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ಮಾತುಕತೆಯೂ ನಡೆದಿಲ್ಲ. ಪಕ್ಷದ ವರಿಷ್ಠರ ನಿರ್ಧಾರದಂತೆ ನಡೆದುಕೊಳ್ಳುವೆ ಎಂದರು.

ಭೇಟಿ ಸಂಸದರ್ಭದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ, ಸೋಮಣ್ಣ ಪುತ್ರ ಡಾ.ಅರುಣ್ ಕೂಡ ಹಾಜರಿದ್ದು ನಾಯಕರ ನಡುವೆ ಸಂಧಾನ ನಡೆಸಿದ್ದು ಇದರ ಪ್ರತಿಫಲ ಭವಿಷ್ಯದ ದಿನಗಳಲ್ಲಿ ತಿಳಿದುಬರಲಿದೆ.

ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಬಿ.ವೈ.ವಿಜಯೇಂದ್ರ ಕಣಕ್ಕೆ ಇಳಿಯಬೇಕಿತ್ತು. ಆದರೆ, ಅವರನ್ನು ಶಿಕಾರಿಪುರದಿಂದಲೇ ಕಣಕ್ಕೆ ಇಳಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದರು. ಹಾಗಾಗಿ, ಸೋಮಣ್ಣ ಅವರಿಗೆ ವರುಣ ಟಿಕೆಟ್‌ ನೀಡಲಾಗಿತ್ತು. ಫಲಿತಾಂಶದ ನಂತರ ವಿಜಯೇಂದ್ರ ವಿರುದ್ಧ ಸೋಮಣ್ಣ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು.

ಬಹಳ ವರ್ಷಗಳ ನಂತರ ಮಾಜಿ ಸಚಿವ ವಿ.ಸೋಮಣ್ಣ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ಹಳೆಯದನ್ನೆಲ್ಲ ಮರೆತು ಸಹಕಾರ ನೀಡುವಂತೆ ಯಡಿಯೂರಪ್ಪಗೆ ಸೋಮಣ್ಣ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT