ಬಿಜೆಪಿ 
ರಾಜಕೀಯ

ಲೋಕಸಭಾ ಚುನಾವಣೆ: ಪ್ರಣಾಳಿಕೆ ಸಿದ್ಧಪಡಿಸಲು 'ಸಂಕಲ್ಪ ಪತ್ರ ಅಭಿಯಾನ' ಆರಂಭಿಸಿದ ಬಿಜೆಪಿ

ಲೋಕಸಭೆ ಚುನಾವಣೆ ಸಿದ್ಧತೆ ಆರಂಭಿಸಿರುವ ಬಿಜೆಪಿ, ಚುನಾವಣೆಗೆ ಪ್ರಣಾಳಿಕೆ ಸಿದ್ಧಪಡಿಸುವುದಕ್ಕೂ ಮುನ್ನ ಜನರ ಸಲಹೆ ಪಡೆಯಲು ನಿರ್ಧರಿಸಿದೆ. ಇದರಂತೆ “ವಿಕಸಿತ ಭಾರತ ಸಂಕಲ್ಪ ಪತ್ರ ಜನಾಭಿಪ್ರಾಯ ಸಂಗ್ರಹ ಅಭಿಯಾನ’ಕ್ಕೆ ಚಾಲನೆ ನೀಡಿದೆ.

ಬೆಂಗಳೂರು: ಲೋಕಸಭೆ ಚುನಾವಣೆ ಸಿದ್ಧತೆ ಆರಂಭಿಸಿರುವ ಬಿಜೆಪಿ, ಚುನಾವಣೆಗೆ ಪ್ರಣಾಳಿಕೆ ಸಿದ್ಧಪಡಿಸುವುದಕ್ಕೂ ಮುನ್ನ ಜನರ ಸಲಹೆ ಪಡೆಯಲು ನಿರ್ಧರಿಸಿದೆ. ಇದರಂತೆ “ವಿಕಸಿತ ಭಾರತ ಸಂಕಲ್ಪ ಪತ್ರ ಜನಾಭಿಪ್ರಾಯ ಸಂಗ್ರಹ ಅಭಿಯಾನ’ಕ್ಕೆ ಚಾಲನೆ ನೀಡಿದೆ.

ದೇಶಾದ್ಯಂತ 1 ಕೋಟಿ ಜನರ ಅಭಿಪ್ರಾಯ ಸಂಗ್ರಹಿಸುವ ಗುರಿಯನ್ನು ಬಿಜೆಪಿ ಹೊಂದಿದ್ದು, ರಾಜ್ಯದಲ್ಲಿ ಕನಿಷ್ಠ 3 ಲಕ್ಷ ಜನರ ಅಭಿಪ್ರಾಯ ಗಳನ್ನು ಸಂಗ್ರಹಿಸುವ ಸಂಕಲ್ಪ ಮಾಡಿದೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಮುಂದಿನ ಲೋಕಸಭಾ ಚುನಾವಣೆಯ ಕ್ಷಣಗಣನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಚಿಂತನೆಯಂತೆ ಪ್ರಣಾಳಿಕೆ ಬದಲು ಜನಾಭಿಪ್ರಾಯ ಪಡೆದು ಸಂಕಲ್ಪ ಪತ್ರದ ಮೂಲಕ ಚುನಾವಣೆ ಎದುರಿಸಲಾಗುತ್ತಿದೆ ಎಂದು ಹೇಳಿದರು.

ಬಿಜೆಪಿಯ ಕೇಂದ್ರ ಸರಕಾರವು 2014 ಮತ್ತು 2019ರ ಚುನಾವಣೆ ಸಂದರ್ಭದಲ್ಲಿ ನೀಡಿದ ಬಹುತೇಕ ಎಲ್ಲ ಭರವಸೆಗಳನ್ನು ಈಡೇರಿಸಿದೆ. 10 ವರ್ಷಗಳ ಮೋದಿ ಆಡಳಿತಾವಧಿಯಲ್ಲಿ ಭರವಸೆ ಈಡೇರಿಸಿದ್ದಲ್ಲದೆ, ಯೋಜನೆ ಶಂಕುಸ್ಥಾಪನೆ ಜತೆಗೆ ಉದ್ಘಾಟನೆ ದಿನಾಂಕ ನಿಗದಿಪಡಿಸಿ ಸಕಾಲದಲ್ಲಿ ಪೂರ್ಣಗೊಳಿಸಿದ್ದನ್ನು ನೋಡಿದ್ದೇವೆ ಎಂದು ವಿವರಿಸಿದರು.

ಈ ಬಾರಿ ಘೋಷಣೆ ಪತ್ರ ಪ್ರಣಾಳಿಕೆ ಬದಲು ಸಂಕಲ್ಪ ಪತ್ರ ಮುಂದಿಡಲಾಗುವುದು. ಸ್ವಾತಂತ್ರೋತ್ಸವದ 100ನೇ ವರ್ಷಾಚರಣೆ ವೇಳೆ 2047ರಲ್ಲಿ ನಮ್ಮ ಭಾರತ ವಿಕಸಿತ ಭಾರತ ಎಂಬ ಸಂಕಲ್ಪವನ್ನು ಮೋದಿ ಅವರು ಮುಂದಿಟ್ಟಿದ್ದಾರೆ. ಅದನ್ನು ಸಾಕಾರ ಗೊಳಿಸಲು ಅಭಿಪ್ರಾಯ ಸಂಗ್ರಹದ ಅಭಿಯಾನ ಆರಂಭಿಸಿದೆ. ಸಮಾಜದ ರೈತರು, ಮಹಿಳೆಯರು, ಯುವಜನತೆ ಸಹಿತ ಎಲ್ಲ ವರ್ಗದ ಜನರಿಂದ ಅಭಿಮತ ಸಂಗ್ರಹಿಸಲಿದ್ದೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!