ಡಾ. ಎಚ್ ಅನ್ ರವೀಂದ್ರ 
ರಾಜಕೀಯ

ಮಂಡ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಡಾ. ಎಚ್.ಎನ್ ರವೀಂದ್ರ ರಾಜಿನಾಮೆ!

ಲೋಕಸಭಾ ಚುನಾವಣೆ ಹೊತ್ತಲ್ಲಿ ಮಂಡ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಉದ್ಯಮಿ ಸ್ಟಾರ್‌ ಚಂದ್ರು ಅವರಿಗೆ ಟಿಕೆಟ್‌ ಕೊಡಲು ಮುಂದಾಗಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಸ್ಥಳೀಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಡ್ಯ: ಲೋಕಸಭಾ ಚುನಾವಣೆ ಹೊತ್ತಲ್ಲಿ ಮಂಡ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಉದ್ಯಮಿ ಸ್ಟಾರ್‌ ಚಂದ್ರು ಅವರಿಗೆ ಟಿಕೆಟ್‌ ಕೊಡಲು ಮುಂದಾಗಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಸ್ಥಳೀಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅದರಲ್ಲೂ ಸ್ಟಾರ್‌ ಚಂದ್ರುಗೆ ಟಿಕೆಟ್‌ ನೀಡುವ ಸಂಬಂಧ ಅಸಮಾಧಾನಗೊಂಡಿರುವ ಸ್ಥಳೀಯ ಕಾಂಗ್ರೆಸ್‌ ಮುಖಂಡ ಡಾ ಎಚ್‌ ಎನ್‌ ರವೀಂದ್ರ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಪಕ್ಷದ ಸದಸ್ಯತ್ವ ಹಾಗು ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಬಗ್ಗೆ ಮಾಹಿತಿ ನೀಡಿದ ಡಾ ಎಚ್‌ಎನ್‌ ರವೀಂದ್ರ, ಪಕ್ಷದ ವರಿಷ್ಟರು ಸೇರಿ ಜಿಲ್ಲಾ ಉಸ್ತುವಾರಿ ಸಚಿವ ಎನ್‌ ಚಲುವರಾಯಸ್ವಾಮಿ ವಿರುದ್ದ ಅಸಮಾಧಾ‌ನ ವ್ಯಕ್ತಪಡಿಸಿದ್ದಾರೆ. ಊಟ ಹಾಕುವ ಜಿಲ್ಲೆಯ ಜನರನ್ನ ಕಾಂಗ್ರೆಸ್ ನಾಯಕರು ದುಡ್ಡಿನಲ್ಲಿ ಅಳೆಯುತ್ತಿದ್ದಾರೆ. ಸ್ಪಲ್ಪ ದಿನ ಅಷ್ಟೇ ಮಂಡ್ಯದ ಕೆರೆಯಲ್ಲಿ ಬೋಟ್ ನಿಲ್ಲಿಸಿ ಗೋವಾ ತರ ಕ್ಯಾಸಿನೊ ಶುರುಮಾಡ್ತಾರೆ ಎಂದು ರವೀಂದ್ರ ಕಾಂಗ್ರೆಸ್‌ ನಾಯಕರ ವಿರುದ್ಧ ಆರೋಪ ಮಾಡಿದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನನ್ನ ಮೇಲೆ ನಂಬಿಕೆ ಇಟ್ಟು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿ ಕೊಟ್ಟಿದ್ದರು. ಇದೀಗ ವಾತವರಣ ಕಲುಷಿತವಾಗಿದೆ. ಹೀಗಾಗಿ ಕೆಪಿಸಿಸಿ ಹುದ್ದೆಗೆ ರಾಜೀನಾಮೆ ಕೊಟ್ಟಿದ್ದೇನೆ ಎಂದರು. ಕೆಪಿಸಿಸಿಯ ಪ್ರತಿಯೊಂದು ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೇನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕೊಡುತ್ತಾರೆ ಎಂಬ ವಿಶ್ವಾಸ ಇತ್ತು.

ಕಡೆ ಗಳಿಗೆಯಲ್ಲಿ ಮೇಲುಕೋಟೆ ಕ್ಷೇತ್ರವನ್ನು ರೈತ ಸಂಘಕ್ಕೆ ನೀಡಿದ್ದಾರೆ. ರೈತ ಸಂಘಕ್ಕೆ ಬಿಟ್ಟುಕೊಡುವ ಬಗ್ಗೆ ಸೌಜನ್ಯಕ್ಕೂ ಚರ್ಚೆ ಮಾಡದೆ ತೀರ್ಮಾನ ತೆಗೆದುಕೊಂಡರು. ಕಾರ್ಯಕರ್ತರು, ಸ್ಥಳೀಯರು ನಿಮಗೆ ಗುಲಾಮರು, ನೀವು ಹೇಳಿದ ಹಾಗೆ ಕುಣಿಯುವ ಗೊಂಬೆಗಳು ನಾವು ಎಂದು ಬೇಸರ ವ್ಯಕ್ತಪಡಿಸಿದರು.

ಎಸ್.ಟಿ.ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಾನೆ, ಇವಾಗ ಕಾಂಗ್ರೆಸ್​ಗೆ ಕರೆದುಕೊಂಡು ಬರುತ್ತಿದ್ದೀರಿ. ಸ್ಥಳೀಯ ಕಾರ್ಯಕರ್ತರಿಗೆ ಅನ್ಯಾಯ ಮಾಡಿದ ಹಾಗಲ್ವಾ? ಪಕ್ಷದ ಚೌಕಟ್ಟು ನನ್ನಂತವರಿಗೆ ಹೊಂದಲ್ಲ ಹಾಗಾಗಿ ರಾಜೀನಾಮೆ ಕೊಡುತ್ತಿದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!