ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್
ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ 
ರಾಜಕೀಯ

ಹಣಕ್ಕಾಗಿ ದೊಡ್ಡ ಕುಳಗಳಿಗೆ ಲೋಕಸಭೆ ಟಿಕೆಟ್ ಹರಾಜು; ಪಕ್ಷದ ಕಾರ್ಯಕರ್ತರಿಗೆ ಕಾಂಗ್ರೆಸ್ ಪಂಗನಾಮ: ಆರ್. ಅಶೋಕ್ ಲೇವಡಿ

Shilpa D

ಬೆಂಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್‌ಎನ್‌ ರವೀಂದ್ರ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದು ಲೋಕಸಭೆ ಚುನಾವಣೆಗೆ ಆಡಳಿತ ಪಕ್ಷ ಟಿಕೆಟ್‌ ಹರಾಜು ಮಾಡುತ್ತಿದೆ ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆರೋಪಿಸಿದ್ದಾರೆ.

ಹಣಕ್ಕಾಗಿ ಲೋಕಸಭಾ ಟಿಕೆಟ್ ಗಳನ್ನು ಮಾರಾಟಕ್ಕಿಟ್ಟಿರುವ ಕರ್ನಾಟಕ ಕಾಂಗ್ರೆಸ್ ಪಕ್ಷದ ನಡೆಯಿಂದ ಬೇಸತ್ತು ಸ್ವತಃ ಅವರ ಪಕ್ಷದ ಪ್ರಧಾನ ಕಾರ್ಯದರ್ಶಿಯೇ ರಾಜೀನಾಮೆ ನೀಡಿರುವ ಘಟನೆ ಕಾಂಗ್ರೆಸ್ ಪಕ್ಷದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಹಿಡಿದ ಮತ್ತೊಂದು ಕೈಗನ್ನಡಿ.

ಒಂದು ಕಡೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಚಿವರ ತೀವ್ರ ನಿರಾಸಕ್ತಿ, ಮತ್ತೊಂದು ಕಡೆ ಹಣಕ್ಕಾಗಿ ದೊಡ್ಡ ಕುಳಗಳಿಗೆ ಟಿಕೆಟ್ ಹರಾಜು ಹಾಕಿ ಕಾರ್ಯಕರ್ತರಿಗೆ ಪಂಗನಾಮ, ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಸೊನ್ನೆ ಸುತ್ತುವುದು ಮಾತ್ರ ಗ್ಯಾರೆಂಟಿ.
ಆರ್. ಅಶೋಕ್, ವಿಧಾನಸಭೆ ಪ್ರತಿಪಕ್ಷ ನಾಯಕ

ಒಂದು ಕಡೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಚಿವರ ತೀವ್ರ ನಿರಾಸಕ್ತಿ, ಮತ್ತೊಂದು ಕಡೆ ಹಣಕ್ಕಾಗಿ ದೊಡ್ಡ ಕುಳಗಳಿಗೆ ಟಿಕೆಟ್ ಹರಾಜು ಹಾಕಿ ಕಾರ್ಯಕರ್ತರಿಗೆ ಪಂಗನಾಮ, ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ದೊಡ್ಡ ಸೊನ್ನೆ ಸುತ್ತುವುದು ಮಾತ್ರ ಗ್ಯಾರೆಂಟಿ ಎಂದು ಟೀಕಿಸಿದ್ದಾರೆ.

ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಹಿತಾಸಕ್ತಿಗೆ ದ್ರೋಹ ಬಗೆದಿರುವ ಉದ್ಯಮಿ ಸ್ಟಾರ್ ಚಂದ್ರು ಅವರನ್ನು ಮಂಡ್ಯದಿಂದ ಚುನಾವಣೆಗೆ ಸ್ಪರ್ಧಿಸಲು ಪಕ್ಷ ಆಯ್ಕೆ ಮಾಡಿದೆ ಎಂದು ಆರೋಪಿಸಿ ರವೀಂದ್ರ ಪಕ್ಷದ ಸದಸ್ಯತ್ವ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಇತರೆ ಮುಖಂಡರು ಸ್ಥಳೀಯ ಮುಖಂಡರ ಜತೆ ಚರ್ಚಿಸದೆ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ನಾಯಕರು ಮತದಾರರ ಪ್ರೀತಿ ಮತ್ತು ಗೌರವವನ್ನು ನೋಟುಗಳಿಂದ ಅಳೆಯಬಾರದು. ಇನ್ನು ಕೆಲವೇ ದಿನಗಳಲ್ಲಿ ಈ ನಾಯಕರು ಗೋವಾದಂತೆಯೇ ಮಂಡ್ಯದ ಕೆರೆಗಳಲ್ಲೂ ಕ್ಯಾಸಿನೋ ನಡೆಸಲಿದ್ದಾರೆ,'' ಎಂದು ಆರೋಪಿಸಿದರು.

SCROLL FOR NEXT