ವಿದೇಶಾಂಗ ಸಚಿವ ಜೈ ಶಂಕರ್
ವಿದೇಶಾಂಗ ಸಚಿವ ಜೈ ಶಂಕರ್ 
ರಾಜಕೀಯ

ದೆಹಲಿಯಲ್ಲಿ ವರಿಷ್ಠರ ಜೊತೆ ಬಿಜೆಪಿ ನಾಯಕರ ಸಭೆ: 10 ಹಾಲಿ ಸಂಸದರಿಗೆ ಕೊಕ್; ಕರ್ನಾಟಕದಿಂದ ಜೈಶಂಕರ್ ಸ್ಪರ್ಧೆ?

Shilpa D

ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 400 ಸೀಟುಗಳ ಗುರಿಯಿಟ್ಟಿರುವ ಬಿಜೆಪಿ ಈಗಾಗಲೇ 195 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬುಧವಾರ ಸಂಜೆಯಿಂದ ತಡರಾತ್ರಿವರೆಗೂ ಎರಡನೇ ಪಟ್ಟಿಗೆ ಸುದೀರ್ಘ ಮೀಟಿಂಗ್ ನಡೆಸಿದೆ. ಈ ಸಭೆಯಲ್ಲಿ ಕರ್ನಾಟಕದ 28 ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಹೆಸರು ಫೈನಲ್ ಮಾಡುವ ಸಂಬಂಧ ಚರ್ಚೆ ಆಗಿದೆ.

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಸುಮಾರು 10 ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಯಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಬಿಜೆಪಿಯ ಹಿರಿಯ ನಾಯಕರು ನವದೆಹಲಿಯಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದು, ಶುಕ್ರವಾರ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ಮಾಜಿ ಸಿಎಂ ಹಾಗೂ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಸೇರಿದಂತೆ ಕರ್ನಾಟಕದ ಪಕ್ಷದ ಮುಖಂಡರು ಬುಧವಾರ ಸಂಜೆ ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಮೂರರಿಂದ ನಾಲ್ಕು ಹೆಸರನ್ನು ಪಕ್ಷದ ಹೈಕಮಾಂಡ್‌ಗೆ ಕಳುಹಿಸಲಾಗಿದೆ. ಎಲ್ಲಾ 28 ಲೋಕಸಭಾ ಸ್ಥಾನಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಒಟ್ಟಿಗೆ ಘೋಷಿಸಲಾಗುವುದು. ಬಿಜೆಪಿಗೆ 25 ಮತ್ತು ಜೆಡಿಎಸ್‌ಗೆ ಮೂರು ಸ್ಥಾನಗಳನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಬಿಜೆಪಿ ಮೂಲಗಳು ದಿ ನ್ಯೂಇಂಡಿಯನ್ ಎಕ್ಸ ಪ್ರೆಸ್ ಗೆ ತಿಳಿಸಿವೆ.

ಬೀದರ್, ಬೆಳಗಾವಿ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಉತ್ತರ ಮತ್ತು ಇತರ ಕೆಲವು ಕ್ಷೇತ್ರಗಳ ಬಿಜೆಪಿ ಸಂಸದರಿಗೆ ಟಿಕೆಟ್ ಸಿಗದಿರಬಹುದು ಎಂದು ಮೂಲಗಳು ತಿಳಿಸಿವೆ. ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕರ್ನಾಟಕದಿಂದ ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದೆ. ಕೆಲವು ದಶಕಗಳ ಹಿಂದೆ ಪ್ರೊಬೇಷನರಿ ಅಧಿಕಾರಿಯಾಗಿ ಚಿಕ್ಕೋಡಿಯಲ್ಲಿ ಕೆಲಸ ಮಾಡಿದ ಅವರು ತಾತ ಮತ್ತು ಅಜ್ಜಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು ಆದರೆ, ಅವರು ಕರ್ನಾಟಕದಿಂದ ಸ್ಪರ್ಧಿಸಲು ಉತ್ಸುಕರಾಗಿಲ್ಲ ಎಂದು ಹೇಳಲಾಗಿದೆ.

ಅಭ್ಯರ್ಥಿಗಳ ಗೆಲುವಿನ ಅಂಶದ ಬಗ್ಗೆ ಸಮೀಕ್ಷೆ ನಡೆಸಲಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಸಂಪರ್ಕ ಕಳೆದುಕೊಂಡ ಸಂಸದರಿಗೆ ಟಿಕೆಟ್ ನೀಡುವುದನ್ನು ಪಕ್ಷ ವಿರೋಧಿಸುತ್ತಿದೆ. ಸಂಸದರಾಗಿ ಅವರ ಸಾಧನೆಯನ್ನೂ ಪಕ್ಷದ ನಾಯಕತ್ವ ಪರಿಗಣಿಸಿದೆ.

ಈ ಅಂಶಗಳ ಹೊರತಾಗಿ ಪಕ್ಷವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಬಲ್ಲ ಹೊಸ ಮುಖಗಳನ್ನು ಪರಿಗಣಿಸಲಾಗುವುದು. ನಾವು ಮುಂದಿನ ಪೀಳಿಗೆಯ ನಾಯಕರನ್ನು ರೂಪಿಸುತ್ತಿದ್ದೇವೆ. ಕೆಲವು ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರು ತಮ್ಮ ಸಂಸದರ ಕಾರ್ಯವೈಖರಿಯಿಂದ ಸಂತುಷ್ಟರಾಗಿಲ್ಲ. ಇದನ್ನು ಕೂಡ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

SCROLL FOR NEXT