ಡಿಸಿಎಂ ಡಿಕೆ ಶಿವಕುಮಾರ್ ANI
ರಾಜಕೀಯ

ಲೋಕಸಭಾ ಚುನಾವಣೆ: ಮಾರ್ಚ್ 11ರ ಬಳಿಕ ಕಾಂಗ್ರೆಸ್ 2ನೇ ಪಟ್ಟಿ ಪ್ರಕಟ ಸಾಧ್ಯತೆ

ಮುಂಬರುವ ಲೋಕಸಭಾ ಚುನಾವಣೆಗೆ 39 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಸಂಜೆ ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿಯನ್ನು ಮಾರ್ಚ್ 11ರ ನಂತರ ಪ್ರಕಟ ಮಾಡುವ ನಿರೀಕ್ಷೆಯಿದೆ.

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ 39 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಸಂಜೆ ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿಯನ್ನು ಮಾರ್ಚ್ 11ರ ನಂತರ ಪ್ರಕಟ ಮಾಡುವ ನಿರೀಕ್ಷೆಯಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸೋಮವಾರ ಸ್ಕ್ರೀನಿಂಗ್ ಸಮಿತಿ ಸಭೆ ನಡೆಯಲಿದೆ. ತದನಂತರ ಎರಡನೇ ಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದೆ ಎಂದರು.

ಇನ್ನೂ ಹಲವರ ಹೆಸರುಗಳು ಸ್ಕ್ರೀನಿಂಗ್ ಸಮಿತಿಯ ಪರಿಶೀಲನೆಯಲ್ಲಿವೆ. ಸೋಮವಾರದ ಸಭೆಯಲ್ಲಿ ಮತ್ತಷ್ಟು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳಲಿದೆ ಎಂದು ತಿಳಿಸಿದರು.

ಸ್ಥಳೀಯ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸೋತಿರುವವರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯ ಆಲಿಸಿ, ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಮತ್ತೊಂದು ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT