ಬಿ.ಸಿ ಪಾಟೀಲ್ 
ರಾಜಕೀಯ

ನಾನು ಎಚ್ಚರಿಕೆ ಕೊಡ್ತಿಲ್ಲ, ಡಿಮ್ಯಾಂಡ್ ಮಾಡ್ತಿದ್ದೇನೆ; ತ್ಯಾಗ ಮಾಡಿ ಬಂದಿದ್ದೇನೆ, ಟಿಕೆಟ್ ನನಗೇ ಕೊಡ್ಬೇಕು: ಬಿ.ಸಿ ಪಾಟೀಲ್

ನಾವು ತ್ಯಾಗ ಮಾಡಿ ಬಂದವರು, ಈಗ ಮನೆಯಲ್ಲಿದ್ದೇವೆ. ನಮಗೆ ಹೆದರಿಸುವುದು, ಬೆದರಿಸುವುದು ಎಲ್ಲ ಗೊತ್ತಿಲ್ಲ.

ಹಾವೇರಿ: ನಾವು ತ್ಯಾಗ ಮಾಡಿ ಬಂದವರು, ಈಗ ಮನೆಯಲ್ಲಿದ್ದೇವೆ. ನಮಗೆ ಹೆದರಿಸುವುದು, ಬೆದರಿಸುವುದು ಎಲ್ಲ ಗೊತ್ತಿಲ್ಲ. ಟಿಕೆಟ್ ನನಗೆ ಕೊಡಬೇಕು ಎಂದು ಬಿ.ಸಿ.ಪಾಟೀಲ್ ಹಾವೇರಿ-ಗದಗ ಲೋಕಸಭೆ ಬಿಜೆಪಿ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದಾರೆ.

ಹಿರೇಕೆರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಮನೆಯಲ್ಲಿ ಕೂತುಕೊಂಡಿದ್ದೇವೆ. ನಮಗೆ ಹೆದರಿಸೋದು ಬೆದರಿಸೋದು ಗೊತ್ತಿಲ್ಲ. ಸೈಲೆಂಟ್ ಆಗಿ ಇದ್ದೀವಿ ಎಂದರೆ ಅದು ನಮ್ಮ ದೌರ್ಬಲ್ಯ ಎಂದು ಭಾವಿಸಬಾರದು. ಈಗಾಗಲೇ ಬೊಮ್ಮಾಯಿ ಸಿಎಂ ಆಗಿದ್ದಾರೆ. ನಾನು ಹಾವೇರಿ ಹಾಗೂ ಗದಗ ಜಿಲ್ಲೆಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದೇನೆ. ನನಗೆ ಟಿಕೆಟ್ ಕೊಡಬೇಕು ಎಂದು ಅವರು ಬೇಡಿಕೆ ಇಟ್ಟಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೇನೆ. ಹಾಗೆಂದು ನಾನು ಟಿಕೆಟ್ ಬೆನ್ನತ್ತಿಕೊಂಡು ಹೋಗುವವನಲ್ಲ. ನನಗೆ ಕೊಡಬೇಕು ಎಂದು ವಾದ ಮಾಡುತ್ತಿದ್ದೇನೆ. ಸಿಗಲಿಲ್ಲ ಎಂದರೆ ಕಾರ್ಯಕರ್ತರ ಜೊತೆ ಮಾತಾನಾಡುತ್ತೇನೆ. ನನಗೆ ನಂದೇ ಹಾದಿ ಇದೆ. ಹೆಬ್ಬಾರ್, ಎಸ್‍.ಟಿ ಸೋಮಶೇಖರ್ ಹಾದಿ ಬೇಕಾಗಿಲ್ಲ ಎಂದಿದ್ದಾರೆ.

ಯಡಿಯೂರಪ್ಪನವರೇ ಕಾಂತೇಶ್ ಜೊತೆ ನಿಂತು ಗೆಲ್ಲಿಸಿಕೊಂಡು ಬರೋದಾಗಿ ಮಾತುಕೊಟ್ಟಿದ್ದಾರೆ ಎಂಬ ಈಶ್ವರಪ್ಪ ಹೇಳಿಕೆ ವಿಚಾರವಾಗಿ, ಯಡಿಯೂರಪ್ಪನವರೇ ಆ ಮಾತು ಹೇಳಬೇಕಲ್ವಾ? ಅವರು ಹೇಳಿದರೆ ಆ ಪ್ರಕಾರ ನಡೆದುಕೊಳ್ಳಬೇಕಾಗುತ್ತೆ. ನಮಗೆ ಯಾವ ರೀತಿನೂ ಯಡಿಯೂರಪ್ಪ ಅವರು ಹೇಳಿಲ್ಲ. ನಾನು ಸೋತಿದ್ದೀನಿ, ಅವಕಾಶ ಕೊಡಿ ಗೆಲ್ತೀನಿ ಎಂದು ಕೇಳಿದ್ದೇನೆ. ಕಾಂತೇಶ್‍ಗೆ ಟಿಕೆಟ್ ಕೊಟ್ಟರೆ ವಿಚಾರ ಮಾಡುತ್ತೇನೆ. ಕಾಂತೇಶ್ ಅವರ ಬಗ್ಗೆ ಮಾತಾಡೋಕೆ ಹೋಗಲ್ಲ, ಕಾಂತೇಶ್‍ಗೂ ನನಗೂ ಸಂಬಂಧ ಇಲ್ಲ ಎಂದಿದ್ದಾರೆ.

ನಾನು ಎಲ್ಲಾ ಹೇಳಿದರೆ ನಿಮಗೆ ರುಚಿ ಉಳಿಯಲ್ಲ. ನಾನು ಎಚ್ಚರಿಕೆ ಕೊಡುತ್ತಿಲ್ಲ. ಒಬ್ಬ ಗ್ರಾಮ ಪಂಚಾಯತಿ ಸದಸ್ಯ ತನ್ನ ಸ್ಥಾನ ತ್ಯಾಗ ಮಾಡಲ್ಲ. ನಾವು ತ್ಯಾಗ ಮಾಡಿದ್ದೇವೆ. ನಮಗೆ ಟಿಕೆಟ್ ಕೊಡುವುದರಲ್ಲಿ ನ್ಯಾಯ ಇದೆ. ನಮ್ಮ ತ್ಯಾಗದಿಂದ ಸರ್ಕಾರ ಬಂತು. ಇನ್ನೂ 2023ರಲ್ಲಿ ಬಿಜೆಪಿ ಸೋತಿದೆ. ನಾವೆಲ್ಲಾ ಸೋತಿದ್ದೇವೆ, ಈಗ ನಮ್ಮ ಹಿತವನ್ನೂ ಅವರು ಕಾಯಲಿ. ಆ ಜವಾಬ್ದಾರಿ ಅವರಿಗೆ ಇದೆ ಅಲ್ವಾ? ಎಂದು ಪ್ರಶ್ನಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ