ಶ್ರೀರಾಮುಲು ಮತ್ತು ಜನಾರ್ಧನ ರೆಡ್ಡಿ 
ರಾಜಕೀಯ

'ಲೋಕ' ಸಮರಕ್ಕೆ ಬಳ್ಳಾರಿ ಸಜ್ಜು; ಪಕ್ಷದಿಂದ ಅಭ್ಯರ್ಥಿ ಕಣಕ್ಕೆ ಎಂದ ಗಾಲಿ ಜನಾರ್ಧನ ರೆಡ್ಡಿ; ಶ್ರೀರಾಮುಲು ಕಳವಳ!

ಮುಂಬರುವ ಲೋಕಸಭಾ ಸಭಾ ಚುನಾವಣೆಗೆ ಬಳ್ಳಾರಿ ಸಜ್ಜುಗೊಳ್ಳುತ್ತಿದ್ದು, ಈ ನಡುವಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ (ಕೆಆರ್‌ಪಿಪಿ) ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎಂಬ ಜನಾರ್ಧನ ರೆಡ್ಡಿಯವರ ಹೇಳಿಕೆ ಮಾಜಿ ಸಚಿವ ಹಾಗೂ ಬಿಜೆಪಿ ಲೋಕಸಭಾ ಟಿಕೆಟ್‌ ಆಕಾಂಕ್ಷಿ ಬಿ.ಶ್ರೀರಾಮುಲು ಅವರಲ್ಲಿ ಕಳವಳನ್ನುಂಟು ಮಾಡಿದೆ.

ಬಳ್ಳಾರಿ: ಮುಂಬರುವ ಲೋಕಸಭಾ ಸಭಾ ಚುನಾವಣೆಗೆ ಬಳ್ಳಾರಿ ಸಜ್ಜುಗೊಳ್ಳುತ್ತಿದ್ದು, ಈ ನಡುವಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ (ಕೆಆರ್‌ಪಿಪಿ) ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎಂಬ ಜನಾರ್ಧನ ರೆಡ್ಡಿಯವರ ಹೇಳಿಕೆ ಮಾಜಿ ಸಚಿವ ಹಾಗೂ ಬಿಜೆಪಿ ಲೋಕಸಭಾ ಟಿಕೆಟ್‌ ಆಕಾಂಕ್ಷಿ ಬಿ.ಶ್ರೀರಾಮುಲು ಅವರಲ್ಲಿ ಕಳವಳನ್ನುಂಟು ಮಾಡಿದೆ.

ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮಾಂತರದಿಂದ ಸ್ಪರ್ಧಿಸಿ ಸೋಲು ಕಂಡಿದ್ದ ಶ್ರೀರಾಮುಲು ಅವರು ಇದೀಗ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಆದರೆ, ಕೆಆರ್‌ಪಿಪಿ ಅಭ್ಯರ್ಥಿಯನ್ನು ನಿಲ್ಲಿಸಿದ್ದೇ ಆದರೆ, ಮತ ಹಂಚಿಕೆಯಾಗಬಹುದು. ಇದು ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಶ್ರೀರಾಮುಲು ಅವರು ಆಂತಕಗೊಂಡಿದ್ದಾರೆ.

ಹೀಗಾಗಿ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ರೆಡ್ಡಿ ಅವರಿಗೆ ಮನವರಿಕೆ ಮಾಡಿಕೊಡಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಬಳ್ಳಾರಿಯಿಂದ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಚರ್ಚಿಸಲು ರೆಡ್ಡಿ ಅವರು ಕಳೆದ ವಾರ ಸಭೆ ಕರೆದಿದ್ದರು ಎಂದು ಕೆಆರ್‌ಪಿಪಿ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ಕೆಆರ್‌ಪಿಪಿ ಆರಂಭಿಸಿದಾಗ ಶ್ರೀರಾಮುಲು ಅವರು ಬೆಂಬಲ ನೀಡದಿರುವ ಬಗ್ಗೆ ಸಭೆಯಲ್ಲಿ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಶ್ರೀರಾಮುಲು ಅವರು ಪಕ್ಷದ ಅಭ್ಯರ್ಥಿ ಮತ್ತು ರೆಡ್ಡಿ ಪತ್ನಿ ಅವರ ಅರುಣಾ ಲಕ್ಷ್ಮಿ ವಿರುದ್ಧ ಕೆಲಸ ಮಾಡಿದ್ದರು. ಈಗ ನಮ್ಮ ಸಹಾಯ ಅಪೇಕ್ಷಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಜನಾರ್ಧನ ರೆಡ್ಡಿ ಅವರು ತಮ್ಮ ರಾಜಕೀಯ ಜೀವನದ ಆರಂಭದಿಂದಲೂ ಶ್ರೀರಾಮುಲು ಅವರನ್ನು ಬೆಂಬಲಿಸಿದ್ದರು. ಆದರೆ, ಕಳೆದ ಕೆಲವು ವರ್ಷಗಳಿಂದ ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಸಮಸ್ಯೆಗಳನ್ನು ಎದುರಿಸುತ್ತಿದ್ದ ಸಂದರ್ಭದಲ್ಲಿ ಶ್ರೀರಾಮುಲು ರೆಡ್ಡಿ ಪರವಾಗಿ ನಿಲ್ಲಲಿಲ್ಲ. ಹೀಗಾಗಿ ಈ ಬಾರಿ ಚುನಾವಣೆಯಲ್ಲಿ ಬಳ್ಳಾರಿಯಲ್ಲಿ ನಮ್ಮ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಖಚಿತ ಎಂದು ಹೇಳಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ್ದರು. ಇದೀಗ ಶ್ರೀರಾಮುಲು ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವು ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ನಿಲ್ಲುವುದು ಹಾಗೂ ಮತಗಳನ್ನು ವಿಭಜಿಸುವ ರಾಜಕೀಯ ತಂತ್ರವಾಗಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ನಂತರ ಕೇಂದ್ರ ಎಚ್ಚರಿಕೆ

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

SCROLL FOR NEXT