ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ  
ರಾಜಕೀಯ

ಸಂವಿಧಾನ ಬದಲಾವಣೆ ಬಿಜೆಪಿಯ ರಹಸ್ಯ ಅಜೆಂಡಾ, ಇದು ನಡೆದರೆ ದೇಶದಲ್ಲಿ ರಕ್ತಪಾತವಾಗಲಿದೆ: ಸಿಎಂ ಸಿದ್ದರಾಮಯ್ಯ

Manjula VN

ಬೆಂಗಳೂರು: ಸಂವಿಧಾನ ಬದಲಾವಣೆ ಮಾಡುವುದು ಬಿಜೆಪಿಯವರ ರಹಸ್ಯ ಅಜೆಂಡಾ ಆಗಿದ್ದು, ಒಂದು ವೇಳೆ ಸಂವಿಧಾನ ಬದಲಾವಣೆ ಆಗಿದ್ದೇ ಆದರೆ, ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.

ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಅವರ ಸಂವಿಧಾನ ಬದಲಾವಣೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹೆಗಡೆ ಈ ರೀತಿ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದರು. ಪ್ರಧಾನಿ ಮೋದಿ ಅವರು ಪ್ರಧಾನಿಯಾಗಿದ್ದಾಗಲೇ ಹೆಗಡೆ ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದರು. ಆದರೆ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂವಿಧಾನ ಬದಲಾವಣೆ ಮಾಡುವುದು ಬಿಜೆಪಿಯವರ ರಹಸ್ಯ ಅಜೆಂಡಾ. ಸಂವಿಧಾನಕ್ಕೆ ಅನಗತ್ಯ ತಿದ್ದುಪಡಿತರಲಾಗಿದೆ. ಅವುಗಳನ್ನು ಸರಿಪಡಿಸಬೇಕು. ಅದಕ್ಕೆ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಹೆಗಡೆ ಹೇಳಿದ್ದಾರೆ. ಜನತೆಯಲ್ಲಿ ಮೂರನೇ ಎರಡರಷ್ಟು ಬಹುಮತ ಕೇಳಿರುವುದು ದೇಶದ ಉದ್ಧಾರಕ್ಕಲ್ಲ ಎಂದು ಕಿಡಿಕಾರಿದರು.

ಮನವಾದಿವನ್ನು ಸಮರ್ಥನೆ ಮಾಡಿಕೊಳ್ಳೋದು, ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಅನ್ನೋದು ಅವರ ಹಿಡನ್ ಅಜೆಂಡಾ. ಅದಕ್ಕೆ ಇಡೀ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು ಹಿಂದುಳಿದವರು ಎಲ್ಲರೂ ಅವರನ್ನು ವಿರೋಧ ಮಾಡುತ್ತಾರೆ. ಒಂದು ವೇಳೆ ಸಂವಿಧಾನ ಬದಲಾವಣೆಯ ಕೆಲಸ ಆದರೆ, ದೇಶದಲ್ಲಿ ರಕ್ತಪಾತವಾಗುತ್ತದೆ. ಆದ್ದರಿಂದ ಮೋದಿಯವರು ತಮ್ಮ ಈ ಯೋಚನೆಯನ್ನು ಅನಂತಕುಮಾರ್ ಅವರ ಮೂಲಕ ಹೇಳಿಸುತ್ತಿದ್ದಾರೆ ಎಂದು ತಿಳಿಸಿದರು.

ಅನಂತಕುಮಾರ್ ರವರ ಹೇಳಿಕೆ ವೈಯಕ್ತಿಕ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮಂತ್ರಿಮಂಡಲದಲ್ಲಿದ್ದಂತಹವರು ಹಾಗೂ ಹಾಲಿ ಸಂಸದರಾಗಿರುವ ಹಿರಿಯ ನಾಯಕರಾದ ಅನಂತಕುಮಾರ್ ರವರ ಹೇಳಿಕೆ ವೈಯಕ್ತಿಕವಾಗುತ್ತದೆಯೇ? ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲದೇ ಸುವಮನುಸ್ಮೃತಿಯ ತತ್ವಗಳನ್ನು ಜಾರಿಗೊಳಿಸುವ ಉದ್ದೇಶ ಹೊಂದಿದ್ದಾರೆ. ಆದರೆ ನಮ್ಮ ಸಂವಿಧಾನ ಸಮಸಮಾಜ ನಿರ್ಮಾಣದ ತತ್ವವನ್ನು ಹೊಂದಿದ್ದು, ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಜಿಲ್ಲೆಯ ಸಿದ್ದಾಪುರದ ಹಲಗೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಂಸದ ಅನಂತ್ ಕುಮಾರ್ ಹೆಗ್ಡೆ, 'ಸಂವಿಧಾನ ತಿದ್ದುಪಡಿ ಅವಶ್ಯಕತೆ ಇದೆ. ಕಾಂಗ್ರೆಸ್​​ನವರು ಸಂವಿಧಾನದಲ್ಲಿ ಬೇಡವಾದದನ್ನೆಲ್ಲ ಸೇರಿಸಿದ್ದಾರೆ. ಅದರ ತಿದ್ದುಪಡಿ ಮಾಡಬೇಕಿದೆ. ಲೋಕಸಭೆಯಲ್ಲಿ 400 ಸ್ಥಾನ ಗೆಲ್ಲಬೇಕು ಎಂದು ಪ್ರಧಾನಿ ಹೇಳಿದ್ದಾರೆ. 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂದು ಹೇಳಿದ್ದರು.

SCROLL FOR NEXT