ಗೃಹ ಸಚಿವ ಪರಮೇಶ್ವರ್ 
ರಾಜಕೀಯ

ಸಂವಿಧಾನದ ಬಗ್ಗೆ ಕೀಳಾಗಿ ಮಾತನಾಡುವ ಸಂಸದ ಅನಂತ್ ಕುಮಾರ್‌ ರನ್ನು ಪಕ್ಷದಿಂದ ಹೊರಹಾಕಲಿ:‌ ಗೃಹ ಸಚಿವ ಪರಮೇಶ್ವರ್

ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಪಕ್ಷದಿಂದ ಹೊರಹಾಕಲಿ ಎಂದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಿರುವ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಪಕ್ಷದಿಂದ ಹೊರಹಾಕಲಿ ಎಂದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಅಂಬೇಡ್ಕರ್ ಅವರನ್ನು ಪ್ರಧಾನಿ ಮೋದಿ ಮುಕ್ತ ಕಂಠದಿಂದ ಹೊಗಳಿದ್ದಾರೆ. ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಪ್ರಧಾನಮಂತ್ರಿ ಆಗುತ್ತಿರಲಿಲ್ಲ ಎಂದು ಹೇಳಿದ್ದಾರೆ. ಆದರೆ, ಅವರ ಪಕ್ಷದ ಸಂಸದರೊಬ್ಬರು ಪದೇ ಪದೇ ಸಂವಿಧಾನ ಬದಲಾವಣೆಯ ಮಾತುಗಳನ್ನು ಆಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು.

ಅನಂತಕುಮಾರ್ ಹೆಗಡೆ ಅವರ ಹೇಳಿಕೆಯಿಂದ ದೂರ ಇದ್ದೇವೆ ಎಂದು ಬಿಜೆಪಿ ನಾಯಕರು ಹೇಳಿದರೆ ಸಾಲದು, ಪಕ್ಷದಿಂದ ಹೊರಹಾಕಬೇಕು ಅಥವಾ ನಿಯಂತ್ರಿಸಬೇಕು.‌ ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸರಿಯಾದ ಅಭ್ಯರ್ಥಿಯೇ ಇಲ್ಲ ಎಂದು ಬಿಜೆಪಿಯವರು ಹೇಳಿಕೊಳ್ಳಬಹುದು.‌ ಆದರೆ, ಚುನಾವಣೆ ನಂತರ ವಾಸ್ತವಾಂಶ ಏನೆಂಬುದು ಗೊತ್ತಾಗಲಿದೆ. ಸಚಿವ ಎಚ್.ಸಿ.ಮಹದೇವಪ್ಪ ಅವರ ಸ್ಪರ್ಧೆಯ ಮಾತುಗಳು ಕೇಳಿಬರುತ್ತಿವೆ. ತನಗೆ ಟಿಕೆಟ್ ಬೇಡ, ಮಗನಿಗೆ ನೀಡುವಂತೆ ಮಹದೇವಪ್ಪ ಅವರು ಹೇಳುತ್ತಿದ್ದಾರೆ. ಅಂತಿಮ ತೀರ್ಮಾನ ಹೈಕಮಾಂಡ್ ಮಾಡಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT