ಜೆ.ಸಿ ಮಾಧುಸ್ವಾಮಿ ಮತ್ತು ವಿ. ಸೋಮಣ್ಣ
ಜೆ.ಸಿ ಮಾಧುಸ್ವಾಮಿ ಮತ್ತು ವಿ. ಸೋಮಣ್ಣ 
ರಾಜಕೀಯ

ತುಮಕೂರು ಲೋಕಸಭೆ ಕ್ಷೇತ್ರ: ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಒಡೆದ ಮನೆಯಾದ ಬಿಜೆಪಿ; ಪ್ರಚಾರ ಆರಂಭಿಸಿದ ಕಾಂಗ್ರೆಸ್!

Shilpa D

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಚಿವ ವಿ ಸೋಮಣ್ಣ ಅವರು ತುಮಕೂರು ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗುವ ಸಾಧ್ಯತೆ ಇರುವುದರಿಂದ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಅವರ ಬೆಂಬಲಿಗರು ತುಮಕೂರಿನಲ್ಲಿ ಪ್ರತಿಭಟನೆ ಮುಂದುವರೆಸಿದ್ದಾರೆ. ಇದರಿಂದ ತುಮಕೂರಿನಲ್ಲಿ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಮುನ್ನೆಲೆಗೆ ಬಂದಿದೆ.

ಸೋಮಣ್ಣ ವಿರುದ್ಧದ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಬಿವೈ ವಿಜಯೇಂದ್ರ ಅವರ ಬೆಂಬಲಿಗರು ಪಾಲ್ಗೊಂಡಿದ್ದರು. ಇದರಿಂದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ತುಮಕೂರು ಲೋಕಸಭೆ ಟಿಕೆಟ್ ಆಕಾಂಕ್ಷಿಯೂ ಆಗಿರುವ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಸೋಮಣ್ಣ ಹೊರಗಿನವರು ಎಂದು ಕರೆದಿದ್ದರು, ಇದಾದ ನಂತರ, ಕ್ಷೇತ್ರದ ಚಿಕ್ಕನಾಯಕನಹಳ್ಳಿ, ತಿಪಟೂರು ಮುಂತಾದ ಕಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಆರಂಭವಾಯಿತು.

ಮಾಧುಸ್ವಾಮಿ ಅವರನ್ನು ಬಿಜೆಪಿ ಕಣಕ್ಕಿಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರಧಾನಿ ನರೇಂದ್ರ ಮೋದಿ ಕೂಡ ವಾರಣಾಸಿಗೆ ಹೊರಗಿನವರು, 2014 ಮತ್ತು 2019 ರಲ್ಲಿ ಅವರು ಗೆದ್ದು 2024 ರಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದು ಸೋಮಣ್ಣ ವಾಗ್ದಾಳಿ ನಡೆಸಿದರು.

ಭಾನುವಾರ ಮಾಧುಸ್ವಾಮಿ ಅವರ ಸಹವರ್ತಿ ಮತ್ತು ಮಾಜಿ ಸಚಿವ ಸೊಗಡು ಶಿವಣ್ಣ ಅವರು ತಮ್ಮ ಬೆಂಬಲಿಗರ ಸಭೆ ನಡೆಸಿದರು. ಪಕ್ಷದ ಟಿಕೆಟ್‌ಗಾಗಿ ಬೆಂಬಲಿಸಲು ನಿರ್ಧರಿಸಲಾಯಿತು.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಹಾಲಿ ಸಂಸದ ಜಿ.ಎಸ್.ಬಸವರಾಜು ಸೋಮಣ್ಣ ಅವರ ಬೆಂಬಲಕ್ಕೆ ನಿಂತಿರುವುದರಿಂದ ಮಾಧುಸ್ವಾಮಿ ಮತ್ತು ಶಿವಣ್ಣ ಇಬ್ಬರೂ ಸೋಮಣ್ಣ ವಿರುದ್ಧ ತಿರುಗಿ ಬಿದ್ದಿದ್ದಾರೆ. ಯಡಿಯೂರಪ್ಪ ಅವರೊಂದಿಗೆ ದಶಕದ ಕಾಲ ಉತ್ತಮ ಬಾಂಧವ್ಯ ಹೊಂದಿದ್ದ ಬಸವರಾಜು ಇದೀಗ ಸೋಮಣ್ಣ ಜತೆ ಕೈ ಜೋಡಿಸಿದ್ದಾರೆ.

ಏತನ್ಮಧ್ಯೆ, ಶ್ರೀ ಸಿದ್ದಗಂಗಾ ಮಠದ ಮುಖ್ಯಸ್ಥ ಶ್ರೀ ಸಿದ್ದಲಿಂಗ ಸ್ವಾಮಿಗಳು ತಮ್ಮ ಸೋದರಸಂಬಂಧಿ ಮತ್ತು ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ.ಎಸ್.ಪರಮೇಶ್ ಅವರೊಂದಿಗೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ನವದೆಹಲಿಗೆ ಭೇಟಿ ನೀಡಿದ್ದರು ಎಂದು ಮೂಲಗಳು ತಿಳಿಸಿವೆ. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸೋಮಣ್ಣ ಅವರ ಪರವಾಗಿರುವುದರಿಂದ ಅವರಿಗೆ ಭೇಟಿ ಮಾಡಲು ಅವಕಾಶ ನೀಡಲಿಲ್ಲ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಪ್ರಚಾರ ಆರಂಭ

ಇದರ ನಡುವೆ ಕ್ಷೇತ್ರದಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ ಆರಂಭಿಸಿದ್ದಾರೆ. ಸೋಮವಾರ ಮಧುಗಿರಿ ತಾಲೂಕಿನ ದೊಡ್ಡದಲವಟ್ಟ ಗ್ರಾಮದ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಿಂದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಂಸದ ಎಸ್.ಪಿ.ಮುದ್ದನುಮೇಗೌಡ ಪ್ರಚಾರಕ್ಕೆ ಚಾಲನೆ ನೀಡಿದರು. ಅವರೊಂದಿಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಇದ್ದರು.

SCROLL FOR NEXT