ಜಯಪ್ರಕಾಶ್ ಹೆಗ್ಡೆ(ಸಂಗ್ರಹ ಚಿತ್ರ)
ಜಯಪ್ರಕಾಶ್ ಹೆಗ್ಡೆ(ಸಂಗ್ರಹ ಚಿತ್ರ) 
ರಾಜಕೀಯ

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಇಂದು ಕಾಂಗ್ರೆಸ್ ಸೇರ್ಪಡೆ

Sumana Upadhyaya

ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು ಮಂಗಳವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಜಯಪ್ರಕಾಶ್ ಹೆಗ್ಡೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗುವ ಸಾಧ್ಯತೆ ದಟ್ಟವಾಗಿದೆ. ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಉಡುಪಿ ಜಿಲ್ಲೆಯ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಯಪ್ರಕಾಶ್ ಹೆಗ್ಡೆ ಈ ಹಿಂದೆ ಸೇವೆ ಸಲ್ಲಿಸಿದ್ದರು. ಬಳಿಕ ಕಾಂಗ್ರೆಸ್ ಪಕ್ಷ ಸೇರಿ 2012ರಲ್ಲಿ ನಡೆದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದರು.

ಬಳಿಕ 2017ರಲ್ಲಿ ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿಗೆ ಸೇರಿಕೊಂಡಿದ್ದರು. ಬಿಜೆಪಿ ಸರಕಾರ ಇದ್ದಾಗ ಇವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಿತ್ತು. ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ವರದಿಯನ್ನು ಇತ್ತೀಚಿಗಷ್ಟೇ ಹೆಗ್ಡೆ ಸರಕಾರಕ್ಕೆ ಸಲ್ಲಿಸಿದ್ದರು.

SCROLL FOR NEXT