ಸಂಸದ ಅನಂತ್ ಕುಮಾರ್ ಹೆಗಡೆ 
ರಾಜಕೀಯ

ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ನಾಲಿಗೆ ಹರಿಬಿಟ್ಟ ಸಂಸದ ಅನಂತ್ ಕುಮಾರ್ ಹೆಗಡೆ!

ಸಂವಿಧಾನ ಬದಲಾವಣೆ ಮಾಡಬೇಕು ಎಂದು ಹೇಳಿಕೆ ನೀಡಿ ಮುಜುಗರಕ್ಕೊಳಗಾಗಿದ್ದ ಸಂಸದ ಅನಂತಕುಮಾರ್‌ ಹೆಗಡೆ ಅವರು, ಇದೀಗ ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.

ಬೆಂಗಳೂರು: ಸಂವಿಧಾನ ಬದಲಾವಣೆ ಮಾಡಬೇಕು ಎಂದು ಹೇಳಿಕೆ ನೀಡಿ ಮುಜುಗರಕ್ಕೊಳಗಾಗಿದ್ದ ಸಂಸದ ಅನಂತಕುಮಾರ್‌ ಹೆಗಡೆ ಅವರು, ಇದೀಗ ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಅಂಕೊಲಾ ತಾಲೂಕಿನ ಹಿಲ್ಲೂರು ಗ್ರಾಮದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, “ಆನೆ ಹೊಗಿದ್ದೆ ದಾರಿ ಎಂಬಂತೆ ನಾವು ಈರಬೇಕು. ಮಾಧ್ಯಮಗಳು ಏನೂ ಬೆಕಾದ್ರೂ ಬರೆದುಕೊಳ್ಳಲಿ. ಬೇಕಾದ ಬೇವರ್ಸಿಗಳು ಏನೂ ಬೇಕಾದ್ರೂ ವದರಾಡಲಿ” ಎಂದು ಹೇಳಿದ್ದಾರೆ.

ವಿವಾದ ಸೃಷ್ಟಿಯಾದರೂ ದೃಢವಾಗಿ ನಿಲ್ಲುವುದು ನಿಜವಾದ ನಾಯಕತ್ವ, ಪತ್ರಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಚರ್ಚೆಗೆ ಕಾರ್ಯಕರ್ತರು ತಲೆಕೆಡಿಸಿಕೊಳ್ಳಬಾರದು.

ಸಾಮಾಜಿಕ ಜಾಲತಾಣದಲ್ಲಿ ಬೇಕಾದ್ದು ಚರ್ಚೆ ಆಗಲಿ. ಆದರೆ, ನಿವೆಲ್ಲ ಇದಕ್ಕೆ ವಿಚಲಿತರಾಗಬಾರದು. ನೀವು ಯಾವುದೋ ಸಾಮಾನ್ಯ ಪಕ್ಷದ ಕಾಯರ್ತರಲ್ಲ. ದೇಶ ಆಡಳಿತ ಮಾಡುತ್ತಿರುವ ಪಕ್ಷದ ಕಾರ್ಯಕರ್ತರು. ಆನೆ ನಡೆದಿದ್ದೆ ದಾರಿ ಎಂಬಂತೆ ನಾವು ನಡಿಯಬೇಕು ಕಣ್ರಿ. ಆನೆ ನಡೆಯುತ್ತಿದ್ದರೆ ನಾಯಿಗಳು ಬೋಗಳುತ್ತಾ ಇರುತ್ತವೆ. ಆನೆ ನಡೆಯುತ್ತಿದ್ದರೆ ಯಾವಗಲಾದರೂ ನಾಯಿ ಕಡೆ ಗಮನ ಕೊಡುತ್ತಾ? ನಾಯಿಗಳಿಗೂ ಗೊತ್ತು ನಾವು ಎಷ್ಟೆ ಬೊಗಳಿದ್ರು ಆನೆಗೆ ಏನು ಮಾಡುವುದಕ್ಕೂ ಆಗಲ್ಲ. ನಾಯಿಗಳು ಬೋಗಳದೆ ಇದ್ರೆ ಆನೆ ಗಾಂಭೀರ್ಯಕ್ಕೆ ಬೆಲೆ ಇರಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT