ಲೋಕಸಭಾ ಚುನಾವಣೆ ನಿಮಿತ್ತ ಹಾಸನದಲ್ಲಿ ಇಂದು ನಡೆದ ಜೆಡಿಎಸ್ ಚುನಾವಣಾ ಪೂರ್ವಭಾವಿ ಸಭೆ
ಲೋಕಸಭಾ ಚುನಾವಣೆ ನಿಮಿತ್ತ ಹಾಸನದಲ್ಲಿ ಇಂದು ನಡೆದ ಜೆಡಿಎಸ್ ಚುನಾವಣಾ ಪೂರ್ವಭಾವಿ ಸಭೆ  
ರಾಜಕೀಯ

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮೂರು ಕ್ಷೇತ್ರಗಳಿಂದ ಸ್ಪರ್ಧೆ, ಹಾಸನದಲ್ಲಿ ಪ್ರಜ್ವಲ್ ರೇವಣ್ಣ: ಹೆಚ್ ಡಿ ಕುಮಾರಸ್ವಾಮಿ

Sumana Upadhyaya

ಹಾಸನ: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಟಿಕೆಟ್ ಹಂಚಿಕೆ ಈ ಬಾರಿ ಭಾರೀ ಸದ್ದು ಮಾಡುತ್ತಿದೆ. ಅದರಲ್ಲೂ ಕಳೆದ ಬಾರಿಯಂತೆ ಮಂಡ್ಯ ಕ್ಷೇತ್ರದ ಟಿಕೆಟ್ ಯಾರಿಗೆ ಸಿಗುತ್ತದೆ ಎಂದು ಕಳೆದ ಒಂದೆರಡು ತಿಂಗಳಿನಿಂದ ತೀವ್ರ ಕುತೂಹಲ ಮೂಡಿಸಿದೆ.

ಇದೀಗ ಟಿಕೆಟ್ ಹಂಚಿಕೆ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು ಯಾವುದೇ ಕ್ಷಣದಲ್ಲಿ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಸ್ಪರ್ಧಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಬಿಜೆಪಿ ಹೈಕಮಾಂಡ್, ಜೆಡಿಎಸ್​ಗೆ ಮೂರು ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ​ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಇಂದು ಹಾಸನದಲ್ಲಿ ಮಾತನಾಡಿರುವ ಅವರು, ಜೆಡಿಎಸ್ ಪಾಲಿಗೆ ಹಾಸನ, ಮಂಡ್ಯ ಮತ್ತು ಕೋಲಾರ ಕ್ಷೇತ್ರ ಸಿಕ್ಕಿದೆ ಎಂದು ಬಹಿರಂಗಪಡಿಸಿದರು.

ಹಾಸನದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಇಂದು ಭಾವುಕರಾಗಿ ಮಾತನಾಡಿದ ಕುಮಾರಸ್ವಾಮಿ, ನಾನು ಅಷ್ಟು ಬೇಗ ಸಾಯಲ್ಲ ನಿಮ್ಮ ಜೊತೆ ಇರುತ್ತೇನೆ. ಭಗವಂತ ನನಗೆ ಅಯಸ್ಸು ಕೊಡುತ್ತಾನೆ. ಜೆಡಿಎಸ್​ ಪಕ್ಷ ಉಳಿಸಿ ಎಂದರು. ಹಾಸನದಿಂದ ಪ್ರಜ್ವಲ್​ ರೇವಣ್ಣ ಸ್ಪರ್ಧೆ ಮಾಡುತ್ತಾರೆ. ಪ್ರಜ್ವಲ್ ಅಭ್ಯರ್ಥಿ ಅಲ್ಲ ಕುಮಾರಸ್ವಾಮಿ ಅಂದುಕೊಳ್ಳಿ. ಕುಮಾರಸ್ವಾಮಿ ಅಭ್ಯರ್ಥಿ ಎಂದು ತಿಳಿದು ಮತಹಾಕಿ ಎಂದು ಹೇಳಿದರು. ಈ ಮೂಲಕ ಹಾಸನದಿಂದ ಪ್ರಜ್ವಲ್ ರೇವಣ್ಣ​​ ಸ್ಪರ್ಧೆಯನ್ನು ಖಚಿತಪಡಿಸಿದರು.

SCROLL FOR NEXT