ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ 
ರಾಜಕೀಯ

ಖರ್ಗೆ ತವರು ಕಲಬುರಗಿಯಿಂದಲೇ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ಮೋದಿ ಚಾಲನೆ

Lingaraj Badiger

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 16 ರಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕಲಬುರಗಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ಮೂಲಕ ರಾಜ್ಯದಲ್ಲಿ ಬಿಜೆಪಿಯ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನೀಲ್ ಕುಮಾರ್ ಬುಧವಾರ ತಿಳಿಸಿದ್ದಾರೆ.

ಕಲಬುರಗಿ ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆಯಾಗಿದ್ದು, 2009 ಮತ್ತು 2014ರಲ್ಲಿ ಅಲ್ಲಿಂದಲೇ ಲೋಕಸಭೆಗೆ ಆಯ್ಕೆಯಾಗಿದ್ದರು ಮತ್ತು ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಉಮೇಶ್ ಜಾಧವ್ ವಿರುದ್ಧ ಸೋತಿದ್ದರು.

ಕಾಂಗ್ರೆಸ್ ಈ ಬಾರಿ 81 ವರ್ಷದ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ಕಲಬುರಗಿಯಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಅವರು ಮಾರ್ಚ್ 16 ರಂದು ಕಲಬುರಗಿಯಲ್ಲಿ ಮತ್ತು ಮಾರ್ಚ್ 18 ರಂದು ಶಿವಮೊಗ್ಗದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸುನೀಲ್ ಕುಮಾರ್ ಬಿಜೆಪಿ ರಾಜ್ಯ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

"ಮಾರ್ಚ್ 16 ರಂದು ಕಲಬುರಗಿಯ ಎನ್ ವಿ ಆಟದ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಶಿವಮೊಗ್ಗದ ಕಾರ್ಯಕ್ರಮವು ಮಾರ್ಚ್ 18 ರಂದು ಅಲ್ಲಮಪ್ರಭು ಮೈದಾನದಲ್ಲಿ ನಡೆಯಲಿದೆ." ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಕರ್ನಾಟಕ ಅತ್ಯಂತ ಪ್ರಮುಖ ರಾಜ್ಯವಾಗಿದೆ.

ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಒಟ್ಟು 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದುಕೊಂಡಿದೆ. ಅಲ್ಲದೆ ಬಿಜೆಪಿ ಬೆಂಬಲಿತ ಪಕ್ಷೇತ್ರ ಅಭ್ಯರ್ಥಿಯೂ ಗೆಲುವು ಸಾಧಿಸಿದ್ದರು.

SCROLL FOR NEXT