ಯದುವೀರ್ ಒಡೆಯರ್  
ರಾಜಕೀಯ

ಯದುವೀರ್ ಗೆ ಟಿಕೆಟ್- ಬದಲಾದ ಕಾಂಗ್ರೆಸ್ ರಣತಂತ್ರ: ಮೈಸೂರು -ಕೊಡಗು ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಒಕ್ಕಲಿಗ ಅಭ್ಯರ್ಥಿ!

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ನರಸಿಂಹರಾಜ ಒಡೆಯರ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಿನ್ನೆಲೆಯಲ್ಲಿ ಕೇಸರಿ ಪಕ್ಷವನ್ನು ಮಣಿಸಲು ಕಾಂಗ್ರೆಸ್ ತನ್ನ ತಂತ್ರಗಾರಿಕೆ ರೂಪಿಸಲು ಮುಂದಾಗಿದೆ.

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ನರಸಿಂಹರಾಜ ಒಡೆಯರ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಿನ್ನೆಲೆಯಲ್ಲಿ ಕೇಸರಿ ಪಕ್ಷವನ್ನು ಮಣಿಸಲು ಕಾಂಗ್ರೆಸ್ ತನ್ನ ತಂತ್ರಗಾರಿಕೆ ರೂಪಿಸಲು ಮುಂದಾಗಿದೆ.

ಮೈಸೂರು-ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳೆರಡನ್ನೂ ಮರಳಿ ಗೆಲ್ಲಲೇಬೇಕೆಂಬ ಒತ್ತಡದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಭಾಗದ ಮುಖಂಡರು ಹಾಗೂ ಸಚಿವರೊಂದಿಗೆ ಚಿಂತನ ಮಂಥನ ನಡೆಸಿದರು. ರಾಜಮನೆತನದ ವರ್ಚಸ್ಸು ಕೇಸರಿ ಪಕ್ಷಕ್ಕೆ ಲಾಭ ತಂದುಕೊಡುತ್ತದೆ ಎಂಬ ಕಾರಣದಿಂದ ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ತನ್ನ ಕಾರ್ಯತಂತ್ರದ ವಿಧಾನವನ್ನು ಮರುಸೃಷ್ಟಿಸುತ್ತಿದೆ.

ರಾಜಮನೆತನವು ಜನರೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಹೊಂದಿದೆ, ಹೀಗಾಗಿ ಟಿಕೆಟ್ ನಿರಾಕರಿಸಿದ ಪ್ರಬಲ ಒಕ್ಕಲಿಗ ಸಮುದಾಯವನ್ನು ಮತ್ತೆ ಗೆಲ್ಲಲು ಕಾಂಗ್ರೆಸ್ ಬಯಸಿದೆ. ಮೈಸೂರು-ಕೊಡಗು ವಿಧಾನಸಭಾ ಕ್ಷೇತ್ರಕ್ಕೆ ಪಕ್ಷವು ಒಕ್ಕಲಿಗ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದು, ಎಲ್ಲಾ ರಾಜಕೀಯ ಬೆಳವಣಿಗೆಗಳು ಮತ್ತು ಕೆಲವು ಅಂಶಗಳನ್ನು ಗಮನಿಸಿದ ನಂತರ ಅಧಿಕೃತ ಘೋಷಣೆ ಮಾಡಲಿದೆ.

ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳೆರಡರಲ್ಲೂ ಅಂತಿಮ ತೀರ್ಮಾನ ಕೈಗೊಳ್ಳಲು ಸಿದ್ದರಾಮಯ್ಯ ಅವರಿಗೆ ಪಕ್ಷದ ಹೈಕಮಾಂಡ್ ಅಧಿಕಾರ ನೀಡಿರುವುದರಿಂದ ಮುಖಂಡರು ಹಾಗೂ ಸ್ಥಳೀಯ ಶಾಸಕರೊಂದಿಗೆ ಅಂತಿಮ ಸುತ್ತಿನ ಮಾತುಕತೆ ನಡೆಸಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತಿತರರು ಪ್ರತಿಸ್ಪರ್ಧಿ ಪಕ್ಷಗಳಲ್ಲಿರುವ ಪ್ರಮುಖ ಒಕ್ಕಲಿಗ ನಾಯಕರ ಸಂಪರ್ಕದಲ್ಲಿದ್ದು, ಬಿಜೆಪಿ ಪಾಳಯದಲ್ಲಿನ ಭಿನ್ನಾಭಿಪ್ರಾಯದ ಲಾಭ ಪಡೆಯಲು ಬಯಸಿದ್ದಾರೆ. ಸಿದ್ದರಾಮಯ್ಯ ಎರಡು ದಿನಗಳ ಭೇಟಿಗಾಗಿ ಮೈಸೂರಿಗೆ ಆಗಮಿಸಿದ್ದು, ಭಾನುವಾರ ಕಾಂಗ್ರೆಸ್ ಪಟ್ಟಿ ಹೊರಬೀಳಲಿದ್ದು, ಅಭ್ಯರ್ಥಿಯನ್ನು ಅಂತಿಮಗೊಳಿಸಲು ಸರಣಿ ಸಭೆ ನಡೆಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT