ಯಡಿಯೂರಪ್ಪ
ಯಡಿಯೂರಪ್ಪ 
ರಾಜಕೀಯ

ಪಕ್ಷದ ವಿರುದ್ಧ ಈಶ್ವರಪ್ಪ ಬಂಡಾಯ ಬೆನ್ನಲ್ಲೇ ಡ್ಯಾಮೇಜ್ ಕಂಟ್ರೋಲ್'ಗೆ BSY ಮುಂದು!

Manjula VN

ಬೆಂಗಳೂರು: ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಪಕ್ಷದ ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಅವರು ಬಂಡಾಯವೆದ್ದಿದ್ದು, ಈ ನಡುವಲ್ಲೇ ಡ್ಯಾಮೇಜ್ ಕಂಟ್ರೋಲ್'ಗೆ ಯಡಿಯೂರಪ್ಪ ಅವರು ಮುಂದಾಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಮಾಧಾನಗೊಂಡಿರುವ ನಾಯಕರನ್ನು ಸಮಾಧಾನಪಡಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರ.

ಪಕ್ಷದ ಮುಖಂಡರು ಈಶ್ವರಪ್ಪ ಸೇರಿದಂತೆ ಇತರೆ ಬಂಡಾಯ ನಾಯಕರೊಂದಿಗೆ ಮಾತುಕತ ನಡೆಸುತ್ತಿದ್ದಾರೆ. ಒಂದೆರಡು ದಿನಗಳಲ್ಲಿ ಬಂಡಾಯದ ಬೆಂಕಿ ಶಮನಗೊಳ್ಳಲಿದೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಲಾಗಿದ್ದು, ದೇಶಾದ್ಯಂತ ಬಿಜೆಪಿ ಪರ ಅಲೆ ಇದೆ. ಪ್ರಧಾನಿ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ರಾಜ್ಯದಲ್ಲಿ 25-26 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

ಎಸ್‌ಸಿ/ಎಸ್‌ಟಿ, ಹಿಂದುಳಿದ ವರ್ಗಗಳು ಮತ್ತು ಯುವಕರತ್ತ ಹೆಚ್ಚಿನ ಗಮನ ನೀಡುವಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಮೋದಿ ನಿರ್ದೇಶನ ನೀಡಿದ್ದಾರೆ. ಅದರಂತೆ ನಾಯಕರು ಈಗಿನಿಂದಲೇ ಪ್ರಚಾರ ಆರಂಭಿಸಲಿದ್ದಾರೆ ಎಂದು ಹೇಳಿದರು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಮಾತನಾಡಿ, ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿದ್ದಕ್ಕೆ ಈಶ್ವರಪ್ಪ ಅಸಮಾಧಾನಗೊಂಡಿರಬಹುದು. ಪಕ್ಷ ಅವರನ್ನು ಸಮಾಧಾನಪಡಿಸಲಿದೆ ಎಂದು ಹೇಳಿದರು.

ಈಶ್ವರಪ್ಪ ಅವರೊಂದಿಗೆ ರಾಷ್ಟ್ರೀಯ ಮತ್ತು ಸ್ಥಳೀಯ ನಾಯಕರು ಈಗಾಗಲೇ ಮಾತುಕತೆ ಆರಂಭಿಸಿದ್ದಾರೆ. ನಾನೂ ಶೀಘ್ರದಲ್ಲೇ ಈಶ್ವರಪ್ಪ ಅವರನ್ನು ಭೇಟಿ ಮಾಡುತ್ತೇನೆ. ಈಶ್ವರಪ್ಪ ಅವರು ಪಕ್ಷದಲ್ಲಿ ಹಿರಿಯ ನಾಯಕರಾಗಿದ್ದು, ಮಗನಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಸ್ವತಂತ್ರರಾಗಿ ಚುನಾವಣೆಗೆ ಸ್ಪರ್ಧಿಸುವ ಯೋಚನೆ ಮಾಡಬಾರದು. ಟಿಕೆಟ್ ನಿರಾಕರಿಸಿದಾಗ ಪ್ರತಿಯೊಬ್ಬರೂ ಅಸಮಾಧಾನಗೊಳ್ಳುವುದು ಸಾಮಾನ್ಯ. ಈ ಬಗ್ಗೆ ಪಕ್ಷದ ವರಿಷ್ಠರು ಸಮಸ್ಯೆಯನ್ನು ಪರಿಹರಿಸುತ್ತಾರೆ ಎಂದು ತಿಳಿಸಿದರು.

SCROLL FOR NEXT