ಜೆಡಿಎಸ್ 
ರಾಜಕೀಯ

ಮೈಸೂರು: ಯದುವೀರ್ ಗೆಲುವಿಗೆ ಶ್ರಮಿಸಲು ಜೆಡಿಎಸ್ ಶಪಥ!

ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಜೆಡಿಎಸ್ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆಲುವಿಗೆ ಶ್ರಮಿಸಲಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಶನಿವಾರ ಹೇಳಿದರು.

ಮೈಸೂರು: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಜೆಡಿಎಸ್ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆಲುವಿಗೆ ಶ್ರಮಿಸಲಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಶನಿವಾರ ಹೇಳಿದರು,

ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭದಲ್ಲಿ ನಾವು ನಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ಮೈತ್ರಿ ಅಭ್ಯರ್ಥಿಯಾಗಿರುವ ಕಾರಣ ಒಗ್ಗಟ್ಟು ಕಾಪಾಡಿಕೊಂಡು ಮೈಸೂರು ಮತ್ತು ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಜನಬೆಂಬಲ ದೊರಕುವಂತೆ ಮಾಡಬೇಕು. 2014 ಮತ್ತು 2019ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದರು. ಕಳೆದ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ಸಗರು ಬೆನ್ನಿಗೆ ಚೂರಿ ಹಾಕಿದ್ದರಿಂದ ಬಿಜೆಪಿಗೆ ಮತ ನೀಡಿದರು. ಮಂಡ್ಯದಲ್ಲಿ ಮಾಡಿಜ ಕೆಲಸ ಮೈಸೂರು ಕ್ಷೇತ್ರದಲ್ಲಿ ನಡೆಯಲಿದೆ ಎಂದ ಎಚ್ಚರಿಕೆ ನೀಡಲಾಗಿತ್ತು. ಹೀಗಿದ್ದರೂ ಪರಿಗಣಿಸದ ಕಾರಣ ಮತದಾನದ ದಿನದಂದು ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಬೆಂಬಲಿಸಿ ಮತಚಲಾವಣೆ ಮಾಡಿದ್ದರು ಎಂದು ಹೇಳಿದರು.

ಮೋದಿ, ದೇವೇಗೌಡ, ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಯವರು ನೀಡಿದ ಕೊಡುಗೆಗೆ ಕೊಡುಗೆ ನೀಡಬೇಕೆಂಬ ಕಾರಣಕ್ಕೆ ಯದುವೀರ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಯದವೀರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಹಾಕುವುದಿಲ್ಲವೆಂದು ಭಾವಿಸಿದ್ದೆವು. ಆದರೆ, ಅಭ್ಯರ್ಥಿ ಹಾಕುತ್ತಿದ್ದಾರೆ. ನಾವು ಯದುವೀರ್ ಅವರನ್ನು ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆಂದು ಹೇಳಿದರು.

ಮೈಸೂರು ಭಾಗದಲ್ಲಿ ಮಹಾರಾಜರ ವಂಶಸ್ಥರ ನಾಡಿಗೆ ನೀಡಿದೆ ಕೊಡುಗೆ ಅಪಾರವಿದೆ. ಹೀಗಾಗಿ ಜನರು ಈ ಬಾರಿ ಹೆಚ್ಚಿನ ಮತಗಳಿಂದ ಯದುವೀರ್ ಅವರನ್ನು ಗೆಲ್ಲಿಸುತ್ತಾರೆ. ಬಿಜೆಪಿ ಅಭ್ಯರ್ಥಿ ರಾಜವಂಶಸ್ಥರು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಯುವ ನಾಯಕರಾಗಿದ್ದು, ಇಂತಹ ವ್ಯಕ್ತಿಗಳು ಪಾರ್ಲಿಮೆಂಟ್​​ನಲ್ಲಿ ಇದ್ದರೆ ಚೆಂದ. ರಾಜ್ಯದಲ್ಲೇ ಮೈಸೂರು - ಕೊಡಗು ಕ್ಷೇತ್ರವನ್ನು ಅಭಿವೃದ್ಧಿ ಮಾಡಬೇಕು ಎನ್ನುವುದು ಅವರ ಬಹುದೊಡ್ಡ ಕನಸು ಇದೆ. ಅದನ್ನು ಅವರು ಗೆದ್ದು ನೆರವೇರಿಸುತ್ತಾರೆ ಎಂದು ಹೇಳಿದರು.

ಹಿಂದೆ ಬಿಜೆಪಿ ಒಂದೇ ಇತ್ತು, ಈ ಬಾರಿ ಜೆಡಿಎಸ್ ಕುಮಾರಣ್ಣನವರ ಕಾರ್ಯಕರ್ತರು ನಿಮ್ಮ ಗೆಲುವಿಗೆ ಶ್ರಮಿಸಲಿದ್ದಾರೆ. ಹಿಂದಿನ ಹತ್ತು ವರ್ಷಗಳಲ್ಲಿ ಸಂಸದರಾದಂತಹ ಪ್ರತಾಪ ಸಿಂಹ ಅವರು ಮಾಡಿರುವ ಹತ್ತಾರು ಜನಪರ ಕೆಲಸ, ಕೇಂದ್ರದಿಂದ ತಂದಿರುವ ಅನೇಕ ಯೋಜನೆಗಳು ನಿಮ್ಮ ಜೊತೆಯಲ್ಲಿ ಇವೆ. ಹೀಗಾಗಿ ಈ ಸಲ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್​​ ಹೆಚ್ಚು ಅಂತರದಿಂದ ಸುಲಭವಾಗಿ ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯದ ಸಾಲವನ್ನು ಕಾಂಗ್ರೆಸ್ ಹೆಚ್ಚಿಸಿದ್ದು, ಜನರು ಭಿನ್ನಾಭಿಪ್ರಾಯಗಳನ್ನು ಅರಿತು ರಾಜಮನೆತನವನ್ನೇ ಏಕೆ ಬೆಂಬಲಿಸಬೇಕು ಎಂಬುದನ್ನು ವಿಶ್ಲೇಷಿಸಬೇಕು ಎಂಬುದನ್ನು ನಿರ್ಧರಿಸಲಿ ಎಂದರು,

ಎಂಎಲ್ಸಿ ಮಂಜೇಗೌಡ ಮಾತನಾಡಿ, ಜನರು ರಾಜಮನೆತನವನ್ನು ಬಾಹೂ ಯುವ ಪೀಳಿಗೆಯನ್ನು ಖಂಡಿತವಾಗಿಯೂ ಪ್ರೋತ್ಸಾಹಿಸುತ್ತಾರೆಂಬ ವಿಶ್ವಾಸವಿದೆ. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಕಾಂಗ್ರೆಸ್ ಪಕ್ಷವನ್ನು ಸೋಲಿಸಲೇಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT