ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ 
ರಾಜಕೀಯ

ಕರ್ನಾಟಕದ ಜನರ ಚಿತ್ತ ಬಿಜೆಪಿಯತ್ತ: ಲೋಕಸಭೆ ಚುನಾವಣೆ ಕುರಿತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

Ramyashree GN

ಬೆಂಗಳೂರು: ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿರುವ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾನುವಾರ ಕಾಂಗ್ರೆಸ್ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದ್ದು, ರಾಜ್ಯದಾದ್ಯಂತ ಜನರ ಚಿತ್ತ ಬಿಜೆಪಿ ಪರವಾಗಿದೆ ಎಂದು ಹೇಳಿದ್ದಾರೆ.

'ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹುಡುಕಲು ಸಾಧ್ಯವಾಗುತ್ತಿಲ್ಲ. ಅವರು ತಮ್ಮ ಸಚಿವರನ್ನೇ ಚುನಾವಣೆಗೆ ಸ್ಪರ್ಧಿಸುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಅದೃಷ್ಟವಶಾತ್, ರಾಜ್ಯದ ಜನರ ಚಿತ್ತ ಬಿಜೆಪಿ ಮತ್ತು ಪ್ರಧಾನಿ ಮೋದಿಯವರತ್ತ ಇದೆ' ಎಂದು ಹೇಳಿದ್ದಾರೆ.

ಕರ್ನಾಟಕವು 28 ಲೋಕಸಭಾ ಸ್ಥಾನಗಳನ್ನು ಹೊಂದಿದೆ. 28 ಕ್ಷೇತ್ರಗಳಲ್ಲಿ 2019ರಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದು ಶೇ 51.7 ರಷ್ಟು ಮತಗಳನ್ನು ಗಳಿಸಿತು. 32.1 ರಷ್ಟು ಮತ ಹಂಚಿಕೆಯೊಂದಿಗೆ ಕಾಂಗ್ರೆಸ್ 1 ಸ್ಥಾನವನ್ನು ಗೆದ್ದರೆ, ಜೆಡಿಎಸ್ ಮತ್ತು ಸ್ವತಂತ್ರ ಅಭ್ಯರ್ಥಿ ತಲಾ ಒಂದು ಸ್ಥಾನವನ್ನು ಗೆದ್ದಿದ್ದಾರೆ.

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೇ 4 ಮತ್ತು ಏಪ್ರಿಲ್ 26 ರಂದು ಎರಡು ಹಂತಗಳಲ್ಲಿ ನಡೆಯಲಿದೆ.

ಲೋಕಸಭೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆಯ ದಿನಾಂಕಗಳನ್ನು ಘೋಷಿಸಿದ್ದು, ಶನಿವಾರದಿಂದಲೇ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಗೆ ಬಂದಿದೆ. ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅವುಗಳ ನಾಯಕರು ಚುನಾವಣಾ ಸಂಹಿತೆಗೆ ಬದ್ಧರಾಗಿರುವಂತೆ ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಕೇಳಿದರು.

543 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಎಣಿಕೆ ನಡೆಯಲಿದೆ. ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭೆಗಳಿಗೂ ಇದೇ ಅವಧಿಯಲ್ಲಿ ಚುನಾವಣೆ ನಡೆಯಲಿದೆ.

SCROLL FOR NEXT