ಕೆಎಸ್ ಈಶ್ವರಪ್ಪ
ಕೆಎಸ್ ಈಶ್ವರಪ್ಪ 
ರಾಜಕೀಯ

ನನ್ನ ನಿಲುವಲ್ಲಿ ಬದಲಾವಣೆಯಿಲ್ಲ, ಬಸವೇಶ್ವರರ ಹೆಸರಿನಲ್ಲಿ ಜನರ ಬೆಂಬಲ ಕೇಳುತ್ತೇನೆ: ಕೆಎಸ್ ಈಶ್ವರಪ್ಪ

Manjula VN

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಮತ್ತೆ ಪುನರುಚ್ಚರಿಸಿದ್ದು, ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ, ಬಸವೇಶ್ವರರ ಹೆಸರಿನಲ್ಲಿ ಜನರ ಬೆಂಬಲ ಕೇಳುತ್ತೇನೆ ಎಂದು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಒಂದೇ ಕುಟುಂಬದ ಹಿಡಿತದಲ್ಲಿದ್ದು, ರಾಜ್ಯದಲ್ಲಿ ಕಾರ್ಯಕರ್ತರು ಅಕ್ಷರಶಃ ಸಂಕಷ್ಟದಲ್ಲಿದ್ದಾರೆ. ಪಕ್ಷವನ್ನು ರಕ್ಷಿಸುವ ಸಲುವಾಗಿ ಚುನಾವಣೆಯಲ್ಲಿ ಸ್ಪರ್ಧೆಗಿಳಿಯಲು ನಿರ್ಧರಿಸಿದ್ದೇನೆ. ಜಗಜ್ಯೋತಿ ಬಸವೇಶ್ವರ ಅವರ ಹೆಸರಿನಲ್ಲಿ ಮತದಾರರ ಬೆಂಬಲ ಕೋರುತ್ತೇನೆಂದು ಹೇಳಿದರು.

ಇದೇ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಅವರನ್ನು ನೇಮಕ ಮಾಡಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿದ ಈಶ್ವರಪ್ಪ, ‘ಲಿಂಗಾಯತರೂ ಆಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಕ್ಷದ ಹೈಕಮಾಂಡ್ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ನೀಡಬೇಕಿತ್ತು, ಒಕ್ಕಲಿಗರ ಮಟ್ಟಿಗೆ ಸಿ.ಟಿ.ರವಿ. ಹಿಂದುಳಿದ ವರ್ಗಕ್ಕೆ, ನನಗೆ ಸ್ಥಾನ ನೀಡಬೇಕಿತ್ತು. ಈ ಮೂವರಲ್ಲಿ ಒಬ್ಬರನ್ನು ಕರ್ನಾಟಕದಲ್ಲಿ ಪಕ್ಷದ ಮುಖ್ಯಸ್ಥರನ್ನಾಗಿ ಮಾಡಬೇಕಿತ್ತು. ಆದರೆ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಸ್ಥಾನ ನೀಡಲಾಯಿತು ಅಸಮಾಧಾನ ಹೊರಹಾಕಿದರು.

ಚುನಾವಣೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಜನರು ಬಂದು ನನ್ನ ಪರ ಪ್ರಚಾರ ನಡೆಸಲಿದ್ದಾರೆ. ಮಾರ್ಚ್ 15 ರಂದು ನಡೆದ ಸಮಾಲೋಚನಾ ಸಭೆಗೆ ಅಷ್ಟೊ ದೊಡ್ಡ ಮಟ್ಟದಲ್ಲಿ ಜನರು ಸೇರುತ್ತಾರೆಂದು ನಿರೀಕ್ಷಿಸಿರಲಿಲ್ಲ. ಇದು ಚುನಾವಣೆ ಎದುರಿಸಲು ನನಗೆ ಸ್ಫೂರ್ತಿ ನೀಡಿದೆ ಎಂದು ಹೇಳಿದರು.

SCROLL FOR NEXT