ರವಿಕುಮಾರ್ 
ರಾಜಕೀಯ

ನಾಳೆ ಪ್ರಧಾನಿ ಮೋದಿ ಶಿವಮೊಗ್ಗ ಭೇಟಿ: 2.5 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ಮುಖಂಡರು ಮತ್ತು ಜೆಡಿಎಸ್ ಮುಖಂಡರು ಈ ಕಾರ್ಯಕ್ರಮದ ವೇದಿಕೆಯಲ್ಲಿ ಇರುತ್ತಾರೆ ಎಂದು ತಿಳಿಸಿದರು.

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸುತ್ತಾರೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ ಮತ್ತು ಚಿಕ್ಕಮಗಳೂರಿನ ಅಭ್ಯರ್ಥಿಗಳು ವೇದಿಕೆ ಮೇಲೆ ಇರಲಿದ್ದಾರೆ. ಶಿವಮೊಗ್ಗದ ಸಂಸದ ಬಿ.ವೈ.ರಾಘವೇಂದ್ರ, ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ, ದಾವಣಗೆರೆಯ ಸಂಸದ ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ್, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ನಾಯಕ ಕೋಟ ಶ್ರೀನಿವಾಸ ಪೂಜಾರಿ ವೇದಿಕೆ ಮೇಲೆ ಇರುತ್ತಾರೆ. ಮಂಗಳೂರಿನ ಅಭ್ಯರ್ಥಿ ಬೃಜೇಶ್ ಚೌಟ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರಧಾನಿಯವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಸಿ.ಟಿ.ರವಿ, ಮಾಜಿ- ಹಾಲಿ ಶಾಸಕರು ವೇದಿಕೆಯಲ್ಲಿ ಇರುತ್ತಾರೆ ಎಂದರು. ವಿಶಿಷ್ಟ ಯೋಜನೆಯನ್ನು ಮಾಡಿದ್ದು, ಪ್ರಧಾನಿಯವರು ಬೃಹತ್ ಪೆಂಡಾಲ್‍ನಲ್ಲಿ ಜನರನ್ನು ವಾಹನದಲ್ಲಿ ವೀಕ್ಷಿಸುತ್ತ, ಕೈ ಬೀಸುತ್ತ ವೇದಿಕೆಗೆ ಬರುತ್ತಾರೆ ಎಂದು ವಿವರಿಸಿದರು.

ರಾಜ್ಯದಲ್ಲಿ 28ಕ್ಕೆ 28 ಸೀಟು ಗೆಲ್ಲುವುದರ ಕಡೆ ಪಕ್ಷ ಗಮನ ಕೊಡಲಿದೆ. ಸಾರ್ವಜನಿಕರು ಈ ಸಭೆಯನ್ನು ಯಶಸ್ವಿಯಾಗಿ ಮಾಡಬೇಕೆಂದು ಕೋರಿದರು. ವಿಕಸಿತ ಭಾರತ ಸಂಕಲ್ಪಕ್ಕೆ ಜನರು ಸ್ಪಂದಿಸಲು ಮನವಿ ಮಾಡಿದರು. ಇವತ್ತು ಹೋಗಿ ಈಶ್ವರಪ್ಪ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. ಅವರು ಕಾರ್ಯಕ್ರಮಕ್ಕೆ ಬರಲಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT