ಬಿ.ವೈ ವಿಜಯೇಂದ್ರ
ಬಿ.ವೈ ವಿಜಯೇಂದ್ರ 
ರಾಜಕೀಯ

ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ; ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ತೀವ್ರ ಕಿಡಿ

Manjula VN

ಬೆಂಗಳೂರು: ನಗರತ್​ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಘಟನೆ ಸಂಬಂಧ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ಹಲ್ಲೆ ಘಟನೆಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಮಾಡಿದ ಪ್ರಕರಣದ ನಂತರ ಇದೀಗ ಹನುಮಾನ್ ಚಾಲೀಸಾ ಹಾಡು ಹಾಕಿದ್ದಕ್ಕೆ ಹಲ್ಲೆ ನಡೆಸಲಾಗಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣವೇ ಕಾರಣ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಆಡಳಿತದ ತುಷ್ಟೀಕರಣ ನೀತಿಗಳು ಕರ್ನಾಟಕವನ್ನು ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ಹದಗೆಡುವ ಮೂಲಕ ಆಮೂಲಾಗ್ರ ಸ್ಥಿತಿಗೆ ತಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಹಿಂದೂಗಳು ಮತ್ತು ಹಿಂದೂ ಸಂಸ್ಥೆಗಳ ಮೇಲಿನ ಈ ದಾಳಿಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುತ್ತೇನೆ. ಅವರ ತುಷ್ಟೀಕರಣ ರಾಜಕಾರಣವು ಅನಾಗರಿಕರನ್ನು ರಾಜ್ಯದಲ್ಲಿ ಅಟ್ಟಹಾಸ ನಡೆಸಲು ಪ್ರೋತ್ಸಾಹಿಸಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕರ ಒತ್ತಡಕ್ಕೆ ಮಣಿಯದೆ ಈ ಕುರಿತು ಕ್ರಮ ಕೈಗೊಳ್ಳುವಂತೆ ಮತ್ತು ಸಮಾಜ ವಿರೋಧಿ ಅಂಶಗಳನ್ನು ಕೂಡಲೇ ಬಂಧಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

SCROLL FOR NEXT