ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ 
ರಾಜಕೀಯ

ದಕ್ಷಿಣ ಕನ್ನಡ: ಹಿಂದುತ್ವದ ಭದ್ರಕೋಟೆಯಲ್ಲಿ ಕಾಂಗ್ರೆಸ್ ತಂತ್ರ; ಬಿಜೆಪಿ ವಿರುದ್ಧ ಬಿಲ್ಲವ ಸಮುದಾಯದ ಪದ್ಮರಾಜ್‌ ಕಣಕ್ಕೆ!

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಹಾಗೂ ವಕೀಲ ಪದ್ಮರಾಜ್ ಆರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಪ್ರಬಲ ಬಿಲ್ಲವ ಸಮುದಾಯಕ್ಕೆ ಸೇರಿದ 53 ವರ್ಷದ ಪದ್ಮರಾಜ್ ಅವರು ಹಿರಿಯ ರಾಜಕಾರಣಿ ಬಿ ಜನಾರ್ಧನ ಪೂಜಾರಿಯವರ ಸಹವರ್ತಿಯಾಗಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಹಾಗೂ ವಕೀಲ ಪದ್ಮರಾಜ್ ಆರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಪ್ರಬಲ ಬಿಲ್ಲವ ಸಮುದಾಯಕ್ಕೆ ಸೇರಿದ 53 ವರ್ಷದ ಪದ್ಮರಾಜ್ ಅವರು ಹಿರಿಯ ರಾಜಕಾರಣಿ ಬಿ ಜನಾರ್ಧನ ಪೂಜಾರಿಯವರ ನಿಕಟವರ್ತಿಯಾಗಿದ್ದು, ಅವರ ಅಡಿಯಲ್ಲಿ ವಕೀಲರಾಗಿ ಅಭ್ಯಾಸ ಪ್ರಾರಂಭಿಸಿದ್ದರು.

ಪದ್ಮರಾಜ್ ಮತ್ತು ಬಿಲ್ಲವ ಸಮುದಾಯದವರೇ ಆದ ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ ಅವರು ಕಾಂಗ್ರೆಸ್ ಟಿಕೆಟ್‌ಗಾಗಿ ರೇಸ್‌ನಲ್ಲಿದ್ದರು. ಅಂತಿಮವಾಗಿ ಬಂಟ್ ಸಮುದಾಯಕ್ಕೆ ಸೇರಿದ ಬಿಜೆಪಿಯ ಕ್ಯಾಪ್ಟನ್ ಬ್ರಿಜೇಶ್ ಚೌಟಾ ವಿರುದ್ಧ ಪದ್ಮರಾಜ್ ಅವರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿತು. ಬ್ರಿಜೇಶ್ ಅವರಂತೆ ಪದ್ಮರಾಜ್ ಅವರಿಗೂ ಇದು ಮೊದಲ ಚುನಾವಣೆ. ಪದ್ಮರಾಜ್ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದರು. ಆದರೆ, ಪಕ್ಷವು ಮಾಜಿ ಶಾಸಕ ಜೆಆರ್ ಲೋಬೋ ಅವರನ್ನು ಆಯ್ಕೆ ಮಾಡಿತ್ತು. ಅವರು ಸೋತರು.

ಐತಿಹಾಸಿಕ ಕುದ್ರೋಳಿ ದೇವಸ್ಥಾನದೊಂದಿಗೆ ನಿಕಟ ಸಂಪರ್ಕ ಹೊಂದಿರುವ ಬಿಲ್ಲವ ಸಮುದಾಯದ ಪದ್ಮರಾಜ್ ಅವರನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿಯ ಪ್ರಮುಖ ಮತಬ್ಯಾಂಕ್ ಆಗಿರುವ ಬಿಲ್ಲವ ಸಮುದಾಯದ ಮತದಾರರನ್ನು ಸೆಳೆಯುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ ಎಂದು ಮೂಲಗಳು ತಿಳಿಸಿವೆ.

2019ರ ಲೋಕಸಭಾ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲ್ ವಿರುದ್ಧ ಬಂಟ್ ಸಮುದಾಯದ ಯುವಕ ಮಿಥುನ್ ರೈ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು. ಆದರೆ, ಅವರು 2.73 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದರು.

ಈ ಬಾರಿ ಕಣದಲ್ಲಿ ಬಂಟ್ (ಚೌಟ) ವರ್ಸಸ್ ಬಿಲ್ಲವ ಸಮುದಾಯದ ಸ್ಪರ್ಧೆ ಏರ್ಪಡುವಂತಾಗಿದ್ದು, ಈ ಮೂಲಕ ಕೇಸರಿ ಪಕ್ಷದ ಬಿಲ್ಲವ ಬೆಂಬಲಿಗರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಆಶಿಸುತ್ತಿದೆ. ಆದರೆ, ಬಿಜೆಪಿಯ ಸಾಂಪ್ರದಾಯಿಕ ಬೆಂಬಲಿಗರಾದ ಬಿಲ್ಲವ ಸಮುದಾಯ ಇದೀಗ ಕುರುಡಾಗಿ ಬಿಜೆಪಿಯನ್ನು ಬೆಂಬಲಿಸುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ಅವರು ತಮ್ಮ ಸಮುದಾಯದ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಬಿಲ್ಲವರನ್ನು ಒತ್ತಾಯಿಸಿದ ವೈರಲ್ ವಿಡಿಯೋ ಮತ್ತು ಹಿಂದುತ್ವದ ನಾಯಕ ಸತ್ಯಜಿತ್ ಸುರತ್ಕಲ್ ಮತ್ತು ಬಿಜೆಪಿ ನಡುವೆ ಸಂಬಂಧ ಹಳಸಿರುವುದನ್ನು ಅವರು ಉಲ್ಲೇಖಿಸಿದ್ದಾರೆ.

ಪಕ್ಷದ ವರಿಷ್ಠರು ವಾರದ ಹಿಂದೆ ಟಿಕೆಟ್ ಭರವಸೆ ನೀಡಿದ ಬೆನ್ನಲ್ಲೇ ಪದ್ಮರಾಜ್ ಜಿಲ್ಲೆಯಲ್ಲಿ ಈಗಾಗಲೇ ಮೊದಲ ಸುತ್ತಿನ ಪ್ರಚಾರ ಮುಗಿಸಿದ್ದಾರೆ. ಅವರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ ಮತ್ತು ಪ್ರಮುಖ ವ್ಯಕ್ತಿಗಳನ್ನು ಭೇಟಿ ಮಾಡುತ್ತಿದ್ದು, ಬೆಂಬಲ ಕೋರಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರಿನಲ್ಲಿ ಜನಿಸಿದ ಪದ್ಮರಾಜ್ ಅವರು ಜಾವಳಿಯಲ್ಲಿ 12ನೇ ತರಗತಿಯವರೆಗೆ ಓದಿದರು ಮತ್ತು ಬೆಳ್ತಂಗಡಿ ತಾಲ್ಲೂಕಿನ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಪದವಿ ಪಡೆದರು. ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಎಲ್‌ಎಲ್‌ಬಿ ನಂತರ, ಅವರು 1995 ರಲ್ಲಿ ಅಭ್ಯಾಸವನ್ನು ಪ್ರಾರಂಭಿಸಿದರು. ಅವರು ತಮ್ಮ ಎನ್‌ಜಿಒ ಗುರುಬೆಳದಿಂಗಳು ಫೌಂಡೇಶನ್ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT