ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ 
ರಾಜಕೀಯ

ಈ ಬಾರಿ ಚುನಾವಣೆಯಲ್ಲಿ ಸೋತರೇ... ನಾನು ಇದ್ದೂ ಸತ್ತಂತೆ: ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್

Ramyashree GN

ಮೈಸೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಸೋಲನುಭವಿಸಿದರೆ ಅದು ನನಗೆ ಇದ್ದು ಸತ್ತಂತೆಯೇ ಇರುತ್ತದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಶುಕ್ರವಾರ ಹೇಳಿದ್ದಾರೆ.

ಈ ಹಿಂದೆ ನಾಲ್ಕು ಬಾರಿ ಸ್ಪರ್ಧಿಸಿದ್ದೆ ಆದರೆ, ಮತದಾರರು ನನ್ನನ್ನು ಬೆಂಬಲಿಸಲಿಲ್ಲ. ಕಾಂಗ್ರೆಸ್ ನನ್ನನ್ನು ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ ಈ ಬಾರಿ ಟಿಕೆಟ್ ನೀಡಿದೆ. ಈ ಬಾರಿ ಮತ್ತೊಮ್ಮೆ ಸೋಲನುಭವಿಸಿದರೆ, ಅದು ನಾನು ಇದ್ದು ಸತ್ತಂತೆಯೇ ಇರುತ್ತದೆ ಎಂದು ಹೇಳಿದರು.

ಮೈಸೂರಿನಿಂದ ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಈ ಬಾರಿ ಟಿಕೆಟ್ ನಿರಾಕರಿಸಿದ್ದು, ರಾಜವಂಶಸ್ಥ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸಿದೆ.

10 ವರ್ಷ ಸಂಸದರಾಗಿದ್ದವರಿಗೆ ಟಿಕೆಟ್ ನಿರಾಕರಿಸಲಾಗಿದೆ. ನಾನು ಪ್ರತಾಪ್ ಸಿಂಹ ವಿರುದ್ಧ ಸ್ಪರ್ಧಿಸಲು ಬಯಸಿದ್ದೆ. ಆದರೆ, ಚುನಾವಣೆಗೂ ಮುನ್ನವೇ ಪ್ರತಾಪ್ ಸಿಂಹ ಸ್ಪರ್ಧೆಯಿಂದ ಹೊರಬಿದ್ದರು. ಬಿಜೆಪಿ ಪ್ರತಾಪ್ ಸಿಂಹಗೆ ಟಿಕೆಟ್ ನಿರಾಕರಿಸಿದ್ದಕ್ಕೆ ಕಾರಣ ನೀಡಬೇಕು. ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನಿರಾಕರಿಸಿದ್ದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಟೀಕಿಸಿದರು.

SCROLL FOR NEXT