ರಘು ಚಂದನ್ 
ರಾಜಕೀಯ

ಚಿತ್ರದುರ್ಗದಲ್ಲಿ ಬಿಜೆಪಿ ನಾಯಕರ ಬಂಡಾಯದ ಬೇಗುದಿ: ಸ್ವತಂತ್ರ ಸ್ಪರ್ಧೆಗೆ ರಘು ಚಂದನ್ ಸಜ್ಜು!

ಲೋಕಸಭೆ ಚುನಾವಣೆ ಟಿಕೆಟ್ ಘೋಷಣೆ ಬೆನ್ನಲ್ಲೆ ಬಿಜೆಪಿಯಲ್ಲಿ ಬಂಡಾಯದ ಬೇಗುದಿ ಹೆಚ್ಚಿದೆ. ಶಿವಮೊಗ್ಗ ಮತ್ತು ದಾವಣಗೆರೆ ನಂತರ ಪಕ್ಕದ ಚಿತ್ರದುರ್ಗದಲ್ಲಿ ಅಭ್ಯರ್ಥಿ ಘೋಷಣೆಗೂ ಮುನ್ನವೇ ಬಿಜೆಪಿ ಒಡೆದ ಮನೆಯಾಗಿದೆ.

ಚಿತ್ರದುರ್ಗ: ಲೋಕಸಭೆ ಚುನಾವಣೆ ಟಿಕೆಟ್ ಘೋಷಣೆ ಬೆನ್ನಲ್ಲೆ ಬಿಜೆಪಿಯಲ್ಲಿ ಬಂಡಾಯದ ಬೇಗುದಿ ಹೆಚ್ಚಿದೆ. ಶಿವಮೊಗ್ಗ ಮತ್ತು ದಾವಣಗೆರೆ ನಂತರ ಪಕ್ಕದ ಚಿತ್ರದುರ್ಗದಲ್ಲಿ ಅಭ್ಯರ್ಥಿ ಘೋಷಣೆಗೂ ಮುನ್ನವೇ ಬಿಜೆಪಿ ಒಡೆದ ಮನೆಯಾಗಿದೆ.

ರಾಜ್ಯದಲ್ಲಿ ಅತಿ ದೊಡ್ಡ ಎಸ್‌ಸಿ ಸಮುದಾಯಗಳಲ್ಲಿ ಒಂದಾಗಿರುವ ಭೋವಿ ಸಮುದಾಯವನ್ನು ಬಿಜೆಪಿ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಭೋವಿ ಸಮುದಾಯದವರು ಆರೋಪಿಸಿದ್ದಾರೆ. ಭೋವಿಗಳನ್ನು ಕೇವಲ ಮತದಾರರು ಎಂದು ಪರಿಗಣಿಸಲಾಗಿದ್ದು, ರಾಜಕೀಯ ಪಕ್ಷಗಳು ಅವರಿಗೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ ಎಂದು ದೂರಿದ್ದಾರೆ.

ಭೋವಿ ಜನಾಂಗದವರನ್ನು ನಡೆಸಿಕೊಳ್ಳುತ್ತಿರುವ ರೀತಿಯನ್ನು ಸರಿಪಡಿಸದಿದ್ದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡಕ್ಕೂ ತಕ್ಕ ಪಾಠ ಕಲಿಸಲು ಸಮಾಜ ಹಿಂದೇಟು ಹಾಕುವುದಿಲ್ಲ ಎಂದು ಭೋವಿ ಸಮಾಜದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅವರು, 12 ನೇ ಶತಮಾನದ ಸಮಾಜ ಸುಧಾರಕ ಬಸವೇಶ್ವರರು ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿ ತಮ್ಮ ಅನುಭವ ಮಂಟಪ ವಿಶ್ವದ ಮೊದಲ ಸಂಸತ್ತನ್ನು ರೂಪಿಸಿದ ತತ್ವಗಳನ್ನು ಸಮುದಾಯವು ಬಲವಾಗಿ ನಂಬುತ್ತದೆ ಎಂದು ಹೇಳಿದರು. ಭೋವಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳಿಗೆ ಇನ್ನೂ ಸಮಯವಿದೆ ಎಂದರು.

ಸಮುದಾಯದ ಅತಿ ಹೆಚ್ಚು ಮತದಾರರನ್ನು ಹೊಂದರುವ ಚಿತ್ರದುರ್ಗ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಬಂಜಾರ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಸಿದ್ದರಾಮಯ್ಯ ಸರ್ಕಾರ ರಚನೆಗೆ ಕಾರಣವಾದ ಪರಿಣಾಮಗಳನ್ನು ಬಿಜೆಪಿ ಮತ್ತು ಕಾಂಗ್ರೆಸ್ ಎರಡಕ್ಕೂ ಎಚ್ಚರಿಕೆ ನೀಡಿದರು.

ಸರ್ಕಾರವು ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸುಗಳನ್ನು ಅವೈಜ್ಞಾನಿಕ ರೀತಿಯಲ್ಲಿ ಜಾರಿಗೊಳಿಸಿದ ನಂತರ ರಾಜಕೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಲು ಭೋವಿ ಸಮುದಾಯ ಹಿಂಜರಿಯುವುದಿಲ್ಲ ಎಂದರು.

ಚಿತ್ರದುರ್ಗದಲ್ಲಿ ಎಂಸಿ ರಘು ಚಂದನ್ ಬಂಡಾಯ

ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಚಿತ್ರದುರ್ಗ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದ್ದು, ಇದರ ಬೆನ್ನಲ್ಲೇ ಚಿತ್ರದುರ್ಗದ ಪ್ರಬಲ ಆಕಾಂಕ್ಷಿ ಬಿಜೆಪಿ ಶಾಸಕ ಚಂದ್ರು ಪುತ್ರ ರಘು ಚಂದನ್ ತಮ್ಮ ಬೆಂಬಲಿಗರ ಜೊತೆ ಸಭೆ ನಡೆಸಿದ್ದಾರೆ. ಒಂದು ವೇಳೆ ಟಿಕೆಟ್ ಸಿಗದಿದ್ದರೆ ಪಕ್ಷೇತರರಾಗಿ ಸ್ಪರ್ಧಿಸುವ ಎಚ್ಚರಿಕೆ ನೀಡಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ 'ಸ್ವಾಭಿಮಾನಿ ಚಿತ್ರದುರ್ಗಕ್ಕೆ ರಘು ಚಂದನ್' ಹೆಸರಿನಲ್ಲಿ ಅಭಿಯಾನ ಆರಂಭವಾಗಿದೆ, ರಘು ಚಂದನ್ ಸ್ವತಂತ್ರ್ಯವಾಗಿ ಕಣಕ್ಕಿಳಿಯಲಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಚಿತ್ರದುರ್ಗ ಕ್ಷೇತ್ರದಲ್ಲಿ ಹೆಚ್ಚಿನ ಮತಗಳ ಅಂತರದಿಂದ ಗೆದ್ದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! Video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT