ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ  
ರಾಜಕೀಯ

ಲೋಕಸಭೆ ಚುನಾವಣೆ ನಂತರ ಸಿಎಂ ಬದಲಾವಣೆ?: ಅನುಮಾನಕ್ಕೆ ಎಡೆಮಾಡಿದ ಗುಬ್ಬಿ ಶಾಸಕರ ಹೇಳಿಕೆ!

Sumana Upadhyaya

ತುಮಕೂರು: ಲೋಕಸಭಾ ಚುನಾವಣೆ(Lok sabha Election) ಹೊಸ್ತಿಲಿನಲ್ಲೇ ಕಾಂಗ್ರೆಸ್ ನಲ್ಲಿ ಮತ್ತೊಮ್ಮೆ ಸಿಎಂ ಬದಲಾವಣೆ ಸದ್ದು ಮಾಡಿದೆ. ಇಂದು ಶನಿವಾರ ತಿಪಟೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಗುಬ್ಬಿ ಶಾಸಕ ಎಸ್ ಆರ್ ಶ್ರೀ‌ನಿವಾಸ್‌ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಪರ ಪ್ರಚಾರ ಭಾಷಣದ ವೇಳೆ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.

ಲೋಕಸಭೆ ಚುನಾವಣೆ ನಂತರ ಸಿಎಂ ಬದಲಾವಣೆ?: ರಾಜ್ಯದಲ್ಲಿ ಕಳೆದೊಂದು ವರ್ಷದಿಂದ ನಮ್ಮ ಸರ್ಕಾರ ಇದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲಿಸದಿದ್ದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ. ಈ ಹಿನ್ನೆಲೆ ಬಡವರ ಪರ ಕೆಲಸ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಉಳಿಸುವ ಕೆಲಸ ನಾವೆಲ್ಲ ಮಾಡಬೇಕು. ಎಲ್ಲಾ ಕಾರ್ಯಕರ್ತರು ಸಿದ್ದರಾಮಯ್ಯರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ವಿಚಾರ ಆಗಾಗ ಸದ್ದು ಮಾಡುತ್ತಲೇ ಇರುತ್ತದೆ. ಮುಖ್ಯಮಂತ್ರಿ ಹುದ್ದೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಅದರ ಜೊತೆ ಮೂರ್ನಾಲ್ಕು ಮಂದಿ ಸಚಿವರುಗಳು ಆಗಾಗ ಸಿಎಂ ಹುದ್ದೆ ಬಗ್ಗೆ ಹೇಳಿಕೆ ನೀಡುತ್ತಿರುತ್ತಾರೆ. ಇದೀಗ ಪಕ್ಷದ ಶಾಸಕರೇ ಈ ರೀತಿ ಹೇಳಿಕೆ ನೀಡಿರುವುದು ಹಲವು ಅನುಮಾನುಗಳಿಗೆ ಎಡೆಮಾಡಿಕೊಟ್ಟಿದೆ.

SCROLL FOR NEXT