ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ 
ರಾಜಕೀಯ

ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿರುವುದಕ್ಕೆ ಗ್ಯಾರಂಟಿ ಇಲ್ಲ: ಪ್ರಹ್ಲಾದ್ ಜೋಶಿ

Ramyashree GN

ಹುಬ್ಬಳ್ಳಿ: ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿರುವುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸದಾ ಗ್ಯಾರಂಟಿ ಮಾತುಗಳನ್ನಾಡುತ್ತಿದೆ. ಆದರೆ, ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉಳಿಯುವ ಭರವಸೆ ಇಲ್ಲ. ದಿನದಿಂದ ದಿನಕ್ಕೆ ರಾಜ್ಯ ಸರ್ಕಾರದ ಅಸ್ಥಿರತೆ ಹೆಚ್ಚಾಗುತ್ತಿದೆ. ಲೋಕಸಭೆ ಚುನಾವಣೆ ನಂತರ ಸರ್ಕಾರ ಅಸ್ತಿತ್ವದಲ್ಲಿರುವುದಿಲ್ಲ ಎಂದಿದ್ದಾರೆ.

ಕಾಂಗ್ರೆಸ್ 20 ಸ್ಥಾನಗಳನ್ನು ಗೆಲ್ಲದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕಾಗುತ್ತದೆ ಎಂಬ ಸುದ್ದಿ ಈಗಾಗಲೇ ಹರಿದಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಐದಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಿಲ್ಲ, ನಂತರ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಜೋಶಿ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇರದಿದ್ದರೆ, ಅದರ ಗ್ಯಾರಂಟಿಗಳು ಏನಾಗುತ್ತವೆ? ಎಂದು ಜೋಶಿ ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷದಲ್ಲಿ ಏನೂ ಸರಿಯಿಲ್ಲ. ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಶಿವಕುಮಾರ್ ಅವರನ್ನು ದೂರವಿಡುತ್ತಿದ್ದಾರೆ. ಶಿವಕುಮಾರ್ ಅವರನ್ನು ಕಾನೂನಾತ್ಮಕವಾಗಿ ಸಿಲುಕಿಸಲು ಸಿದ್ದರಾಮಯ್ಯ ಬಲೆ ಬೀಸಿದ್ದಾರೆ ಎಂದು ದೂರಿದರು.

SCROLL FOR NEXT