ರಾಧಾ ಮೋಹನ್‌ದಾಸ್ ಅಗರ್ವಾಲ್ -ಪ್ರತಾಪ್ ಸಿಂಹ 
ರಾಜಕೀಯ

ಮೈಸೂರು ಕ್ಷೇತ್ರದಲ್ಲಿ ಪ್ರತಾಪ್‌ ಸಿಂಹಗಿಂತ ಉತ್ತಮ ಅಭ್ಯರ್ಥಿ ಸಿಕ್ಕಿದ್ದಾರೆ: ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್

ಸಂಸದ ಪ್ರತಾಪ್‌ ಸಿಂಹ ಅವರಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ ತಪ್ಪಿರುವ ಬಗ್ಗೆ ಇನ್ನೂ ಜನರಲ್ಲಿ ಚರ್ಚೆಗಳು ನಡೆಯುತ್ತಿದ್ದು ಕಾರಣ ನಿಗೂಢವಾಗಿದೆ.

ಮೈಸೂರು: ಸಂಸದ ಪ್ರತಾಪ್‌ ಸಿಂಹ ಅವರಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ ತಪ್ಪಿರುವ ಬಗ್ಗೆ ಇನ್ನೂ ಜನರಲ್ಲಿ ಚರ್ಚೆಗಳು ನಡೆಯುತ್ತಿದ್ದು ಕಾರಣ ನಿಗೂಢವಾಗಿದೆ. ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪಿರುವ ಬಗ್ಗೆ ಇಂದು ಮೈಸೂರಿನಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್ ಪ್ರತಿಕ್ರಿಯೆ ನೀಡಿ, ಪ್ರತಾಪ್‌ಸಿಂಹಗೆ ಟಿಕೆಟ್‌ ತಪ್ಪಿದ್ದಕ್ಕೆ ನಿರ್ದಿಷ್ಟವಾದ ಕಾರಣ ಏನೂ ಇಲ್ಲ. ಮೈಸೂರು ಕ್ಷೇತ್ರದಲ್ಲಿ ಪ್ರತಾಪ್‌ ಸಿಂಹಗಿಂತ ಉತ್ತಮ ಅಭ್ಯರ್ಥಿ ಸಿಕ್ಕಿದ್ದಾರೆ ಎಂದು ಹೇಳಿದರು.

ನಮಗೆ ಮೈಸೂರು ಕ್ಷೇತ್ರದಲ್ಲಿ ಪ್ರತಾಪ್ ಸಿಂಹಗಿಂತಲೂ ಉತ್ತಮ ಅಭ್ಯರ್ಥಿ ಸಿಕ್ಕಿದ್ದಾರೆ. ಯದುವಂಶ ಸೇವೆ ಇಡೀ ದೇಶಕ್ಕೆ ಗೊತ್ತಿದೆ. ಈಗ ಅವರು ಪ್ರಜಾಪ್ರಭುತ್ವದ ಭಾಗ ಆಗಲು ಚುನಾವಣೆಗೆ ಬಂದಿದ್ದಾರೆ. ಇವರಿಂಗಿತಲೂ ಉತ್ತಮ ಅಭ್ಯರ್ಥಿ ಬೇಕಾ. ಯದುವೀರ್ ನಮ್ಮ ಸ್ಟಾರ್ ಕ್ಯಾಂಪೇನರ್. ಅವರನ್ನು ಎಲ್ಲಾ ಕಡೆಗಳಲ್ಲಿ ಬಳಸಿಕೊಳ್ಳುತ್ತೇವೆ ಎಂದು ಹೇಳಿದರು. ಈ ಮೂಲಕ ಪರೋಕ್ಷವಾಗಿ ಪ್ರತಾಪ್ ಸಿಂಹಗಿಂತ ಯದುವೀರ್ ಒಳ್ಳೆಯ ಅಭ್ಯರ್ಥಿ ಎನ್ನುವ ಅರ್ಥದಲ್ಲಿ ಹೇಳಿದರು.

ಪ್ರತಾಪ್ ಸಿಂಹ ಕೂಡ ನಮ್ಮ ಸ್ಟಾರ್ ಪ್ರಚಾರಕ. ಅದಕ್ಕಿಂತಲೂ ಅವರ ಬಗ್ಗೆ ಇನ್ನೇನೂ ಹೇಳಬೇಕು. ಪ್ರತಾಪ್​ ಸಿಂಹಗೆ ಸ್ಟಾರ್ ಪ್ರಚಾರಕ ಸ್ಥಾನವೇ ಕೊಟ್ಟಿದ್ದೇವೆ. ಇದ್ದಕ್ಕಿಂತ ಇನ್ನೇನು ಬೇಕು ಹೇಳಿ. ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದ್ದಕ್ಕೆ ನಿರ್ಧಿಷ್ಟವಾದ ಕಾರಣ ಏನು ಇಲ್ಲ ಎಂದರು.

ಇನ್ನು ರಾಜ್ಯ ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ಬಿಜೆಪಿಯಲ್ಲಿ ಯಾವುದೇ ಬಂಡಾಯ ಇಲ್ಲ. ಕೆ.ಎಸ್​​​.ಈಶ್ವರಪ್ಪ ನಮ್ಮ ಪಕ್ಷದ ದೊಡ್ಡ ನಾಯಕ. ಈಶ್ವರಪ್ಪ ಪ್ರಚಾರ ಶುರು ಮಾಡಿದ್ದಾರೆ. ಪ್ರಚಾರ ಮಾಡಲಿ ಬಿಡಿ, ಎಲ್ಲ ಸಮಸ್ಯೆ ಬಗೆಹರಿಯುತ್ತೆ. ಸಂಸದೆ ಸುಮಲತಾ ಅವರು ನಮ್ಮ ಪಕ್ಷದ ಬೆಂಬಲಿಗರು. ಸುಮಲತಾ ನಮ್ಮ ಅಭ್ಯರ್ಥಿ ಪರ ಕೆಲಸ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್