ಸಚಿವ ಶಿವರಾಜ ತಂಗಡಗಿ 
ರಾಜಕೀಯ

ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಹೊಡೆಯಬೇಕು: ಶಿವರಾಜ ತಂಗಡಗಿ ವಿವಾದಾತ್ಮಕ ಹೇಳಿಕೆ

ಇನ್ನೂ ಮೋದಿ, ಮೋದಿ ಎಂದು ಹೊಗಳುವ ಯುವಕರಿಗೆ "ಕಪಾಳಮೋಕ್ಷ" ಮಾಡಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಅವರು ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೊಪ್ಪಳ: ಭಾರತೀಯ ಜನತಾ ಪಕ್ಷದ ಸರ್ಕಾರ ಕಳೆದ 10 ವರ್ಷಗಳಲ್ಲಿ 20 ಕೋಟಿ ಉದ್ಯೋಗಗಳನ್ನು ನೀಡಲು ವಿಫಲವಾಗಿದೆ. ಆದರೆ ಇನ್ನೂ ಮೋದಿ, ಮೋದಿ ಎಂದು ಹೊಗಳುವ ಯುವಕರಿಗೆ "ಕಪಾಳಮೋಕ್ಷ" ಮಾಡಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಅವರು ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇಂದು ಕಾರಟಗಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಿವರಾಜ್ ತಂಗಡಗಿ, ಪ್ರಧಾನಿ ಮೋದಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಆರೋಪಿಸಿದರು.

"ಬಿಜೆಪಿಯವರು ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಪ್ರಧಾನಿ ಮೋದಿಯವರು ಯುವಕರಿಗೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಅವರು ಉದ್ಯೋಗ ನೀಡಿದ್ದಾರಾ? ಅವರಿಗೆ ನಾಚಿಕೆಯಾಗಬೇಕು. ಇನ್ನೂ 'ಮೋದಿ ಮೋದಿ' ಎಂದು ಜಪಿಸುತ್ತಿರುವ ಅವರ ಯುವ ಬೆಂಬಲಿಗರ ಕಪಾಳಕ್ಕೆ ಹೊಡೆಯಬೇಕು" ಎಂದು ತಂಗಡಗಿ ಕಿಡಿ ಕಾರಿದರು.

"ಇನ್ನೂ 5 ವರ್ಷಗಳ ಕಾಲ ಜನರನ್ನು ಮೂರ್ಖರನ್ನಾಗಿ ಮಾಡಬಹುದು ಎಂದು ಅವರು(ಬಿಜೆಪಿ) ಭಾವಿಸಿದ್ದಾರೆ. ಪ್ರಧಾನಿ ಮೋದಿ ಅವರು ಭಾರತದಲ್ಲಿ 100 ಸ್ಮಾರ್ಟ್ ಸಿಟಿಗಳ ಭರವಸೆ ನೀಡಿದರು. ಅವು ಎಲ್ಲಿವೆ? ಹೆಸರಿಸಿ ಪ್ರಧಾನಿ ಮೋದಿ ಸಮುದ್ರದ ಆಳಕ್ಕೆ ಹೋಗಿ ಅಲ್ಲಿ ಪೂಜೆ ಮಾಡುತ್ತಾರೆ. ಒಬ್ಬ ಪ್ರಧಾನಿ ಮಾಡಬೇಕಾದ ಕೆಲಸ ಇದೇನಾ?" ತಂಗಡಗಿ ಪ್ರಶ್ನಿಸಿದರು.

ಸಂಗಣ್ಣ ಕರಡಿ ಅವರಿಗೆ ಮೋಸ ಮಾಡಿದ್ದಾರೆ. ಸಂಸದ ಸಂಗಣ್ಣ ಅವರು ಮೋದಿ ಮೋದಿ ಎಂದು ಹೊಗಳಿದರು. ಪಾಪ ಒಳ್ಳೆಯ ಮನುಷ್ಯ ಅವರಿಗೆ ಟಿಕೆಟ್ ನೀಡದೆ ಮನೆಯಲ್ಲಿ ಕೂಡಿಸಿದ್ದಾರೆ. ಸಂಗಣ್ಣ ಕಣದಲ್ಲಿಲ್ಲದೇ ಇರುವದರಿಂದ ಈಗ ಕಾಂಗ್ರೆಸ್ ಅಭ್ಯರ್ಥಿ ರಾಜಣ್ಣ ಗೆದ್ದಂತೆ. ಕ್ಷೇತ್ರದಲ್ಲಿ ಎಲ್ಲಿ ನೋಡಿದರು ಕಾಂಗ್ರೆಸ್‌ ಪರ ಒಲವಿದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT