ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿಕೆ.ಸುರೇಶ್ ಹಾಗೂ ಡಿಕೆ.ಶಿವಕುಮಾರ್
ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿಕೆ.ಸುರೇಶ್ ಹಾಗೂ ಡಿಕೆ.ಶಿವಕುಮಾರ್ 
ರಾಜಕೀಯ

ಲೋಕಸಭಾ ಚುನಾವಣೆ 2024: ಡಿಕೆ.ಸುರೇಶ್ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್‌

Manjula VN

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ.

ಲೋಕಸಭಾ ಚುನಾವಣೆಗೆ ಡಿಕೆ. ಸುರೇಶ್ ಅವರು ಮಾರ್ಚ್‌ 28 ರಂದು‌ ನಾಮಪತ್ರ ಸಲ್ಲಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಆರಂಭದ ದಿನವೇ ನಾಮಪತ್ರ ಸಲ್ಲಿಸಲು ಡಿ.ಕೆ.ಸುರೇಶ್ ನಿರ್ಧಾರ ಮಾಡಿದ್ದಾರೆ.

ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾರ್ಚ್‌ 28 ರಂದು ಬೆಳಗ್ಗೆ 11ಕ್ಕೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಸೇರಿ ಕಾಂಗ್ರೆಸ್ ನ ಹಿರಿಯ ನಾಯಕರು ಭಾಗಿಯಾಗುವ ಸಾಧ್ಯತೆಯಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಡಿ.ಕೆ ಸುರೇಶ್‌ ಮಾಹಿತಿ ನೀಡಿದ್ದಾರೆ.

ನಾಮಪತ್ರ ಸಲ್ಲಿಕೆ ನಿಮಿತ್ತವಾಗಿ ಇಂದು ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷರು ಮತ್ತು ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಡಿಕೆ.ಶಿವಕುಮಾರ್ ಅವರೊಂದಿಗೆ ಭೇಟಿ ಮಾಡಿದೆ. ನಾಮಪತ್ರ ಸಲ್ಲಿಕೆ ದಿನದಂದು ನಮ್ಮೊಂದಿಗೆ ಭಾಗಿಯಾಗಿ ಕಾರ್ಯಕರ್ತರಲ್ಲಿ ಉತ್ಸಾಹ, ಹುಮ್ಮಸ್ಸು ಮೂಡಿಸಬೇಕೆಂದು ಅವರನ್ನು ಆಹ್ವಾನಿಸಿ, ಆಶೀರ್ವಾದ ಪಡೆದೆ ಎಂದು ಹೇಳಿದ್ದಾರೆ.

2019 ರಲ್ಲಿ ಬಿಜೆಪಿ ಅಭ್ಯರ್ಥಿ ಖರ್ಗೆ ಅವರ ಭದ್ರಕೋಟೆ ಕಲಬುರಗಿಯಲ್ಲಿ ಸೋಲಿಸುವಲ್ಲಿ ಯಶಸ್ವಿಯಾದ್ದರು. ಹೀಗಾಗಿ ಈ ಬಾರಿ ಪರಿಸ್ಥಿತಿ ಸವಾಲಿನದ್ದಾಗಿರುವುದರಿಂದ ಗೆಲುವು ಸಾಧಿಸಲೇಬೇಕೆಂದು ಪಣತೊಟ್ಟಿರುವ ಡಿಕೆ.ಸುರೇಶ್, ಯಾವುದೇ ಅವಕಾಶವನ್ನು ಕೈಬಿಡುತ್ತಿಲ್ಲ.

ಹಿರಿಯ ನಾಯಕರಾದ ಸಿ.ಎಂ.ಲಿಂಗಪ್ಪ, ಎಚ್.ಎಂ.ರೇವಣ್ಣ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಸೈಯದ್ ಹಾಜಿ ಜಿಯಾವುಲ್ಲಾ ಸೇರಿದಂತೆ ಲೋಕಸಭೆ ಕ್ಷೇತ್ರದ ಪ್ರಮುಖ ನಾಯಕರನ್ನು ಭೇಟಿ ಮಾಡಿ ಬೆಂಬಲ ಪಡೆದುಕೊಂಡಿದ್ದಾರೆ.

SCROLL FOR NEXT