ಸಂಗ್ರಹ ಚಿತ್ರ 
ರಾಜಕೀಯ

ಮೈಸೂರು-ಕೊಡಗು ಲೋಕಸಭಾ ಚುನಾವಣೆ: ಯದುವೀರ್ ಗೆಲವು ಖಚಿತಪಡಿಸಲು ಶೀಘ್ರದಲ್ಲೇ ಬಿಜೆಪಿ ಮಹತ್ವದ ಸಭೆ!

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಗೆಲುವು ಖಚಿತಪಡಿಸಲು ವಿವಿಧ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಶೀಘ್ರದಲ್ಲೇ ಬಿಜೆಪಿ ಮಹತ್ವದ ಸಭೆ ನಡೆಸಲಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಗೆಲುವು ಖಚಿತಪಡಿಸಲು ವಿವಿಧ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಶೀಘ್ರದಲ್ಲೇ ಬಿಜೆಪಿ ಮಹತ್ವದ ಸಭೆ ನಡೆಸಲಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ತನ್ನ ಪಕ್ಷದ ಅಭ್ಯರ್ಥಿ ಲಕ್ಷ್ಮಣ್ ಅವರ ಗೆಲುವು ಖಚಿತಪಡಿಸಲು ಕಾರ್ಯತಂತ್ರ ರೂಪಿಸಲು ಕೋರ್ ಕಮಿಟಿ ಸಭೆ ನಡೆಸಿತ್ತು. ಇದರ ಬೆನ್ನಲ್ಲೇ ಬಿಜೆಪಿ ಕೂಡ ಕಾರ್ಯತಂತ್ರ ರೂಪಿಸಲು ಸಭೆ ನಡೆಸಲು ಮುಂದಾಗಿದೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಗರ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ನಾಗೇಂದ್ರ ಅವರು, ಕೋರ್ ಕಮಿಟಿ ಸಬೆಯಲ್ಲಿ ಚುನಾವಣೆಗೆ ರಣತಂತ್ರ ರೂಪಿಸಲಾಗುವುದು ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಾಳೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದು, ಚಾಮುಂಡೇಶ್ವರಿಯ ದರ್ಶನ ಪಡೆದು ಬಳಿಕ, ಮಡಿಕೇರಿಯ ಪ್ರವಾಸ ಕೈಗೊಳ್ಳಲಿದ್ದಾರೆ. ನಂತರ ಮತ್ತೆ ಸಂಜೆ ಖಾಸಗಿ ಹೋಟೆಲ್​ನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ ಡಿ ಕುಮಾಸ್ವಾಮಿ ಹಾಗೂ ಇತರ ಮುಖಂಡರರ ನೇತೃತ್ವದಲ್ಲಿ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಮೂಡಾದ ಮಾಜಿ ಅಧ್ಯಕ್ಷ ಹೆಚ್​ ವಿ ರಾಜೀವ್ ಬಿಜೆಪಿ ಪಕ್ಷ ತೊರೆಯುವ ವಿಚಾರ ಕುರಿತು ಮಾತನಾಡಿ, ಸಿಎಂ ನೇತೃತ್ವದಲ್ಲಿ ರಾಜೀವ್ ಅವರು ನಾಳೆ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗುತ್ತಿದ್ದಾರೆ ಎಂಬ ಮಾಹಿತಿ ಸುದ್ದಿ ಮಾಧ್ಯಗಳಿಂದ ತಿಳಿದು ಬಂದಿದೆ. ರಾಜೀವ್ ಬಿಜೆಪಿ ಪಕ್ಷ ತೊರೆಯುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಈಗಾಗಲೇ ಅವರು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೂಡ ನೀಡಿದ್ದಾರೆ. ಅವರನ್ನ ಮನವೊಲಿಸುವ ಪ್ರಯತ್ನ ಮಾಡುವುದಿಲ್ಲ. ಅವರು ಕಳೆದ ವಿಧಾನಸಭೆ ಚನಾವಣೆಯಲ್ಲಿ ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಯಾರೋ ಇಬ್ಬರು ಮೂವರು ಬಿಜೆಪಿ ಪಕ್ಷದಿಂದ ಹೋದರೆ, ನಮಗೆ ತೊಂದರೆಯಾಗುವುದಿಲ್ಲ. ನಮ್ಮ ಪಕ್ಷಕ್ಕೆ ಸಾವಿರಾರು ಜನರು ಬರುತ್ತಾರೆ. ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ. ಚುನಾವಣೆ ವೇಳೆ ಪಕ್ಷಾಂತರ ಸಾಮಾನ್ಯ. ರಾಜೀವ್ ಬಿಜೆಪಿ ಪಕ್ಷದ ವಿರುದ್ಧ ಇರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದರು.

ಕಾಂಗ್ರೆಸ್ ಪಕ್ಷ ಒಕ್ಕಲಿಗ ವಿರೋಧಿ ಪಕ್ಷವಾಗಿದ್ದು, ಒಕ್ಕಲಿಗರಿಗೆ ಟಿಕೆಟ್ ಕೊಡಲು 41 ವರ್ಷ ಬೇಕಿತ್ತಾ? 41 ವರ್ಷದಿಂದ ಯಾರೊಬ್ಬ ಒಕ್ಕಲಿಗರು ಇರಲಿಲ್ಲವಾ? ಹಾಳಾದ ಊರಿಗೆ ಉಳಿದವನೇ ಗೌಡ ಎಂಬ ಮಾತಿನಂತೆ ಲಕ್ಷ್ಮಣ್​ಗೆ ಟಿಕೆಟ್ ನೀಡಲಾಗಿದೆ. ಇದಕ್ಕೂ ಮುಂಚೆ ಯಾವುದೇ ಒಕ್ಕಲಿಗ ಸಮುದಾಯಕ್ಕೆ ಕಾಂಗ್ರೆಸ್ ಅವಕಾಶ ಕೊಟ್ಟಿರಲಿಲ್ಲ. ನಿಜವಾಗಿಯೂ ಕಾಂಗ್ರೆಸ್ ಪಕ್ಷ ಒಕ್ಕಲಿಗರ ವಿರೋಧಿ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT