ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ 
ರಾಜಕೀಯ

ಮಂಡ್ಯ ಲೋಕಸಭೆ JDS ಪಾಲು: ಮುನಿಸಿಕೊಂಡ ಬಿಜೆಪಿ ಮುಖಂಡರ ಮನವೊಲಿಸಲು ವಿಜಯೇಂದ್ರ ಯತ್ನ!

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಕಗ್ಗಂಟಾಗಿ ಉಳಿದಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಅಂತೂ ಜೆಡಿಎಸ್‌ ಪಾಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಸ್ಪರ್ಧೆಗಿಳಿಯುವುದು ಬಹುತೇಕ ಖಚಿತವಾಗಿದೆ.

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಕಗ್ಗಂಟಾಗಿ ಉಳಿದಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಅಂತೂ ಜೆಡಿಎಸ್‌ ಪಾಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಸ್ಪರ್ಧೆಗಿಳಿಯುವುದು ಬಹುತೇಕ ಖಚಿತವಾಗಿದೆ. ಈ ಬೆಳವಣಿಗೆಗೆ ಬಿಜೆಪಿ ಮುಖಂಡರು ಅಸಮಾಧಾನಗೊಂಡಿದ್ದು, ಮುನಿಸಿಕೊಂಡಿರುವ ನಾಯಕರ ಮನವೊಲೀಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಯತ್ನ ನಡೆಸುತ್ತಿದ್ದಾರೆ.

ನಿನ್ನೆಯಷ್ಟೇ ಮಂಡ್ಯದಲ್ಲಿ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ವಿಜಯೇಂದ್ರ ಅವರು, ಬಿಜೆಪಿ-ಜೆಡಿಎಸ್ ಸದಸ್ಯರೊಂದಿಗೆ ಚರ್ಚೆ ನಡೆಸಿ, ಒಗ್ಗಟ್ಟು ಮೂಡಿಸಲು ಯತ್ನ ನಡೆಸಿದರು.

ಮಾಜಿ ಸಚಿವ ನಾರಾಯಣಗೌಡ ಸೇರಿದಂತೆ ಪಕ್ಷದ ಮುಖಂಡರನ್ನು ಭೇಟಿ ಮಾಡಿದ ವಿಜಯೇಂದ್ರ ಅವರು, ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡುವಂತೆ ತಿಳಿಸಿದರು. ಆದರೆ, ಸಭೆಯಲ್ಲಿ ಕೆಲ ನಾಯಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದರು ಎಂದು ತಿಳಿದುಬಂದಿದೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಮಂಡ್ಯ ಮತ್ತು ಇತರ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಒಟ್ಟಾಗಿ ಕೆಲಸ ಮಾಡಲಿವೆ. ಕರ್ನಾಟಕದಿಂದ ಹೆಚ್ಚಿನ ಸ್ಥಾನಗಳನ್ನು ಪಡೆಯುವ ಮೂಲಕ ಪ್ರಧಾನಿ ಮೋದಿ ಅವರನ್ನು ಬಲಪಡಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಸುಮಲತಾ ಕುರಿತು ಮಾತನಾಡಿ, ನಾಯಕರಿಗೆ ಸುಮಲತಾ ಅವರ ಮೇಲೆ ಅಪಾರ ಗೌರವವಿದೆ. ಮಂಡ್ಯ ಮತ್ತು ಮೈಸೂರು ಪ್ರವಾಸದ ವೇಳೆ ಸುಮಲತಾ ಅವರನ್ನು ಭೇಟಿ ಮಾಡುತ್ತೇನೆಂದು ಹೇಳಿದರು. ಇದೇ ವೇಳೆ ಮಾಜಿ ಸಚಿವ ನಾರಾಯಣಗೌಡ ಬಿಜೆಪಿ ತೊರೆಯುತ್ತಾರೆ ಎಂಬ ವದಂತಿಯನ್ನು ವಿಜಯೇಂದ್ರ ಅವರು ತಳ್ಳಿಹಾಕಿದರು.

ಈ ನಡುವೆ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರನ್ನು ಮಂಗಳವಾರ ಭೇಟಿ ಮಾಡಿದ್ದು, ಚುನಾವಣೆಗೆ ಬೆಂಬಲ ಕೋರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!