ಗೋಕರ್ಣ ಆತ್ಮಲಿಂಗಕ್ಕೆ ಡಿ ಕೆ ಶಿವಕುಮಾರ್ ಪೂಜೆ  
ರಾಜಕೀಯ

ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ: ಗೋಕರ್ಣ ಅರ್ಚಕರ ಸಂಕಲ್ಪ, ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ ಎಂದ ಡಿಸಿಎಂ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಟೆಂಪಲ್ ರನ್ ಜೋರಾಗಿದೆ. ನಿನ್ನೆ ಧರ್ಮಸ್ಥಳದಿಂದ ದೇವಸ್ಥಾನದ ಭೇಟಿ, ಪ್ರಾರ್ಥನೆ, ಪೂಜೆ ಸಲ್ಲಿಕೆ ಆರಂಭಿಸಿದ ಡಿಸಿಎಂ ಡಿಕೆ ಶಿವಕುಮಾರ್ ಇಂದು ಗೋಕರ್ಣಕ್ಕೆ ಆಗಮಿಸಿ ಶಿವನ ಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

ಗೋಕರ್ಣ(ಉತ್ತರ ಕನ್ನಡ):ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಟೆಂಪಲ್ ರನ್ ಜೋರಾಗಿದೆ. ನಿನ್ನೆ ಧರ್ಮಸ್ಥಳದಿಂದ ದೇವಸ್ಥಾನದ ಭೇಟಿ, ಪ್ರಾರ್ಥನೆ, ಪೂಜೆ ಸಲ್ಲಿಕೆ ಆರಂಭಿಸಿದ ಡಿಸಿಎಂ ಡಿಕೆ ಶಿವಕುಮಾರ್ ಇಂದು ಗೋಕರ್ಣಕ್ಕೆ ಆಗಮಿಸಿ ಶಿವನ ಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

ಇಂದು ಗೋಕರ್ಣ ಆತ್ಮಲಿಂಗ ಪೂಜೆ ಸಲ್ಲಿಸುವ ವೇಳೆ ಡಿ.ಕೆ‌‌. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಅರ್ಚಕರು ಸಂಕಲ್ಪ ಮಾಡಿದರು. ಈ ಬಗ್ಗೆ ದೇವಸ್ಥಾನದ ಹೊರಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ಪ್ರತಿಕ್ರಿಯಿಸಿದ ಡಿ‌.ಕೆ. ಶಿವಕುಮಾರ್ ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.

ಗೋಕರ್ಣ ಆತ್ಮಲಿಂಗ ಪೂಜೆ ವೇಳೆ ಡಿ.ಕೆ. ಶಿವಕುಮಾರ್ ಮುಂದೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ದೇವರ ಮುಂದೆ ಅರ್ಚಕರು ಸಂಕಲ್ಪ ಮಾಡಿಕೊಂಡಿದ್ದಾರೆ. ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ. ಈಗ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಅವರ ನಾಯಕತ್ವದಲ್ಲಿ ನಾವು ಮುಂದೆ ಹೋಗುತ್ತಿದ್ದೇವೆ. ಕೆಲವರು ನನ್ನನ್ನು ಸಿಎಂ ಆಗಲಿ ಎಂದು ಹೇಳುತ್ತಾರೆ. ಅವರ ಬಾಯಲ್ಲಿ ಬರುವುದನ್ನು ತಪ್ಪಿಸಲು ಸಾಧ್ಯವೇ, ಯಾರು ಏನೇ ಆಸೆ ಪಟ್ಟರೂ ಪಕ್ಷ ಅಂತಿಮವಾಗಿ ತೀರ್ಮಾನಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥಿಸಿಕೊಂಡಿದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ

ಮಹಾರಾಷ್ಟ್ರ: ಅಭಿಜೀತ್ ದೀಪ್ಕೆ ಪ್ರತಿಭಟನೆಯ ಎಚ್ಚರಿಕೆ, ಶಾಲಾ ಪ್ರಾಂಶುಪಾಲರ ಅಮಾನತು! Video

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಕೇರಳಿಗರದ್ದು ಇದೆಂಥ ಮನಸ್ಥಿತಿ: ನಟಿ ಮಾಳವಿಕಾಗೆ ಗೋಮಾಂಸ ಇಷ್ಟನಾ? ತಿಂತೀರಾ ಅಂತ ಕೇಳಿದ ಪತ್ರಕರ್ತ; ನೆಟ್ಟಿಗರ ಆಕ್ರೋಶ, Video!