ಮಡಿಕೇರಿಯಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿ ವೈ ವಿಜಯೇಂದ್ರ 
ರಾಜಕೀಯ

ರಾಜ್ಯ ರಾಜಕಾರಣದಲ್ಲಿ ಪ್ರತಾಪ್ ಸಿಂಹಗೆ ಉಜ್ವಲ ಭವಿಷ್ಯವಿದೆ: ಬಿ ವೈ ವಿಜಯೇಂದ್ರ

''ಪ್ರತಾಪ್ ಸಿಂಹ ಅವರಿಗೆ ಲೋಕಸಭೆ ಟಿಕೆಟ್ ಕೈ ತಪ್ಪಿರಬಹುದು. ಆದರೆ ರಾಜ್ಯ ರಾಜಕಾರಣದಲ್ಲಿ ಅವರಿಗೆ ಉಜ್ವಲ ಭವಿಷ್ಯ ಇದೆ. ಅವರ ಶ್ರಮಕ್ಕೆ ಮನ್ನಣೆ ಸಿಗುತ್ತದೆ'.

ಮಡಿಕೇರಿ: ''ಪ್ರತಾಪ್ ಸಿಂಹ ಅವರಿಗೆ ಲೋಕಸಭೆ ಟಿಕೆಟ್ ಕೈ ತಪ್ಪಿರಬಹುದು. ಆದರೆ ರಾಜ್ಯ ರಾಜಕಾರಣದಲ್ಲಿ ಅವರಿಗೆ ಉಜ್ವಲ ಭವಿಷ್ಯ ಇದೆ. ಅವರ ಶ್ರಮಕ್ಕೆ ಮನ್ನಣೆ ಸಿಗುತ್ತದೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ಹೇಳಿದ್ದಾರೆ.

ಇಂದು ಮಡಿಕೇರಿಯಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ವಿಜಯೇಂದ್ರ, ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ಅವರ ಮನವಿ ಮೇರೆಗೆ ಬಿಜೆಪಿ ಸೇರಿದ್ದಾರೆ. ಎಲ್ಲಾ ಬಿಜೆಪಿ ಕಾರ್ಯಕರ್ತರ ಪ್ರಯತ್ನದಿಂದ ಯದುವೀರ್ ಒಡೆಯರ್ ಅವರು 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದರು.

2004ರಿಂದ ಯುಪಿಎ ಸರ್ಕಾರದ ಹತ್ತು ವರ್ಷಗಳ ಆಡಳಿತ ಹಗರಣಗಳಿಂದ ತುಂಬಿ ತುಳುಕುತ್ತಿತ್ತು. ಹೀಗಾಗಿ ದೇಶದ ಜನ ಯುಪಿಎ ಸೋಲಿಸಿ ಬಿಜೆಪಿ ಗೆಲ್ಲಿಸಿದರು. ಆಡಳಿತಾತ್ಮಕ ಯಶಸ್ಸಿನ ನಂತರ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬರುತ್ತಾರೆ. ಪ್ರಧಾನಿಯವರ ಜನಪ್ರಿಯತೆ ಇನ್ನೂ ಮುಂದುವರೆದಿರುವುದರಿಂದ ಮತದಾರರು ಮೂರನೇ ಬಾರಿಗೆ ಮೋದಿಯವರನ್ನು ಮರು ಆಯ್ಕೆ ಮಾಡುತ್ತಾರೆ ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದ ತಪ್ಪುಗಳಿಂದಾಗಿ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋತಿದೆ ಎಂದು ವಿಶ್ಲೇಷಿಸಿದ ವಿಜಯೇಂದ್ರ, ''ಕಳೆದ ಹತ್ತು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಪರಿಸ್ಥಿತಿ ಎದುರಾಗಿ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ರಾಜ್ಯದಲ್ಲಿ ನೀರಿನ ಸಮಸ್ಯೆ ಉಂಟಾಗಲು ಕಾಂಗ್ರೆಸ್‌ ಕಾರಣ' ಎಂದು ಆರೋಪಿಸಿದರು.

ರಾಜ್ಯದಲ್ಲಿ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಪಕ್ಷದಲ್ಲಿನ ಯಾವುದೇ ಸಣ್ಣ ಭಿನ್ನಾಭಿಪ್ರಾಯವನ್ನು ಪರಿಹರಿಸಲಾಗುವುದು ಎಂದು ಹೇಳಿದರು.

ಕೆ.ಎಸ್.ಈಶ್ವರಪ್ಪ ಅವರ ಸ್ಪರ್ಧೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮದೊಂದು ರಾಷ್ಟ್ರೀಯ ಪಕ್ಷ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದರೂ ಬಿಜೆಪಿ ಗೆಲ್ಲುವ ನಿರೀಕ್ಷೆಯಿಂದ ಆಕಾಂಕ್ಷಿಗಳೂ ಹೆಚ್ಚಾಗಿದ್ದರು. ದಾವಣಗೆರೆ ಮತ್ತು ಬೆಳಗಾವಿಗೆ ನಮ್ಮ ರೈತ ನಾಯಕರಾದ ಯಡಿಯೂರಪ್ಪನವರು ಭೇಟಿ ಕೊಟ್ಟು, ಅಲ್ಲಿನ ಸಮಸ್ಯೆಗಳನ್ನು ಪರಿಹರಿಸಿದ್ದಾರೆ. ಈಶ್ವರಪ್ಪನವರ ಸಮಸ್ಯೆಯೂ ಬಗೆಹರಿಯಲಿದೆ ಎಂದು ನುಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT