ಬೆಂಗಳೂರು ಗ್ರಾಮಾಂತರದಿಂದ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ 
ರಾಜಕೀಯ

Loksabha Election 2024: ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಿ ಕೆ ಸುರೇಶ್ ಇಂದು ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಿ ಕೆ ಸುರೇಶ್ ಇಂದು ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.

ಕರ್ನಾಟಕದಲ್ಲಿ 2019 ರ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಏಕೈಕ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಹಾಲಿ ಸಂಸದ ಡಿ ಕೆ ಸುರೇಶ್ ಅವರು ಗುರುವಾರ ಏಪ್ರಿಲ್ 26 ರ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಇತರರು ಈ ವೇಳೆ ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನ ರಾಮನಗರದ ಪೊಲೀಸ್ ಭವನ ಸರ್ಕಲ್‌ ನಿಂದ 1ಕಿಮೀ ನಡೆಸಿದರು. ಈ ವೇಳೆ ಸುಮಾರು 25 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗಿದ್ದರು ಎನ್ನಲಾಗಿದೆ. ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆಗೂ ಮುನ್ನ ತಮ್ಮ ಮನೆ ದೇವರು ಕಬ್ಬಾಳಮ್ಮ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಕನಕಪುರದ ಕೋಡಿಹಳ್ಳಿ ನಿವಾಸಕ್ಕೆ ಭೇಟಿ ನೀಡಿ ತಾಯಿ ಆಶೀರ್ವಾದ ಪಡೆದುಕೊಂಡರು. ಬಳಿಕ ಮನೆದೇವರುಗಳಾದ ಕೆಂಕೇರಮ್ಮ, ಕಬ್ಬಾಳಮ್ಮ, ಮರಳೆಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಳಿಯ ಹಾಗೂ ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರ ಸೋದರ ಮಾವ ಆಗಿರುವ ಖ್ಯಾತ ಹೃದ್ರೋಗ ಶಸ್ತ್ರ ಚಿಕಿತ್ಸಕ ಸಿ ಎನ್ ಮಂಜುನಾಥ್ ಅವರು ಕಣಕ್ಕಿಳಿದಿದ್ದಾರೆ. ಬಿಜೆಪಿ ಚಿಹ್ನೆಯ ಮೇಲೆ ಸ್ಪರ್ಧಿಸಿರುವ ಮಂಜುನಾಥ್ ಅವರು 17 ವರ್ಷಗಳ ಕಾಲ ಸರ್ಕಾರಿ ಸ್ವಾಮ್ಯದ ಜಯದೇವ ಹೃದಯರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯಸ್ಥರಾಗಿದ್ದರು ಮತ್ತು ಈ ವರ್ಷದ ಜನವರಿಯಲ್ಲಿ ನಿವೃತ್ತರಾಗಿದ್ದರು.

ದೇವೇಗೌಡರ ಕುಟುಂಬದ ವಿರುದ್ಧ ಸ್ಪರ್ಧೆ ನಮಗೇನು ಹೊಸದಲ್ಲ: ಡಿಕೆ ಸುರೇಶ್

ನಾಮಪತ್ರ ಸಲ್ಲಿಕೆ ವೇಳೆ ಮಾತನಾಡಿದ ಡಿಕೆ ಸುರೇಶ್ ಅವರು, ದೇವೇಗೌಡರ ಕುಟುಂಬದೊಂದಿಗೆ ಚುನಾವಣಾ ಹೋರಾಟಗಳು ನಮಗೆ ಹೊಸದಲ್ಲ. ದೇವೇಗೌಡರ ಕುಟುಂಬದ ವಿರುದ್ಧ ನಾವು ಹಲವು ಚುನಾವಣೆಗಳನ್ನು ಎದುರಿಸಿದ್ದೇವೆ. ದೇವೇಗೌಡರ ವಿರುದ್ಧ ಮಹಿಳೆಯೊಬ್ಬರು ಆಯ್ಕೆಯಾಗಿದ್ದಾರೆ. ಕುಮಾರಸ್ವಾಮಿ ಅವರನ್ನು ಚುನಾವಣೆಯಲ್ಲಿ ಎದುರಿಸಿದ್ದೇನೆ. ಈ ಬಾರಿಯೂ ಗೆಲ್ಲುವ ವಿಶ್ವಾಸವಿದೆ. ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ನಾನು ಮಂತ್ರಿಯಾಗಿರದಿದ್ದರೂ ಅನಿತಾ ಕುಮಾರಸ್ವಾಮಿ ಅವರನ್ನು ಭಾರಿ ಅಂತರದಿಂದ ಸೋಲಿಸಿದ್ದೇವೆ. ಅಂದಿನಿಂದ ಇಂದಿನವರೆಗೂ ಜನರು ನಮಗೆ ಬೆಂಬಲ ನೀಡುತ್ತಿದ್ದಾರೆ ಎಂದರು.

ಅಂದಹಾಗೆ 2013 ರ ಉಪಚುನಾವಣೆಯಲ್ಲಿ ಡಿಕೆ ಸುರೇಶ್ ಅವರು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಸೋಲಿಸಿದ್ದರು, ಅವರ ಪತಿ ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಆ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ನಂತರ ಲೋಕಸಭೆಗೆ ರಾಜೀನಾಮೆ ನೀಡಿದ್ದರು ಮತ್ತು 2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಮರು ಆಯ್ಕೆಯಾದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT