ಬಿ.ವಿ ನಾಯಕ್ ಅಭಿಮಾನಿಗಳ ಆತ್ಮಹತ್ಯೆ ಯತ್ನ
ಬಿ.ವಿ ನಾಯಕ್ ಅಭಿಮಾನಿಗಳ ಆತ್ಮಹತ್ಯೆ ಯತ್ನ 
ರಾಜಕೀಯ

ರಾಯಚೂರು ಬಿಜೆಪಿಯಲ್ಲಿ ಅಸಮಾಧಾನ: ಬಿ.ವಿ ನಾಯಕ್ ಅಭಿಮಾನಿಗಳ ಆತ್ಮಹತ್ಯೆ ಯತ್ನ

Shilpa D

ರಾಯಚೂರು: ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆಯಾದ ಬೆನ್ನಲ್ಲಿಯೇ ಕಾರ್ಯಕರ್ತರಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ಟಿಕೆಟ್‌ ನೀಡಿದ್ದರಿಂದ ಬಿ.ವಿ ನಾಯಕ್ ಆಕ್ರೋಶಗೊಂಡಿದ್ದು, ಮತ್ತೊಮ್ಮೆ ಸಮೀಕ್ಷೆ ಮಾಡಿ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ.

ರಾಯಚೂರು ಎಸ್ ಟಿ ಮೀಸಲು ಕ್ಷೇತ್ರದಲ್ಲಿ ಸಂಸದರ ವಿರುದ್ಧ ಗೋ ಬ್ಯಾಕ್ ಅಮರೇಶ್ವರ ನಾಯಕ ಕೂಗು ಕೇಳಿ ಬಂದಿದೆ. ಬಿಜೆಪಿ ಟೆಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ನಗರದ ಖಾಸಗಿ ಹೋಟೆಲ್ ನಲ್ಲಿ ಬಿ.ವಿ.ನಾಯಕ ಬೆಂಬಲಿಗರ ಚಿಂತನಾ ಸಭೆಯನ್ನು ಬುಧವಾರ ನಡೆಸಲಾಗಿದೆ. ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕರಿ ಅವರಿಗೆ ಬಿಜೆಪಿ ಮತ್ತೆ ಟಿಕೆಟ್ ನೀಡಿರುವುದಕ್ಕೆ ಬಿ.ವಿ.ನಾಯಕ್ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಬೆಂಬಲಿಗರು ಆಕ್ರೋಶ ಹೊರ ಹಾಕಿದ್ದಾರೆ.

ಬಿಜೆಪಿ ನಾಯಕರು ಟಿಕೆಟ್ ನೀಡುವುದಾಗಿ ಹೇಳಿ ಕೈ ಕೊಟ್ಟಿದ್ದಾರೆ ಎಂದು ವರಿಷ್ಠರ ವಿರುದ್ಧ ಅಭಿಮಾನಿಗಳು, ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದು ಪಕ್ಷೇತರವಾಗಿ ಸ್ಪರ್ಧಿಸಲು ಬಿ.ವಿ.ನಾಯಕ್ ಅವರನ್ನು ಒತ್ತಾಯಿಸಿದ್ದಾರೆ. ಪಕ್ಷದ ನಾಯಕರು ಟಿಕೆಟ್ ವಿಚಾರದಲ್ಲಿ ಮರು ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಐದು ವರ್ಷಗಳ ಹಿಂದೆ ಲೋಕಸಭೆ ಚುನಾವಣೆಯಲ್ಲಿ ಚುನಾಯಿತರಾಗಿ ನಾಪತ್ತೆಯಾಗಿದ್ದ ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯ್ಕ್ ಅವರನ್ನು ಪತ್ತೆ ಹಚ್ಚಿದ ಬಿಜೆಪಿ ಹೈಕಮಾಂಡ್‌ಗೆ ಧನ್ಯವಾದ ಗಳು ಎಂಬ ಬ್ಯಾನರ್ ಹಿಡಿದು ನಾಯ್ಕ್ ಅವರ ಇತರ ಕೆಲವು ಅನುಯಾಯಿಗಳು ಸಭೆಗೆ ಬಂದರು.

ಬಿ ವಿ ನಾಯಕ್ ಬೆಂಬಲಿಗರು ‘ಗೋ ಬ್ಯಾಕ್ ಅಮರೇಶ್ವರ ನಾಯ್ಕ್’ ಘೋಷಣೆಗಳನ್ನು ಕೂಗಿದರು. ಮಾಜಿ ಶಾಸಕ ಬಸವನಗೌಡ ಬ್ಯಾಗವಾಟ್, ಬಿಜೆಪಿ ಮುಖಂಡರಾದ ಶರಣಬಸವ ಪಾಟೀಲ್ ಜೋಳದ ಹೆಡಗಿ, ಜಂಬಣ್ಣ ನಿಲೋಗಲ್, ತಿಮ್ಮಾರೆಡ್ಡಿ ಬೋಗಾವತಿ, ಅನಿತಾ ಮಂತ್ರಿ ಮತ್ತಿತರರು ರಾಜಾ ಅಮರೇಶ್ವರ ನಾಯ್ಕ್ ಅವರನ್ನು ಕಣಕ್ಕಿಳಿಸುವ ನಿರ್ಧಾರವನ್ನು ಬಿಜೆಪಿ ಹೈಕಮಾಂಡ್ ಬದಲಾಯಿಸಿ ನಾಯ್ಕ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು. ಬಿಜೆಪಿ ತನ್ನ ನಿರ್ಧಾರವನ್ನು ಬದಲಾಯಿಸದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಅವರು ನಾಯಕ್‌ಗೆ ಒತ್ತಾಯಿಸಿದ್ದಾರೆ.

ಅಭ್ಯರ್ಥಿಯನ್ನು ಬದಲಾಯಿಸಲು ಬಿಜೆಪಿ ಹೈಕಮಾಂಡ್‌ಗೆ ಎರಡು ದಿನಗಳ ಕಾಲಾವಕಾಶ ನೀಡೋಣ. ನಮ್ಮ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ದೇವದುರ್ಗದಲ್ಲಿ ಮತ್ತೊಮ್ಮೆ ನನ್ನ ಅನುಯಾಯಿಗಳ ಸಭೆ ಕರೆದು ಮುಂದಿನ ಕ್ರಮದ ಬಗ್ಗೆ ಚರ್ಚಿಸುತ್ತೇನೆ ಎಂದು ಹೇಳಿದರು.

SCROLL FOR NEXT