ಲೋಕಸಭೆ ಚುನಾವಣಾ ನಾಮಪತ್ರ ಸಲ್ಲಿಕೆಗೂ ಮುನ್ನ ಕೆಂಕೇರಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದ ಡಿ ಕೆ ಸೋದರರು  
ರಾಜಕೀಯ

ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ: ಡಿ ಕೆ ಶಿವಕುಮಾರ್

ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಗ್ಗಂಟಾಗಿದೆ. ನಿನ್ನೆ ರಾಜಧಾನಿ ಬೆಂಗಳೂರಿನಲ್ಲಿ ಕೋಲಾರ ಕಾಂಗ್ರೆಸ್ ನಾಯಕರು ಬಂದು ವಿಧಾನಸೌಧದಲ್ಲಿ ರಾಜಕೀಯ ಹೈಡ್ರಾಮವೇ ನಡೆದಿತ್ತು.

ಸಚಿವ ಕೆಹೆಚ್​ ಮುನಿಯಪ್ಪ ಸಂಬಂಧಿಕರಿಗೆ ಟಿಕೆಟ್ ನೀಡುವುದನ್ನು ವಿರೋಧಿಸಿ ಐವರು ಶಾಸಕರು ಮತ್ತು ಇಬ್ಬರು ವಿಧಾನ ಪರಿಷತ್ ಸದಸ್ಯರು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಪ್ರತಿಕ್ರಿಯಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿ, ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಯಾರೂ ರಾಜೀನಾಮೆ ನೀಡಲ್ಲ. ಟಿಕೆಟ್ ವಿಚಾರವಾಗಿ ಒತ್ತಡ ಇದೆ. ಪಕ್ಷ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಇಂದು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

ಇಂದು ಸಿಎಂ ನೇತೃತ್ವದಲ್ಲಿ ಸಭೆ: ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೋಲಾರ ಕ್ಷೇತ್ರದ ಟಿಕೆಟ್ ಹಂಚಿಕೆ ಸಂಬಂಧ ಸಭೆ ನಡೆಸಲಿದ್ದು ಸಮಸ್ಯೆಗೆ ತೆರೆ ಎಳೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಭೆಯಲ್ಲಿ ಕೋಲಾರ ಜಿಲ್ಲೆಯ ಕಾಂಗ್ರೆಸ್ ನಾಯಕರು, ಡಿಸಿಎಂ ಡಿ ಕೆ ಶಿವಕುಮಾರ್ ಭಾಗವಹಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ತಯಾರಿ ಕುರಿತ ಪ್ರಶ್ನೆಗೆ ಉತ್ತರಿಸಿ, "ಇಂದು ಡಿ.ಕೆ. ಸುರೇಶ್ ಅವರಿಗೆ ಬಿ ಫಾರಂ ನೀಡಿ, ನಮ್ಮ ಮನೆ ದೇವರು ಕೆಂಕೇರಮ್ಮ, ಕಬ್ಬಾಳಮ್ಮ, ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ರಾಮನಗರದಲ್ಲಿ ಮುಖ್ಯಮಂತ್ರಿಗಳ ಜತೆಗೂಡಿ ಕಾರ್ಯಕರ್ತರ ಸಭೆ ಮಾಡಿ ನಂತರ ಸುರೇಶ್ ಅವರ ನಾಮಪತ್ರ ಸಲ್ಲಿಸಲಾಗುವುದು ಎಂದರು.

ನಾವು ಕೇವಲ ಇಂದು ಚುನಾವಣೆ ತಯಾರಿ ಮಾಡುತ್ತಿಲ್ಲ. ಸುರೇಶ್ ಅವರು ಗೆದ್ದ ಮೊದಲ ದಿನದಿಂದ ಪ್ರತಿ ನಿತ್ಯ ಕೆಲಸ ಮಾಡಿಕೊಂಡೆ ಬಂದಿದ್ದಾರೆ. ಕೋವಿಡ್ ಸಮಯದಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ದೇಹವನ್ನು ಅವರ ತವರೂರಿಗೆ ತರಲು ಬಿಜೆಪಿ ಕೇಂದ್ರ ಸರ್ಕಾರ ಅವಕಾಶ ನೀಡಲಿಲ್ಲ. ಸುರೇಶ್ ಅವರು ಕೋವಿಡ್ ಕಷ್ಟಕಾಲದಲ್ಲಿ ರೈತರಿಂದ ಹಣ್ಣು ತರಕಾರಿ ಖರೀದಿ ಮಾಡಿ ಜನರಿಗೆ ಉಚಿತವಾಗಿ ಹಂಚಿದರು. ಜನರಿಗೆ ಮೆಡಿಕಲ್ ಕಿಟ್ ನೀಡಿ ಸಹಾಯ ಮಾಡಿದರು. ಸರ್ಕಾರ ಶವಗಳನ್ನು ಜೆಸಿಬಿಯಲ್ಲಿ ಎಸೆಯುತ್ತಿರುವಾಗ, ಕೋವಿಡ್ ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವರ ಮನೆಯವರು ಮುಂದೆ ಬಾರದಿದ್ದಾಗ ಡಿ.ಕೆ ಸುರೇಶ್ ಪಿಪಿಇ ಕಿಟ್ ಧರಿಸಿ ಶವಗಳ ಅಂತ್ಯ ಸಂಸ್ಕಾರ ಮಾಡಿದರು.

ಎಲ್ಲಾ ನಾಯಕರು ಮನೆಯಿಂದ ಆಚೆ ಬರಲು ಹಿಂಜರಿದಾಗ, ಸುರೇಶ್ ಕೋವಿಡ್ ಆಸ್ಪತ್ರೆಗಳಿಗೆ ಹೋಗಿ, ಸೊಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಇದೆಲ್ಲವೂ ಇತಿಹಾಸ. ಅಂತಹ ಕಷ್ಟ ಕಾಲದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕ್ಷೇತ್ರದ ಜನರಿಗಾಗಿ ಶ್ರಮಿಸಿದ್ದಾರೆ. ಇದ್ಯಾವುದೂ ಚುನಾವಣೆ ಸಮಯದಲ್ಲಿ ಮಾಡಿದ ಕೆಲಸವಲ್ಲ. ಸುರೇಶ್ ಅವರು ಪ್ರತಿ ಹಳ್ಳಿ, ಹಳ್ಳಿ ಸುತ್ತಾಡಿ ಪಂಚಾಯ್ತಿ ಸದಸ್ಯನಂತೆ ಕೆಲಸ ಮಾಡಿದ್ದಾರೆ. ಹೀಗಾಗಿ ನಾವು ಈ ಬಾರಿಯ ಚುನಾವಣೆಯಲ್ಲಿ ನಾವು ವಿಶೇಷವಾದ ತಯಾರಿ ಮಾಡುವ ಅಗತ್ಯವಿಲ್ಲ. ನಮ್ಮ ಪರವಾಗಿ ಜನರು, ಕಾರ್ಯಕರ್ತರು ಇದ್ದಾರೆ ಎಂದರು.

ದೇವೇಗೌಡರ ಕುಟುಂಬದ ವಿರುದ್ಧ ಹೋರಾಟ ನಮಗೆ ಹೊಸತಲ್ಲ ಬಿಜೆಪಿ ಹಾಗೂ ಜೆಡಿಎಸ್ ಸೇರಿ ಓರ್ವ ಅಭ್ಯರ್ಥಿ ಕಣಕ್ಕಿಳಿಸಿರುವ ಕುರಿತು ಮಾತನಾಡಿ, ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ. ದೇವೇಗೌಡರ ವಿರುದ್ಧ ಓರ್ವ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ. ನಾನು ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ. 2013ರ ಉಪಚುನಾವಣೆಯಲ್ಲಿ ಇದೇ ರೀತಿ ಜೆಡಿಎಸ್ ಹಾಗೂ ಬಿಜೆಪಿ ಸೇರಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಸುರೇಶ್ ಅವರು ಗೆದ್ದಿದ್ದರು. ಆಗ ಸಿದ್ದರಾಮಯ್ಯ ಅವರ ಸರ್ಕಾರ ಇದ್ದರೂ ನಾನು ಸಚಿವನಾಗಿರಲಿಲ್ಲ. ಆಗ ನನಗೆ ದೊಡ್ಡ ಸವಾಲಾಗಿತ್ತು. ಆಗಲೂ ನಾವು ಸಹೋದರಿ ಅನಿತಾ ಕುಮಾರಸ್ವಾಮಿ ಅವರನ್ನು 1.30 ಲಕ್ಷ ಮತಗಳಿಂದ ಮಣಿಸಿದೆವು. ನಂತರ ಜನ ಸುರೇಶ್ ಅವರನ್ನು ಸತತವಾಗಿ ಗೆಲ್ಲಿಸಿಕೊಂಡು ಬಂದಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT