ಸಿಎಂ ಸಿದ್ಗರಾಮಯ್ಯ  
ರಾಜಕೀಯ

'ಮೋದಿಯವರು ಕಾಗೆ ಬೆಳ್ಳಗಿದೆ ಎಂದರೆ ಬಿಜೆಪಿಯವರು ಹೌದು ಬೆಳ್ಳಗಿದೆ ಅಂತಾರೆ, ನಾಯಿಗೆ ಬಾಲ ಇಲ್ಲ ಅಂದರೆ ಹೌದು ಇಲ್ಲಾ ಅಂತಾರೆ'

ಸುಳ್ಳು ಹೇಳುವುದು ಬಿಜೆಪಿಯವರ ಚಾಳಿ, ಹೇಗೆ ಎಂದರೆ ಪ್ರಧಾನಿ ನರೇಂದ್ರ ಮೋದಿಯವರು ಕಾಗೆ ಬೆಳ್ಳಗಿದೆ ಎಂದರೆ ಅವರ ಅನುಯಾಯಿಗಳೂ ಹೌದು ಬೆಳ್ಳಗಿದೆ ಅಂತಾರೆ ನಾಯಿಗೆ ಬಾಲ ಇಲ್ಲ ಅಂದರೆ ಹೌದು ಇಲ್ಲಾ ಅಂತ ವಾದ ಮಾಡ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ರಾಮನಗರ: ಸುಳ್ಳು ಹೇಳುವುದು ಬಿಜೆಪಿಯವರ ಚಾಳಿ, ಹೇಗೆ ಎಂದರೆ ಪ್ರಧಾನಿ ನರೇಂದ್ರ ಮೋದಿಯವರು ಕಾಗೆ ಬೆಳ್ಳಗಿದೆ ಎಂದರೆ ಅವರ ಅನುಯಾಯಿಗಳೂ ಹೌದು ಬೆಳ್ಳಗಿದೆ ಅಂತಾರೆ ನಾಯಿಗೆ ಬಾಲ ಇಲ್ಲ ಅಂದರೆ ಹೌದು ಇಲ್ಲಾ ಅಂತ ವಾದ ಮಾಡ್ತಾರೆ, ಬಿಜೆಪಿಯವರು ನರೇಂದ್ರ ಮೋದಿಯವರು ಏನು ಹೇಳುತ್ತಾರೋ ಅದಕ್ಕೆ ತಮಟೆ ಹೊಡೆಯುವುದು ಅವರ ಅಭ್ಯಾಸ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ನಾನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಒಂದು ಪ್ರಶ್ನೆ ಕೇಳುತ್ತೇನೆ, 2023-24ನೇ ಸಾಲಿನ ಬಜೆಟ್ ನಲ್ಲಿ ಏನು ಹೇಳಿದ್ದೀರಿ, ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಕೇಂದ್ರದಿಂದ ನೀಡುತ್ತೇವೆ ಎಂದು ಹೇಳಿದರು. ಅವರು ಕೇಂದ್ರದ ಬಜೆಟ್ ನಲ್ಲಿ ಘೋಷಣೆ ಮಾಡಿದ್ದನ್ನು ಈ ಹಣಕಾಸು ವರ್ಷ ಮುಗಿಯುತ್ತಾ ಬಂದರೂ ಇದುವರೆಗೆ ಒಂದು ರೂಪಾಯಿಯೂ ಬಂದಿಲ್ಲ ಇದು ಸುಳ್ಳಾ, ನಿಜವೇ ನೀವೇ ಹೇಳಿ ನಿರ್ಮಲಾ ಸೀತಾರಾಮನ್ ಅವರೇ ಎಂದು ಕೇಳಿದರು.

ಈಗ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಗಳಸ್ಯ ಕಂಠಸ್ಯ. ಮೋದಿ ಸುಳ್ಳುಗಾರ, ದೇವೇಗೌಡರು ಇನ್ನೊಬ್ಬ ಸುಳ್ಳುಗಾರ. ಮೇಕೆದಾಟು ಅಣೆಕಟ್ಟೆ ನಿರ್ಮಾಣ ವಿಚಾರದಲ್ಲಿಯೂ ಬಿಜೆಪಿ - ಜೆಡಿಎಸ್‌ನವರು ಸುಳ್ಳು ಹೇಳುತ್ತಿದ್ದಾರೆ. ಅವರು ಯಾವತ್ತು ನುಡಿದಂತೆ ನಡೆದಿಲ್ಲ. ಅವರ ಮಾತುಗಳನ್ನು ನಂಬಿದರೆ ಮೋಸ ಹೋಗುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ