ಸೌಮ್ಯರೆಡ್ಡಿಗೆ ಬಿ-ಫಾರಂ ವಿತರಿಸಿದ ಡಿಕೆಶಿ 
ರಾಜಕೀಯ

ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿ-ಫಾರಂ ವಿತರಿಸಿದ ಡಿಕೆಶಿ!

ರಾಜ್ಯದಲ್ಲಿ ಒಂದೆಡೆ ಬೇಸಿಗೆ ಬಿಸಿಲಿಳ ಝಳ ಹೆಚ್ಚಾಗತೊಡಗಿದ್ದರೆ, ಮತ್ತೊಂದೆಡೆ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರತೊಡಗುತ್ತಿದೆ. ನಾಮಪತ್ರ ಸಲ್ಲಿಕೆ ಕಾರ್ಯ ಪ್ರಾರಂಭವಾಗಿದ್ದು, ಅಲಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಬೇಸಿಗೆ ಬಿಸಿಲಿಳ ಝಳ ಹೆಚ್ಚಾಗತೊಡಗಿದ್ದರೆ, ಮತ್ತೊಂದೆಡೆ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರತೊಡಗುತ್ತಿದೆ. ನಾಮಪತ್ರ ಸಲ್ಲಿಕೆ ಕಾರ್ಯ ಪ್ರಾರಂಭವಾಗಿದ್ದು, ಅಲಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ.

ಈ ನಡುವೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ತಮ್ಮ ನಿವಾಸದಲ್ಲಿ ಬಿ-ಫಾರಂ ವಿತರಿಸಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಸ್ಪರ್ಧಿಸುತ್ತಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಸೇರಿದಂತೆ ಹಲವು ಬಿ-ಫಾರಂ ಪಡೆದರು.

ತುಮಕೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರಿಗೆ ಡಿಕೆ ಶಿವಕುಮಾರ್ ಬಿ-ಫಾರಂ ವಿತರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT