ರಮೇಶ್ ಕುಮಾರ್, ಮುನಿಯಪ್ಪ
ರಮೇಶ್ ಕುಮಾರ್, ಮುನಿಯಪ್ಪ 
ರಾಜಕೀಯ

ಕೋಲಾರ ಕಾಂಗ್ರೆಸ್ ಟಿಕೆಟ್: ಬಣ ಬಡಿದಾಟದಲ್ಲಿ ಮೂರನೇಯವರಿಗೆ ಲಾಭ? ಹೊಸ ಅಭ್ಯರ್ಥಿ ಘೋಷಣೆ ಸಾಧ್ಯತೆ!

Nagaraja AB

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್.ಎಚ್. ಮುನಿಯಪ್ಪ ಹಾಗೂ ಹಿರಿಯ ನಾಯಕ ರಮೇಶ್ ಕುಮಾರ್ ನಡುವಣ ಬಣ ಬಡಿದಾಟ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದ್ದು, ನಿನ್ನೆ ನಡೆದ ಸಂಧಾನ ಸಭೆಯೂ ಯಶಸ್ವಿಯಾದಂತೆ ಕಂಡುಬರುತ್ತಿಲ್ಲ. ಹೀಗಾಗಿ ಬಣ ಬಡಿದಾಟದಲ್ಲಿ ಯಾವುದೇ ಬಣಕ್ಕೆ ಸೇರದ ಅಭ್ಯರ್ಥಿಯನ್ನು ಆಯ್ಕೆ ಮಾಡಬಹುದು ಎಂಬಂತಹ ಊಹಾಪೋಹಗಳು ದಟ್ಟವಾಗಿವೆ. ಆದರೆ, ಇಂತಹ ಯೋಜನೆಗಳು ಫಲಿತಾಂಶ ಆಧಾರಿತವಾಗಲ್ಲ ಎಂದು ಮುನಿಯಪ್ಪ ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಮಾಜಿ ವಿಧಾನಸಭಾಧ್ಯಕ್ಷ ಕೆ ಆರ್ ರಮೇಶ್ ಕುಮಾರ್ ನೇತೃತ್ವದ ಬಣಗಳನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಗ್ಗೂಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕೋಲಾರದಿಂದ ಸ್ಪರ್ಧಿಸಲು ಮುನಿಯಪ್ಪ ಅವರ ಅಳಿಯ ಚಿಕ್ಕ ಪೆದ್ದಣ್ಣ ಅವರಿಗೆ ಲೋಕಸಭೆ ಟಿಕೆಟ್ ನೀಡಿದರೆ ರಾಜೀನಾಮೆ ನೀಡುವುದಾಗಿ ಸಚಿವರು ಸೇರಿದಂತೆ ಐವರು ಕಾಂಗ್ರೆಸ್ ಶಾಸಕರು ಬುಧವಾರ ಬೆದರಿಕೆ ಹಾಕಿದ್ದು, ಭಿನ್ನಮತಕ್ಕೆ ತೆರೆ ಎಳೆದಿದ್ದಾರೆ. ಪ್ರಸ್ತುತ ಬಿಜೆಪಿ ಸಂಸದರಿರುವ ಈ ಕ್ಷೇತ್ರದಲ್ಲಿ ಪಕ್ಷವು ತನ್ನ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ.

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ, ಯಾರಿಗಾದರೂ ಟಿಕೆಟ್ ನೀಡಿದರೆ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಭರವಸೆ ನೀಡಿದ್ದೇನೆ. 30 ವರ್ಷಗಳಿಂದ ಸಂಸದನಾಗಿ ಏಳು ಬಾರಿ ಗೆದ್ದಿರುವ ನನಗೆ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಹೇಗೆಂದು ಗೊತ್ತಿದೆ. ಎಲ್ಲರೂ ಒಟ್ಟಿಗೆ ಇರಬೇಕು ಎಂಬುದು ನನ್ನ ಭಾವನೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಹಿಂದಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಈ ಭಾಗದ ಎಲ್ಲ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ ಈ ಹಿಂದೆ ನಡೆದ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿತ್ತು. ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರಿ ಎಂದರು.

"ವಾಸ್ತವವಾಗಿ ರಮೇಶ್ ಕುಮಾರ್ ಅದನ್ನೆ ಅನುಸರಿಸಬೇಕು ಎಂದು ಹೇಳುತ್ತೇನೆ. ಆದರೆ ನಾನು ಕೂಡ ಸೀಟು ಕಳೆದುಕೊಂಡಿದ್ದು ಗೆಲ್ಲುವ ಆಸೆಯಿಂದ ನಾನು ಸೂಚಿಸುವ ಅಭ್ಯರ್ಥಿ ಚಿಕ್ಕ ಪೆದ್ದಣ್ಣನಿಗೆ ಟಿಕೆಟ್ ಕೊಡಿ ಎಂದು ಮನವಿ ಮಾಡಿದ್ದೇನೆ. ಗೆಲುವನ್ನು ಖಾತ್ರಿಪಡಿಸುತ್ತೇವೆ.ಅಂತಿಮವಾಗಿ ನಾವು ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರಲು ನಿರ್ಧರಿಸಿದ್ದೇವೆ ಎಂದು ಅವರು ತಿಳಿಸಿದರು. 2019 ರ ಲೋಕಸಭೆ ಚುನಾವಣೆಯಲ್ಲಿ ಕೋಲಾರದಿಂದ ಬಿಜೆಪಿಯ ಎಸ್ ಮುನಿಸ್ವಾಮಿ ವಿರುದ್ಧ ಸೋತ ನಂತರ ರಾಜ್ಯ ರಾಜಕೀಯಕ್ಕೆ ಮರಳಿದ ಮುನಿಯಪ್ಪ ಪ್ರಸ್ತುತ ದೇವನಹಳ್ಳಿ ಶಾಸಕ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿದ್ದಾರೆ.

ಮುಖ್ಯಮಂತ್ರಿ ವಿಭಿನ್ನವಾಗಿ ಯಾವುದೇ ಬಣದಿಂದಲ್ಲದ ಹೊಸ ಅಭ್ಯರ್ಥಿಗೆ ಟಿಕೆಟ್ ನೀಡಲು ಯೋಜಿಸುತ್ತಿದ್ದಾರೆ. ಆದರೆ ಇದು ಫಲಿತಾಂಶ ಆಧಾರಿತವಾಗಿಲ್ಲ. ಸಮಯ ಇನ್ನೂ ಮುಗಿದಿಲ್ಲ. ಕಾಂಗ್ರೆಸ್ ಗೆಲ್ಲಬೇಕು, ನಮ್ಮೆಲ್ಲರನ್ನೂ ಒಗ್ಗೂಡಿಸಿ ಒಬ್ಬ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಬಯಸುತ್ತೇನೆ, ನಾವೆಲ್ಲರೂ ಒಟ್ಟಾಗಿ ಅಭ್ಯರ್ಥಿಯನ್ನು ನಿರ್ಧರಿಸಲು ಹಿಂದೆ ನಿಮಗೆ ಅಧಿಕಾರ ನೀಡಿದ ನಂತರ ಎರಡನೇ ಅಭಿಪ್ರಾಯ ಬೇಡ, ಮೊದಲಿದಂತೆ ಇರಲಿ ಎಂದು ಅವರು, ಅನಾರೋಗ್ಯದ ಕಾರಣ ಕಳೆದೆರಡು ದಿನಗಳಿಂದ ರಮೇಶ್ ಕುಮಾರ್ ಲಭ್ಯವಾಗಿರಲಿಲ್ಲ. ಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷರು ಅವರೊಂದಿಗೆ ಮಾತನಾಡಿ ಪಕ್ಷ ಒಗ್ಗಟ್ಟಾಗಿದೆ ಎಂಬ ಸಂದೇಶವನ್ನು ರವಾನಿಸಬೇಕು ಎಂದ ಅವರು, "ನನಗೆ ಎಲ್ಲವನ್ನೂ ನೀಡಿದ ಪಕ್ಷದ ಶಿಸ್ತಿನ ಸಿಪಾಯಿ ನಾನು. ಆದ್ದರಿಂದ ಸರ್ವಾನುಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು. ಇದರಲ್ಲಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಪಾತ್ರ ಮಹತ್ವದ್ದು ಎಂದು ಹೇಳಿದರು.

ಗುರುವಾರ ಕೋಲಾರ ಭಾಗದ ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡೆಸಿದ ಸಭೆಯಲ್ಲಿ ಮುನಿಯಪ್ಪ ಅವರ ಅಳಿಯ ಚಿಕ್ಕ ಪೆದ್ದಣ್ಣ ಅವರ ಸ್ಪರ್ಧೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು,

ಎಸ್‌ಸಿ (ಬಲ) ಪಂಗಡದ ಯಾರನ್ನಾದರೂ ಕಣಕ್ಕಿಳಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಪೆದ್ದಣ್ಣ ಎಸ್‌ಸಿ (ಎಡ) ಗುಂಪಿಗೆ ಸೇರಿದವರಾಗಿದ್ದಾರೆ. ಇಲ್ಲದಿದ್ದರೆ ರಾಜೀನಾಮೆ ನೀಡುವುದಾಗಿ ಶಾಸಕರಾದ ಕೊತ್ತೂರು ಜಿ ಮಂಜುನಾಥ್ (ಕೋಲಾರ), ಕೆ ವೈ ನಂಜೇಗೌಡ (ಮಾಲೂರು) ಮತ್ತು ಎಂ ಸಿ ಸುಧಾಕರ್ (ಚಿಂತಾಮಣಿ) -- ಮತ್ತು ಇಬ್ಬರು ಎಂಎಲ್‌ಸಿಗಳಾದ ಅನಿಲ್ ಕುಮಾರ್ ಮತ್ತು ನಸೀರ್ ಅಹಮದ್ ಬೆದರಿಕೆ ಹಾಕಿದ್ದಾರೆ. ಸುಧಾಕರ್ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದಾರೆ.

ಸದ್ಯಕ್ಕೆ ಕೋಲಾರದಲ್ಲಿ ಎರಡು ಬಣಗಳಿಂದ ಹೊರತಾದ ಆಕಾಂಕ್ಷಿಗಳ ಪಟ್ಟಿಯಲ್ಲಿ ಸಿಎಂ ಮುನಿಯಪ್ಪ, ಮಾಜಿ ಮೇಯರ್ ವಿಜಯ್ ಕುಮಾರ್ ಪುತ್ರ ಗೌತಮ್ ಅವರ ಹೆಸರು ಇದೆ. ಇವರಿಬ್ಬರೂ ಪರಿಶಿಷ್ಟ ಎಡಗೈ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಈ ಪೈಕಿ ಗೌತಮ್ ಹೆಸರು ಮುಂಚೂಣಿಯಲ್ಲಿದೆ. ಇವರ ಹೆಸರನ್ನು ರಾಜ್ಯ ನಾಯಕರು ಅಂತಿಮಗೊಳಿಸಿ ಹೈಕಮಾಂಡ್ ಗೆ ಕಳುಹಿಸಲು ಉದ್ದೇಶಿಸಿದ್ದಾರೆ ಎನ್ನಲಾಗಿದೆ.

SCROLL FOR NEXT