ಅಮಿತ್ ಶಾ ಚುನಾವಣಾ ಪ್ರಚಾರ 
ರಾಜಕೀಯ

Loksabha Election 2024: ಏಪ್ರಿಲ್ 2 ರಿಂದ ಕರ್ನಾಟಕದಲ್ಲಿ Amitshah ಚುನಾವಣಾ ಪ್ರಚಾರ ಆರಂಭ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 2 ರಿಂದ ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನೀಲ್ ಕುಮಾರ್ ಶನಿವಾರ ತಿಳಿಸಿದ್ದಾರೆ.

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 2 ರಿಂದ ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನೀಲ್ ಕುಮಾರ್ ಶನಿವಾರ ತಿಳಿಸಿದ್ದಾರೆ.

ಏಪ್ರಿಲ್ 2 ರಂದು ಬೆಳಿಗ್ಗೆ 9 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾರತೀಯ ಜನತಾ ಪಕ್ಷ ಮತ್ತು ಅದರ ಮಿತ್ರ ಪಕ್ಷ ಜನತಾ ದಳ (ಜಾತ್ಯತೀತ) ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಅದೇ ದಿನ ಬೆಳಗ್ಗೆ 11 ಗಂಟೆಗೆ ಅರಮನೆ ಮೈದಾನದಲ್ಲಿ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ.

ನಂತರ ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಮತ್ತು ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳ ಹಿರಿಯ ಮುಖಂಡರೊಂದಿಗೆ ಕೇಂದ್ರ ಸಚಿವರು ಸಭೆ ನಡೆಸಲಿದ್ದಾರೆ. ಏಪ್ರಿಲ್ 2 ರಂದು ಸಂಜೆ ಚನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ ಎಂದು ಸುನೀಲ್ ಕುಮಾರ್ ಹೇಳಿದರು.

ಇನ್ನು ಹಾಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಲೋಕಸಭಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಮೂರು ಸ್ಥಾನಗಳನ್ನು ತನ್ನ ಮಿತ್ರ ಪಕ್ಷವಾದ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ತನ್ನ 25 ಅಭ್ಯರ್ಥಿಗಳ ಪೈಕಿ ಬಿಜೆಪಿಯು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಹಾಲಿ ಸಂಸದ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಹೋದರ ಡಿ ಕೆ ಸುರೇಶ್ ವಿರುದ್ಧ ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಳಿಯ ಡಾ ಸಿ ಎನ್ ಮಂಜುನಾಥ್ ಅವರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.

ಕರ್ನಾಟಕದ 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

'ಸತ್ಯವನ್ನು ಎದುರಿಸುವ ಧೈರ್ಯವಿಲ್ಲ': ಭಾರತದ ಕಮ್ಯುನಿಸ್ಟರು ಸಂಪೂರ್ಣ ಹೇಡಿಗಳು; ನಿರ್ಮಲಾ ಸೀತಾರಾಮನ್ ವಾಗ್ದಾಳಿ

ರಾಸಾಯನಿಕ ತ್ಯಾಜ್ಯ ಬಿಡುಗಡೆ ಆರೋಪ: ಬೀದರ್‌ನ 3 ಕೈಗಾರಿಕೆಗಳ ಬಂದ್ ಗೆ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!