ಜನಾರ್ದನ ರೆಡ್ಡಿ 
ರಾಜಕೀಯ

ಬಳ್ಳಾರಿಗೆ 'ನೋ ಎಂಟ್ರಿ': ಸ್ನೇಹಿತ ಶ್ರೀರಾಮುಲು ಪರ ಜನಾರ್ಧನ ರೆಡ್ಡಿ ಡಿಜಿಟಲ್ ಪ್ರಚಾರ!

ಇತ್ತೀಚೆಗಷ್ಟೇ ಬಿಜೆಪಿಗೆ ಮರಳಿ ಸೇರ್ಪಡೆಗೊಂಡಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಸ್ನೇಹಿತ ಶ್ರೀರಾಮುಲು ಬರ ಡಿಜಿಟಲ್ ಪ್ರಚಾರ ಆರಂಭಿಸಲು ಸಿದ್ಧತೆ ಆರಂಭಸಿದ್ದಾರೆ.

ಬಳ್ಳಾರಿ: ಇತ್ತೀಚೆಗಷ್ಟೇ ಬಿಜೆಪಿಗೆ ಮರಳಿ ಸೇರ್ಪಡೆಗೊಂಡಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಸ್ನೇಹಿತ ಶ್ರೀರಾಮುಲು ಬರ ಡಿಜಿಟಲ್ ಪ್ರಚಾರ ಆರಂಭಿಸಲು ಸಿದ್ಧತೆ ಆರಂಭಸಿದ್ದಾರೆ.

ಬಳ್ಳಾರಿ ಜಿಲ್ಲೆಗೆ ಪ್ರವೇಶಿಸದಂತೆ ನ್ಯಾಯಾಲಯದ ಆದೇಶ ಇರುವ ಹಿನ್ನೆಲೆಯಲ್ಲಿ ಜನಾರ್ಧನ ರೆಡ್ಡಿಯವರು ಡಿಜಿಟಲ್ ಮೂಲಕ ಪ್ರಚಾರ ನಡೆಸಲಿದ್ದಾರೆ.

ಕಳೆದ ವರ್ಷ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರೆಡ್ಡಿ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂಬ ಪ್ರಾದೇಶಿಕ ಪಕ್ಷವನ್ನು ಸ್ಥಾಪಿಸಿದ್ದರು. ಬಳಿಕ ತಮ್ಮ ಪತ್ನಿ ಅರುಣಾ ಲಕ್ಷ್ಮಿ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದರು. ಈ ವೇಳೆ ಬಳ್ಳಾರಿ ನಗರದಲ್ಲಿ ಪ್ರಚಾರ ವಾಹನವನ್ನು ಬಳಕೆ ಮಾಡಿದ್ದರು. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರೆಡ್ಡಿ ಮರಳಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಜಿಟಲ್ ಮೂಲಕ ಪ್ರಚಾರ ನಡೆಸಿ, ತಮ್ಮ ಬೆಂಬಲಿಗರೊಂದಿಗೆ ಸಂಪರ್ಕ ಸಾಧಿಸಲು ಯತ್ನಿಲು ಮುಂದಾಗಿದ್ದಾರೆ.

ಬಳ್ಳಾರಿ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಅವರು ಮಾತನಾಡಿ, ಜನಾರ್ದನ ರೆಡ್ಡಿ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿರುವುದರಿಂದ ಲೋಕಸಭೆ ಚುನಾವಣೆಯಲ್ಲಿ ನನ್ನ ಗೆಲುವಿನ ಅಂತರ ಖಂಡಿತವಾಗಿಯು ಹೆಚ್ಚಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ ಭೇಟಿಗೆ ಸುಪ್ರೀಂ ಕೋರ್ಟ್ ರೆಡ್ಡಿಗೆ ನಿರ್ಬಂಧ ಹೇರಿದೆ. ಆದರೆ, ಸಾಮಾಜಿಕ ಜಾಲತಾಣಗಳ ಮೂಲಕ ನನ್ನ ಪರ ಪ್ರಚಾರ ನಡೆಸಲು ಅವಕಾಶವಿದೆ. ಈ ಮೂಲಕ ಬಳ್ಳಾರಿ ಜನತೆಯೊಂದಿಗೆ ಸಂಪರ್ಕ ಸಾಧಿಸುತ್ತಾರೆ. ಕಳೆದ ವಾರ ಕೆಆರ್‌ಪಿಪಿಯನ್ನು ಬಿಜೆಪಿಯೊಂದಿಗೆ ಅಧಿಕೃತವಾಗಿ ವಿಲೀನಗೊಳಿಸಲಾಗಿದೆ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!