ದೇವೇಗೌಡ ಮತ್ತು ಪರಮೇಶ್ವರ್
ದೇವೇಗೌಡ ಮತ್ತು ಪರಮೇಶ್ವರ್  
ರಾಜಕೀಯ

'ತುಮಕೂರಿನಿಂದ ಸ್ಪರ್ಧಿಸುವಂತೆ ದೇವೆಗೌಡರನ್ನು ನಾವು ಕರೆದಿರಲಿಲ್ಲ; ಜೆಡಿಎಸ್ ನವರು ಯಾರು ಕೆಲಸ ಮಾಡಲಿಲ್ಲ'

Shilpa D

ಬೆಂಗಳೂರು: 2019ರ ಲೋಕಸಭೆ ಚುನಾವಣೆಯಲ್ಲಿ ತುಮಕೂರಿಗೆ ಎಚ್‌.ಡಿ. ದೇವೇಗೌಡರನ್ನು ಕರೆದುಕೊಂಡು ಹೋಗಿ ನಾವು ಅವರನ್ನು ಸೋಲಿಸಿಲ್ಲ. ದೇವೇಗೌಡ ಪರವಾಗಿ ಜೆಡಿಎಸ್ ಪಕ್ಷದವರೇ ಕೆಲಸ ಮಾಡಲಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ತುಮಕೂರಿನಿಂದ ಸ್ಪರ್ಧಿಸುವಂತೆ ದೇವೆಗೌಡ ಅವರನ್ನು ಯಾರೂ ಕರೆದಿರಲಿಲ್ಲ. ಆಗ ನಾನು ಕೆಪಿಸಿಸಿ ಅಧ್ಯಕ್ಷ್ಯನಾಗಿದ್ದೆ ಎಂದು ತಿಳಿಸಿದರು.

ದೇವೇಗೌಡ ಅವರು ತುಮಕೂರಿನಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಬರುತ್ತಿದೆ. ನೀವು ಸ್ಪರ್ಧಿಸುತ್ತೀರಾ? ಎಂದು ನಾನು ದೇವೇಗೌಡ ಅವರನ್ನು ಕೇಳಿದ್ದೆ. ಅದಕ್ಕೆ ಅವರು ನಾನು ಇನ್ನೂ ತೀರ್ಮಾನ ಮಾಡಿಲ್ಲಪ್ಪ. ಬೆಂಗಳೂರು ಉತ್ತರ ಕ್ಷೇತ್ರದಿಂದ ನಿಲ್ಲಲು ತೀರ್ಮಾನ ಮಾಡಿಕೊಂಡಿದ್ದೀನಿ ಎಂದಿದ್ದರು. ಬಳಿಕ ನಮ್ಮ ಹೈಕಮಾಂಡ್ ಜೊತೆ ಏನು ಮಾತನಾಡಿಕೊಂಡರು ಎಂಬ ವಿಷಯ ನನಗೆ ಗೊತ್ತಿಲ್ಲ ಎಂದರು.

ತುಮಕೂರಿನಿಂದ ದೇವೇಗೌಡ ಅವರು ಸ್ಪರ್ಧಿಸುತ್ತಾರೆಂದು ಹೈಕಮಾಂಡ್‌ನಿಂದ ಸೂಚನೆ ಬಂತು. ನಾವೆಲ್ಲ ಪ್ರಾಮಾಣಿಕವಾಗಿ ದೇವೇಗೌಡ ಅವರ ಗೆಲುವಿಗಾಗಿ ಕೆಲಸ ಮಾಡಿದ್ದೇವೆ. ಪ್ರಧಾನ ಮಂತ್ರಿ ಆಗಿದ್ದವರು ನಮ್ಮ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಅಂದಾಗ ಗೆಲ್ಲಿಸಿಕೊಳ್ಳಬೇಕು ಎಂಬುದು ನಮ್ಮ ಉದ್ದೇಶವಾಗಿತ್ತು ಎಂದು ಹೇಳಿದರು‌.

ವಿರೋಧ ಪಕ್ಷಗಳನ್ನು ಸದೆಬಡಿದು ಮತ್ತೇ ಅಧಿಕಾರಕ್ಕೆ ಬರುವ ಮನಸ್ಥಿತಿಯಿಂದ ಬಿಜೆಪಿಯವರು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತನಿಖಾ ಸಂಸ್ಥೆಗಳ ಕಾರ್ಯ ನಿರಂತರವಾಗಿ ನಡೆಯುತ್ತದೆ. ಆದರೆ, ಇಷ್ಟು ದಿನ ಸುಮ್ಮನಿದ್ದು, ಚುನಾವಣೆ ಸಂದರ್ಭದಲ್ಲಿ ಆಸಕ್ತಿ ತೋರಿಸಿರುವುದು ಯಾಕೆ. ಆದಾಯ ತೆರಿಗೆ ಇಲಾಖೆಯವರು ಈಗ ತೆರಿಗೆ ಕಟ್ಟುವಂತೆ ನೋಟಿಸ್ ನೀಡುತ್ತಿರುವುದರ ಅರ್ಥವೇನು?. ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಯಾವ ಉದ್ದೇಶಕ್ಕಾಗಿ ನಿಷ್ಕ್ರೀಯ ಮಾಡಲಾಗಿತ್ತು ಎಂದು ಪ್ರಶ್ನಿಸಿದರು.

ಎಲೆಕ್ಟ್ರೋಲ್ ಬಾಂಡ್ಸ್ ಕೊಡಬಹುದು, ಹಣ ಕೊಡುವಂತಿಲ್ಲ ಎಂದು ಕಳೆದ ಚುನಾವಣೆಯಲ್ಲಿ ಹೇಳಲಾಗಿತ್ತು. ಇದಕ್ಕೆ ಚುನಾವಣೆ ಆಯೋಗ ಅನುಮತಿ ನೀಡಿತ್ತು. ಎಲ್ಲ ಪಾರ್ಟಿಯವರು ಎಲೆಕ್ಟ್ರೋಲ್ ಬಾಂಡ್ಸ್‌ಗಳನ್ನು ಡೊನೆಷನ್ ಮಾದರಿಯಾಗಿ ತೆಗೆದುಕೊಂಡರು. ಈಗ ಎಲೆಕ್ಟ್ರಾಲ್ ಬಾಂಡ್ಸ್ ತೆಗೆದುಕೊಂಡಿರುವುದು ತಪ್ಪು ಎನ್ನಲಾಗುತ್ತಿದೆ. ಬಿಜೆಪಿಯವರು ಹೆಚ್ಚು ಬಾಂಡ್ಸ್‌ಗಳನ್ನು ತೆಗೆದುಕೊಂಡಿದ್ದು, 8200 ಕೋಟಿ ರೂ. ಗೂ ಹೆಚ್ಚು ತೆಗೆದುಕೊಂಡಿದ್ದಾರೆ. ನಮ್ಮ ಪಾರ್ಟಿಗೆ 1800 ರೂ‌. ಕೋಟಿ ಬಂದಿದೆ ಎಂದರು.

SCROLL FOR NEXT