ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  
ರಾಜಕೀಯ

ಜನರಿಗಾಗಿ ಕೆಲಸ ಮಾಡುವ ಸಂಸದರು ಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Manjula VN

ಬೆಳಗಾವಿ: ಪ್ರಧಾನಿ ಮೋದಿ ಅವರನ್ನು ನೋಡಿ ಮತ ಹಾಕುವಂತೆ ಪ್ರತಿ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಮತಯಾಚನೆ ಮಾಡುತ್ತಿದೆ. ಆದರೆ, ನಮಗೆ ಜನರನ್ನು ಪ್ರತಿನಿಧಿಸುವ ಸಂಸದರು ಬೇಕಲ್ಲವೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶನಿವಾರ ಹೇಳಿದರು.

ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಸವದತ್ತಿಯಲ್ಲಿ ನಡೆದ ರ್ಯಾಲಿಯಲ್ಲಿ ಮತನಾಡಿದ ಅವರು, 10 ವರ್ಷಗಳಿಂದ ಸಂಸದರನ್ನು ನೋಡಿದ್ದೇನೆ. ಜನರನ್ನು ಪ್ರತಿನಿಧಿಸುವ ಸಂಸದರು ತಮ್ಮ ಕ್ಷೇತ್ರಕ್ಕೆ ಏನಾದರೂ ಮಾಡಬೇಕಲ್ಲವೇ? ಪಕ್ಷದ ಉನ್ನತ ನಾಯಕರ ಹೆಸರಿನಲ್ಲಿ ಜನರು ಅದೇ ಅಭ್ಯರ್ಥಿಗಳಿಗೆ ಹೇಗೆ ಮತ ಹಾಕುತ್ತಾರೆಂದು ಪ್ರಶ್ನಿಸಿದರು.

ಸತತವಾಗಿ ಆರು ಬಾರಿ ಆರಿಸಿದ ಹುಬ್ಬಳ್ಳಿ-ಧಾರವಾಡ ಜನತೆಯನ್ನು ಮರೆತ ಶೆಟ್ಟರ್ ಅವರಿಂದ ಬೆಳಗಾವಿ ಜ‌ನತೆ ಅಭಿವೃದ್ಧಿ ನಿರೀಕ್ಷಿಸುವುದು ಅಸಾಧ್ಯ. ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಬೆಳವಾಡಿ ಮಲ್ಲಮ್ಮ ನಂತ ಮಹನಿಯರು ಹುಟ್ಟಿ ಬೆಳೆದ ಜಿಲ್ಲೆಗೆ ಇಂತಹ ನಾಯಕರು ಬೇಡ.

ಜಗದೀಶ್ ಶೆಟ್ಟರ್ ತಮ್ಮ 32 ವಯಸ್ಸಿಗೆ ಮೊದಲ ಬಾರಿಗೆ ಶಾಸಕರಾಗಿದ್ದರು. ಅವರಿಗೆ ಬಿಜೆಪಿ ಅಂತಹ ಅವಕಾಶಗಳನ್ನು ನೀಡಿದ್ದಕ್ಕೆ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷರಾದರು. ಅವರು ಯುವಕರಾಗಿದ್ದ ಸಿಕ್ಕ ಅವಕಾಶದಿಂದಲೇ ದೊಡ್ಡ ನಾಯಕರೆನಿಸಿಕೊಂಡರು. ನನ್ನ ಮಗನಿಗೆ ಟಿಕೆಟ್ ನೀಡಿದ್ದಕ್ಕೆ ಇನ್ನೂ ಯುವಕ ಎಂದು ಹೇಳಲಾಗುತ್ತಿದೆ. ಯುವಕರಿಗೆ ಅವಕಾಶ ನೀಡೋದು ತಪ್ಪೇ ಎಂದು ಪ್ರಶ್ನಿಸಿದರು.

ಕಳೆದ 11 ‌ವರ್ಷಗಳಿಂದ ಕ್ಷೇತ್ರದ ಜನರೊಂದಿಗೆ ನನ್ನ ಮಗ ಉತ್ತಮ ಒಡನಾಟ ಹೊಂದಿದ್ದಾನೆ. ಈ ಕ್ಷೇತ್ರದ ನಾಡಿ ಮಿಡಿತದ ಅರಿವು ಅವನಿಗಿದೆ. ನನಗೆ ಆಶೀರ್ವದಿಸಿದಂತೆ ನನ್ನ ಮಗನಿಗೂ ಜನ ಸೇವೆ ಮಾಡಲು ಅವಕಾಶ ನೀಡಬೇಕೆಂದು ಹೇಳಿದರು.

ಬೆಳಗಾವಿ ಲೋಕಸಭೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಮೃಣಾಲ್ ಉತ್ಸುಕನಾಗಿದ್ದು, ಹಲವಾರು ವಿಷಯಗಳ ಮೂಲಕ ಯುವಕರ ಸವಾಲುಗಳನ್ನು ಕೇಳುವುದರಲ್ಲಿ ಆಸಕ್ತಿ ಹೊಂದಿದ್ದಾನೆ. ಈಗಾಗಲೇ ಜನಸೇವೆಯ ಮೂಲಕ ಸಮಾಜದಲ್ಲಿ ಸಾಕಷ್ಟು ಕೆಲಸ ಮಾಡಿರುವುದು ಎಲ್ಲರಿಗೂ ಗೊತ್ತಿರುವ ವಿಷಯ, ಬೆಳಗಾವಿಯ ಸರ್ವತೋಮುಖದ ಅಭಿವೃದ್ಧಿಗಾಗಿ ಈ ಬಾರಿ ಮೃಣಾಲ್ ಹೆಬ್ಬಾಳಕರ್ ಗೆ ಒಂದು ಅವಕಾಶ ನೀಡಿರಿ ಎಂದು ವಿನಂತಿಸುತ್ತೇನೆಂದರು.

SCROLL FOR NEXT