ಅರವಿಂದ್ ಲಿಂಬಾವಳಿ TNIE
ರಾಜಕೀಯ

ಪ್ರಜ್ವಲ್ ಲೈಂಗಿಕ ಪ್ರಕರಣ: ಬಿಜೆಪಿಗೆ ತೀವ್ರ ಮುಜುಗರ ತಂದಿದೆ- ಅರವಿಂದ ಲಿಂಬಾವಳಿ

ಜೆಡಿಎಸ್‌ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ವಿಚಾರವಾಗಿ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೆ ಮುಖಭಂಗವಾಗಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

ವಿಜಯಪುರ: ಜೆಡಿಎಸ್‌ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ವಿಚಾರವಾಗಿ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೆ ಮುಖಭಂಗವಾಗಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

ಮಾಧ್ಯಮಗಳ ಮುಂದೆ ಮಾತನಾಡಿದ ಅರವಿಂದ್ ನಿಂಬಾವಲಿ ಅವರು, ಈ ವಿಷಯ ಖಂಡಿತವಾಗಿಯೂ ಪಕ್ಷಕ್ಕೆ ಮುಜುಗರ ಉಂಟುಮಾಡಿದೆ ಎಂಬುದನ್ನು ನಾವು ಒಪ್ಪಿಕೊಂಡಿದ್ದೇವೆ. ಆದರೆ ಬಿಜೆಪಿ ಆರೋಪಿಯನ್ನು ಬೆಂಬಲಿಸುವುದಿಲ್ಲ ಅಥವಾ ಅವರ ಜೊತೆ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಇನ್ನು ಕಾನೂನಿನ ಪ್ರಕಾರ ಕಠಿಣ ಕ್ರಮಕ್ಕೆ ಆಗ್ರಹಿಸುತ್ತೇವೆ. ತನಿಖೆಯಲ್ಲಿ ಪಕ್ಷ ಯಾವುದೇ ಅಡೆತಡೆ ಸೃಷ್ಟಿಸುವುದಿಲ್ಲ ಎಂದರು.

ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್ ಈ ವಿಷಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಲಿಂಬಾವಳಿ ಆರೋಪಿಸಿದರು. ಆದರೆ ದೇಶದಲ್ಲಿ ತೀವ್ರ ಚರ್ಚೆಗೆ ಕಾರಣವಾದ ಘಟನೆಯ ನಂತರ ಬಿಜೆಪಿ ಜೆಡಿಎಸ್ ಜೊತೆಗಿನ ಸಂಬಂಧವನ್ನು ಕಡಿದುಕೊಳ್ಳಲು ಹೊರಟಿದೆಯೇ ಎಂಬ ಪ್ರಶ್ನೆಗೆ ಲಿಂಬಾವಳಿ ಉತ್ತರಿಸಲು ನಿರಾಕರಿಸಿದರು.

ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಯುವ ಭರವಸೆಗಳನ್ನು ಮೋದಿ ಸರ್ಕಾರ ಈಡೇರಿಸಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ಉತ್ತರಿಸಿದ ಲಿಂಬಾವಳಿ, ಈ ಆರೋಪ ನಿರಾಧಾರ ಎಂದು ಹೇಳಿದ್ದಾರೆ. ಉದ್ಯೋಗ ಎಂದರೆ ಸರ್ಕಾರಿ ಕೆಲಸ ಮಾತ್ರ ಅಲ್ಲ. ಕೇಂದ್ರವು ಜಲ ಜೀವನ್ ಮಿಷನ್ ಅಡಿಯಲ್ಲಿ ಹೆದ್ದಾರಿಗಳ ಅಭಿವೃದ್ಧಿ ಮತ್ತು ಪೈಪ್‌ಲೈನ್‌ಗಳನ್ನು ಹಾಕುವಂತಹ ಕಾಮಗಾರಿಗಳನ್ನು ಪ್ರಾರಂಭಿಸಿದೆ. ಈ ಯೋಜನೆಗಳು ದೇಶದಲ್ಲಿ ಸಾಕಷ್ಟು ಉದ್ಯೋಗಗಳನ್ನು ಸೃಷ್ಟಿಸಿವೆ. ಇದನ್ನು ಉದ್ಯೋಗ ಎಂದು ಪರಿಗಣಿಸಬೇಕು. ಕೇವಲ ಸರ್ಕಾರಿ ಉದ್ಯೋಗಗಳು ಉದ್ಯೋಗವಲ್ಲ ಎಂದು ಸಮರ್ಥಿಸಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?