ಪ್ರಾತಿನಿಧಿಕ ಚಿತ್ರ 
ರಾಜಕೀಯ

ಪರೇಶ್ ಮೇಸ್ತಾ ಸಾವು ಪ್ರಕರಣ ಮತ್ತೆ ಮುನ್ನೆಲೆಗೆ: ಅಂಜಲಿಗೆ ಬಿಸಿ, ಹೇಮಂತ್ ನಿಂಬಾಳ್ಕರ್ ವಿರುದ್ಧ ಬಿಜೆಪಿ ಆರೋಪ

2018ರ ಪರೇಶ್ ಮೇಸ್ತಾ ಸಾವಿನ ಪ್ರಕರಣ 2024ರ ಚುನಾವಣೆಯಲ್ಲಿ ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಮತ್ತು ಅವರ ಪತಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಕಾರವಾರ: 2018ರ ಪರೇಶ್ ಮೇಸ್ತಾ ಸಾವಿನ ಪ್ರಕರಣ 2024ರ ಚುನಾವಣೆಯಲ್ಲಿ ಮತ್ತೆ ಮುನ್ನೆಲೆಗೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಮತ್ತು ಅವರ ಪತಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಬಿಜೆಪಿ ಕಿಡಿಕಾರಿದೆ. ಹೇಮಂತ್ ನಿಂಬಾಳ್ಕರ್ ಅವರು ತನಿಖೆಯ ಸಮಯದಲ್ಲಿ ಅಂದಿನ ಸಿದ್ದರಾಮಯ್ಯ ಸರ್ಕಾರಕ್ಕೆ ಒಲವು ತೋರಿದ್ದಾರೆ ಎಂದು ಆರೋಪಿಸಿದೆ.

ಸಿಬಿಐ 'ಬಿ' ರಿಪೋರ್ಟ್ ಸಲ್ಲಿಸಿದ್ದು, ಇದು ಕೊಲೆ ಎಂದು ಕರೆಯಲು ಸ್ಪಷ್ಟವಾದ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿದೆ. ನಂತರ ಈ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ. ಆದರೆ, ಜಿಲ್ಲೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಜಟಾಪಟಿ ನಡೆಯುತ್ತಲೇ ಇದೆ. ಹಿಂದೂ ಕಾರ್ಯಕರ್ತರ ವಿರುದ್ಧ ದಾಖಲಿಸಲಾದ ಪ್ರಕರಣಗಳ ಸಂಬಂಧ ಅಂಜಲಿಯವರ ಪತಿ ಹೇಮಂತ್ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆಗೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ನಡೆಸಿದಾಗ, ಬಂದರು ಮತ್ತು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರು 'ರಾಜಕೀಯ ಮಾಡಲು ಬಿಜೆಪಿಗೆ ಮೃತದೇಹ ಬೇಕು' ಎಂದು ಪರೋಕ್ಷವಾಗಿ ಹೇಳಿದಾಗ 2018ರ ಪರೇಶ್ ಮೇಸ್ತಾ ಕೊಲೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿತು.

ಕಾಂಗ್ರೆಸ್ ಪ್ರಚಾರದ ವೇಳೆ ಪ್ರತಿನಿತ್ಯ ಈ ಆರೋಪಗಳು ಪ್ರತಿಧ್ವನಿಸುತ್ತಿದ್ದರೂ, ಬಿಜೆಪಿ ಲೋಕಸಭಾ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾತನಾಡಿ, ಹೇಮಂತ್ ನಿಂಬಾಳ್ಕರ್ ಅವರು ಮುಗ್ಧರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸಿದರು ಮತ್ತು ಕಂಬಿ ಹಿಂದೆ ಹಾಕಿದರು. ನಾವು ಪ್ರತಿಭಟಿಸುತ್ತಿದ್ದೆವು. ನಮ್ಮನ್ನು ಬಂಧಿಸಲಾಯಿತು ಮತ್ತು ಪ್ರಕರಣ ದಾಖಲಿಸಲಾಗಿದೆ. ಎಲ್ಲ ಹಿಂದೂ ಕಾರ್ಯಕರ್ತರನ್ನು ಕೂಡಿಹಾಕಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಳುಹಿಸಿದರು ಎಂದು ಆರೋಪಿಸಿದ್ದಾರೆ.

ಈಗ ವರ್ಷಗಳ ನಂತರ ನಾವು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪರಾರಿಯಾಗಿದ್ದೇವೆ ಎಂದು ಕಾಂಗ್ರೆಸ್ ಮುಖಂಡರು ಬೊಬ್ಬೆ ಹೊಡೆಯುತ್ತಿದ್ದಾರೆ. ಹೇಮಂತ್ ನಿಂಬಾಳ್ಕರ್ ಕಾಂಗ್ರೆಸ್ ಸರ್ಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಈ ವಿಷಯದಲ್ಲಿ ಸಂಬಂಧಪಡದ ಜನರನ್ನು ಬಂಧಿಸಿದರು. ರೂಪಾಲಿ ನಾಯ್ಕ್ ಅವರನ್ನು ಬಂಧಿಸಿ ಕೇಸ್ ಹಾಕಲು ಮಾಡಿದ್ದೇನು? ದಿನಕರ ಶೆಟ್ಟಿ ಬಂಧನ ಯಾಕೆ? ನೂರಾರು ಹಿಂದೂ ಕಾರ್ಯಕರ್ತರನ್ನು ಅವರ ಕಾಂಗ್ರೆಸ್ ಮುಖ್ಯಸ್ಥರನ್ನು ಸಂತೋಷಪಡಿಸಲು ಬಂಧಿಸಲಾಯಿತು' ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT