ಡಿಸಿಎಂ ಡಿಕೆ ಶಿವಕುಮಾರ್ 
ರಾಜಕೀಯ

ಹಾವೇರಿ: ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್ ಕಾರ್ಪೋರೇಟರ್ ಗೆ ಡಿಕೆಶಿ ಕಪಾಳ ಮೋಕ್ಷ! ವಿಡಿಯೋ ವೈರಲ್

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್‌ ಕಾರ್ಪೊರೇಟರ್‌‌ಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿದೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್‌ ಕಾರ್ಪೊರೇಟರ್‌‌ಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ವಿಡಿಯೋ ಎಲ್ಲೆಡೆ ವೈರಲ್‌ ಆಗುತ್ತಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿರುವ ರಾಜ್ಯ ಬಿಜೆಪಿ, ಕಳೆದ ರಾತ್ರಿ ಡಿ. ಕೆ. ಶಿವಕುಮಾರ್‌ ಅವರು ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿಯವರ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದೆ.

ಕಾಂಗ್ರೆಸ್‌ ಕಾರ್ಯಕರ್ತರು “ಡಿಕೆ, ಡಿಕೆ” ಎಂದು ಘೋಷಣೆಗಳನ್ನು ಕೂಗುತ್ತಿದ್ದರು. ಈ ಸಂದರ್ಭದಲ್ಲಿ ಡಿ. ಕೆ. ಶಿವಕುಮಾರ್‌ ಕಾರಿನಿಂದ ಕೆಳಗಿಳಿದು ಬಂದ ತಕ್ಷಣ ಅವರ ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್‌ ಕಾರ್ಪೊರೇಟರ್‌ ಅಲ್ಲಾವುದ್ದೀನ್‌ ಮನಿಯಾರ್‌ ಮನಿಯಾರ್‌ ಅವರ ಕಪಾಳಕ್ಕೆ ಬಾರಿಸಿದ್ದಾರೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ಹತ್ಯೆ ಮಾಡ್ತೀವಿ: ಇಸ್ರೇಲ್ ಬೆದರಿಕೆ

'ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಬಗ್ಗೆ ಭಾರತದ ಮೌನ ಅರ್ಥವೇ ಆಗುತ್ತಿಲ್ಲ; ದೇಶದ ಪರವಾಗಿ ನಿಂತಿದ್ದು ಇದೇ ಟೆಹ್ರಾನ್!'

ತಪ್ಪಿದ ಲಿಫ್ಟ್ ದುರಂತ: ಹೊರಬರುವಾಗ ದಿಢೀರ್ ಚಾಲನೆ, ಕೆಳಗೆ ಬಿದ್ದ ವ್ಯಕ್ತಿ! Video ವೈರಲ್!

ಇರಾನ್-ಇಸ್ರೇಲ್ ಸಂಘರ್ಷದ ಎಫೆಕ್ಟ್: LNG ಉತ್ಪಾದನೆ ಸ್ಥಗಿತಗೊಳಿಸಿದ ಕತಾರ್; ಭಾರತಕ್ಕೆ ಪೂರೈಕೆಯಲ್ಲಿ ವ್ಯತ್ಯಯ

ಕಾಶ್ಮೀರ: ಪೂಂಚ್‌ನ ಭಿಂಬರ್ ಗಲಿ ಸೆಕ್ಟರ್‌ನಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

SCROLL FOR NEXT