ಡಿಕೆ ಶಿವಕುಮಾರ್ 
ರಾಜಕೀಯ

ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಬಿಡುಗಡೆಯಲ್ಲಿ ನನ್ನ ಪಾತ್ರ ಇಲ್ಲ, ದೇವರಾಜೇಗೌಡ ಹೇಳಿದ್ದೆಲ್ಲ ಸುಳ್ಳು: ಡಿಕೆ ಶಿವಕುಮಾರ್

ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣ ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ.

ಬೆಂಗಳೂರು: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣ ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜಕೀಯ ಆರೋಪ ಪ್ರತ್ಯಾರೋಪಗಳು ಜೋರಾಗಿವೆ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಬಿಡುಗಡೆ​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಆರೋಪಿಸಿದ್ದು, ಈ ಆರೋಪವನ್ನು ಡಿಸಿಎಂ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

ನನಗೂ, ಪೆನ್‌ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ವಿರುದ್ಧ ಆರೋಪಿಸಿರುವ ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ ಎಂದು ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ದೇವರಾಜೇಗೌಡ ಅವರು ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ. ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ. ದೇವರಾಜೇಗೌಡ ಈ ಹಿಂದೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ದೇವರಾಜೇಗೌಡ ಬಿಜೆಪಿಯ ಸಕ್ರಿಯ ಕಾರ್ಯಕರ್ತ. ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್, ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ. ಡ್ಯಾಮೇಜ್ ಕಂಟ್ರೋಲ್‌ಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು. ದೇವರಾಜೇಗೌಡ ಮೂಲಕ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಹಿಂದೆ ಇದೇ ದೇವರಾಜೇಗೌಡ ಸುದ್ದಿಗೋಷ್ಠಿ ನಡೆಸಿ ಪೆನ್ ಡ್ರೈವ್ ಇದೆ ಎಂದು ಹೇಳಿದ್ದರು. ಅಲ್ಲದೆ ಬಿಜೆಪಿ ನಾಯಕರ ಅನುಮತಿ ಪಡೆದು ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಹೀಗಿರುವಾಗ ನನಗೂ, ಪೆನ್ ಡ್ರೈವ್ ಬಿಡುಗಡೆಗೂ ಏನು ಸಂಬಂಧ? ಕೋತಿ ತಿಂದು ಮೇಕೆ ಬಾಯಿಗೆ ಒರೆಸಿತು ಎಂಬಂತೆ ದೇವರಾಜೇಗೌಡ ಮಾಡೋದೆಲ್ಲ ಮಾಡಿ ಈಗ ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ಇದರ ಹಿಂದೆ ಬಿಜೆಪಿ-ಜೆಡಿಎಸ್ ನಾಯಕರ ಷಡ್ಯಂತ್ರ ಇದೆ. ಸದ್ಯ ನಾನು ಬೆಂಗಳೂರಿನಿಂದ ಹೊರಗಿದ್ದು, ಬಂದ ನಂತರ ಈ ಬಗ್ಗೆ ಮಾತಾಡುತ್ತೇನೆ ಎಂದು ಡಿಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT