ವಕೀಲ ದೇವರಾಜೇಗೌಡ 
ರಾಜಕೀಯ

ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಹಂಚಿಕೆ ಹಿಂದೆ ಡಿಕೆ ಶಿವಕುಮಾರ್: ವಕೀಲ ದೇವರಾಜೇಗೌಡ ಆರೋಪ

ದೇಶಾದ್ಯಂತ ಸದ್ದು ಮಾಡುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈವಾಡದ ಆರೋಪ ಕೇಳಿಬಂದಿದೆ.

ಬೆಂಗಳೂರು: ದೇಶಾದ್ಯಂತ ಸದ್ದು ಮಾಡುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈವಾಡದ ಆರೋಪ ಕೇಳಿಬಂದಿದೆ. ನಗರದ ಪ್ರೆಸ್ ಕ್ಲಬ್ ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಸನದ ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡ ಈ ಆರೋಪ ಮಾಡಿದರು. ಈ ಪ್ರಕರಣದ ಹಿಂದಿನ ರೂವಾರಿ ಬೇರೆ ಯಾರೂ ಅಲ್ಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಂದರು.

ಪೆನ್ ಡ್ರೈವ್ ಹಂಚಿಕೆ ಮಾಡೋ ಗೇಮ್ ಪ್ಲ್ಯಾನಿಂಗ್ ಸಿದ್ದರಾಮಯ್ಯ ಸರ್ಕಾರದ್ದು ಎಂದು ಆರೋಪಿಸಿರುವ ವಕೀಲ ದೇವರಾಜೇಗೌಡ, ಸದ್ಯ ವೈರಲ್ ಆಗಿರುವ ವಿಡಿಯೋಗಳು ನನ್ನ ಪೆನ್ ಡ್ರೈವ್‌ನಲ್ಲಿ ಇರೋದಲ್ಲ. ಈಗ ಹೊರ ಬಂದಿರುವ ವಿಡಿಯೋಗೂ ನನಗೂ ಸಂಬಂಧ ಇಲ್ಲ. ಈ ವೀಡಿಯೋಗಳೆಲ್ಲವೂ ಮಿಕ್ಸಿಂಗ್ ವಿಡಿಯೋಗಳು. ಇದು ಸಂಪೂರ್ಣವಾಗಿ ಆರೋಪಿಗೆ ಸಂಬಂಧಿಸಿದ್ದಲ್ಲ. ಅಸಲಿಗೆ ಇರೋದು 2 ಗಂಟೆ 37 ನಿಮಿಷ ವೀಡಿಯೋ ಮಾತ್ರ ಎಂದು ತಿಳಿಸಿದರು.

ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಹಾಸನದ ನನ್ನ ಗೃಹ ಕಚೇರಿಯಲ್ಲಿ ಈ ಪೆನ್ ಡ್ರೈವ್ ಕೊಟ್ಟಿದ್ದ. ಎಸ್ಐಟಿಗೆ ನನ್ನ ಬಳಿ ಇರುವ ದಾಖಲೆ ಕೊಟ್ಟಿದ್ದೇನೆ. ಎಲ್ಲವನ್ನೂ ಅವರಿಗೆ ಕೊಟ್ಟಿದ್ದೇನೆ. ಆದರೆ, ಕಾಂಗ್ರೆಸ್ ಸರ್ಕಾರ ನಿಜವಾದ ಆರೋಪಿಗಳನ್ನು ಬಚ್ಚಿಟ್ಟುಕೊಂಡಿದೆ. ಸಂತೃಸ್ತರಿಗೆ ಹಣ ಕೊಟ್ಟುಕರ್ಕೊಂಡು ಬಂದಿದ್ದಾರೆ. ಎಲ್ ಆರ್ ಶಿವರಾಮೇಗೌಡರನ್ನು ಮಧ್ಯವರ್ತಿಯಾಗಿ ಕಳುಹಿಸಲಾಗಿದೆ. ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಸಿಬಿಐಗೆ ವಹಿಸಬೇಕು, ನಾನು ಎಲ್ಲಾ ದಾಖಲೆ ಕೊಡುತ್ತೇನೆ ಎಂದರು.

ಕಾಂಗ್ರೆಸ್ ಕಡೆಯಿಂದ ನನಗೆ ಬಿಗ್ ಆಫರ್ ಬಂದಿದೆ. ಲೋಕಸಭೆ ಚುನಾವಣೆ ಮುಗಿದ ಮೇಲೆ ನನಗೆ ಕ್ಯಾಬಿನೇಟ್ ಸ್ಥಾನಮಾನದ ಹುದ್ದೆಯ ಆಫರ್ ಕೊಟ್ಟಿದ್ದಾರೆ. ಸ್ವತಃ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಕಡೆಯಿಂದ ಬಂದ ಜನ ಈ ಆಪರ್ ಕೊಟ್ಟಿದ್ದಾರೆ ಎಂದು ತಿಳಿಸಿದ ವಕೀಲ ದೇವರಾಜೇಗೌಡ, ಸುದ್ದಿಗೋಷ್ಠಿ ನಡುವೆಯೇ ಲ್ಯಾಪ್ ಟ್ಯಾಪ್‌ನಲ್ಲಿ ಡಿಕೆ ಆಫರ್ ಕೊಟ್ಟಿದ್ದಾರೆ ಎನ್ನಲಾದ ಆಡಿಯೋ ಪ್ಲೇ ಮಾಡಿದ್ರು.

ಬಿಜೆಪಿ, ಜೆಡಿಎಸ್ ಮೈತ್ರಿಗೆ ಧಕ್ಕೆಯಾಗಬೇಕು ಎನ್ನುವ ಉದ್ದೇಶದಿಂದ ವಿಡಿಯೋ ಹಂಚಿಕೆ ಮಾಡಲಾಗಿದೆ. ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದರೆ SIT ಕ್ಲೋಸ್ ಮಾಡಬೇಕು. ಸರಿಯಾದ ತನಿಖೆಯಾಗಬೇಕು ಎಂದರೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು. SIT ಅಧಿಕಾರಿಗಳು ಕೈಗೊಂಬೆಗಳ ರೀತಿಯಲ್ಲಿ ತನಿಖೆ ಮಾಡ್ತಿದ್ದಾರೆ. ಈ ಪ್ರಕರಣದಿಂದ ಮೋದಿಯವರಿಗೆ ಧಕ್ಕೆ ಮಾಡಲು ಹೊರಟಿದ್ದಾರೆ ಎಂದು ವಕೀಲ ವಿವೇಕ್ ಸುಬ್ಬಾರೆಡ್ಡಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!

Google Trends ನಲ್ಲಿಯೂ ವಿಜಯ್- TVK ಅರ್ಭಟ! ಮತಗಳು, ಗೆಲುವಿನ ಬಗ್ಗೆ ಹೆಚ್ಚಿನ ಹುಡುಕಾಟ

IPL 2026: ಫಿನ್ ಅಲೆನ್ ಶತಕದ ಅಬ್ಬರ, ಡೆಲ್ಲಿ ವಿರುದ್ಧ KKR ಗೆ 8 ವಿಕೆಟ್ ಗಳ ಭರ್ಜರಿ ಜಯ!

ಹೌದು 2025 ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ವಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ 1 ವರ್ಷದ ಬಳಿಕ ಚೀನಾ ಒಪ್ಪಿಗೆ!

ಕಾಂಗ್ರೆಸ್‌ನ್ನು ಕಿತ್ತು ಹಾಕದೇ ಯುವಕರಿಗೆ ಉದ್ಯೋಗವಿಲ್ಲ! ನಿಖಿಲ್ ಕುಮಾರಸ್ವಾಮಿ ಕಿಡಿ

SCROLL FOR NEXT