ಮಲ್ಲಿಕಾರ್ಜುನ ಖರ್ಗೆ ಮತ್ತು ಯಡಿಯೂರಪ್ಪ  
ರಾಜಕೀಯ

ಇಂದು ರಾಜ್ಯದ 14 ಕ್ಷೇತ್ರಗಳಿಗೆ ಮತದಾನ: ಖರ್ಗೆ, ಯಡಿಯೂರಪ್ಪ ಸೇರಿದಂತೆ ಘಟಾನುಘಟಿಗಳಿಗೆ ಸತ್ವ ಪರೀಕ್ಷೆ!

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕಣವೆಂದೇ ಪರಿಗಣಿಸಲ್ಪಟ್ಟಿರುವ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳಿವೆ, ಹಾಗೂ ಮಾಜಿ ಸಿಎಂ ಹಾಗೂ ಲಿಂಗಾಯತ ಪ್ರಬಲ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಇಬ್ಬರಿಗೂ ಇದು ಸವಾಲಿನ ಚುನಾವಣೆ ಎಂದೇ ಪರಿಗಣಿಸಲಾಗಿದೆ.

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮಂಗಳವಾರ ಮತದಾನ ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕಣವೆಂದೇ ಪರಿಗಣಿಸಲ್ಪಟ್ಟಿರುವ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳಿವೆ, ಹಾಗೂ ಮಾಜಿ ಸಿಎಂ ಹಾಗೂ ಲಿಂಗಾಯತ ಪ್ರಬಲ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಇಬ್ಬರಿಗೂ ಇದು ಸವಾಲಿನ ಚುನಾವಣೆ ಎಂದೇ ಪರಿಗಣಿಸಲಾಗಿದೆ.

14 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುವುದರೊಂದಿಗೆ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯವಾಗಲಿದೆ. ರಾಜ್ಯದ ಇತರೆ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆದಿತ್ತು. ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ತಾಪಮಾನದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು 14 ಕ್ಷೇತ್ರಗಳಲ್ಲಿ ವ್ಯಾಪಕ ಪ್ರಚಾರ ನಡೆಸಿದ್ದಾರೆ. ಎರಡು ಪಕ್ಷಗಳು ಎಸ್‌ಸಿ/ಎಸ್‌ಟಿ/ಒಬಿಸಿ ಕೋಟಾ, ಸೇರಿದಂತೆ ಅಲ್ಪಸಂಖ್ಯಾತರ ಓಲೈಕೆ ಯತ್ನ ನಡೆಸಿದ್ದಾರೆ. ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್ ಖಾತರಿಗಳು, ಹುಬ್ಬಳ್ಳಿ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಮತ್ತು ಇತ್ತೀಚಿನ ಹಾಸನ ಲೈಂಗಿಕ ಹಗರಣದಂತಹ ವಿಷಯಗಳ ಮೇಲೆ ಕೇಂದ್ರೀಕೃತವಾಗಿವೆ.

ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ (ಹಾವೇರಿ) ಮತ್ತು ಜಗದೀಶ್ ಶೆಟ್ಟರ್ (ಬೆಳಗಾವಿ), ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ (ಧಾರವಾಡ) ಮತ್ತು ಭಗವಂತ ಖೂಬಾ (ಬೀದರ್), ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ (ಶಿವಮೊಗ್ಗ), ಖರ್ಗೆ ಅವರ ಅಳಿಯ ರಾಧಾಕೃಷ್ಣ (ಗುಲ್ಬರ್ಗಾ ಎಸ್‌ಸಿ), ಮತ್ತು ಮಾಜಿ ಸಚಿವ ಬಿ ಶ್ರೀರಾಮುಲು (ಬಳ್ಳಾರಿ) ಕಣದಲ್ಲಿರುವ ಪ್ರಮುಖರು.

ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆ (ಬೀದರ್), ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ (ಬೆಳಗಾವಿ), ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ (ಚಿಕ್ಕೋಡಿ) ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ (ಬಿ.ಬಿ.ಸಂಯುಕ್ತ) ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ದಾವಣಗೆರೆಯಿಂದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ (ಕಾಂಗ್ರೆಸ್) ಪತ್ನಿ ಪ್ರಭಾ ಮಲ್ಲಿಕಾರ್ಜುನ್ (ಕಾಂಗ್ರೆಸ್) ಮತ್ತು ಸಂಸದ ಜಿ.ಎಂ.ಸಿದ್ದೇಶ್ವರ (ಬಿಜೆಪಿ) ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ (ಬಿಜೆಪಿ) ದಾವಣಗೆರೆ ಕ್ಷೇತ್ರಕ್ಕೆ ಸ್ಪರ್ಧಿಸುತ್ತಿದ್ದಾರೆ.

ಉತ್ತರ ಕನ್ನಡದಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಕಾಂಗ್ರೆಸ್‌ನ ಅಂಜಲಿ ನಿಂಬಾಳ್ಕರ್ ಕಣಕ್ಕಿಳಿದಿದ್ದಾರೆ. ಮಂಗಳವಾರದ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟದ ಪಾಲುದಾರ ಜೆಡಿಎಸ್ ಸ್ಪರ್ಧಿಸುತ್ತಿಲ್ಲ. ಆದರೆ, ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಅಭ್ಯರ್ಥಿಗಳ ಪರ ವ್ಯಾಪಕ ಪ್ರಚಾರ ನಡೆಸಿದ್ದಾರೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಬಿಜಾಪುರ, ಬೀದರ್, ಗುಲ್ಬರ್ಗ (ಎಸ್‌ಸಿ), ರಾಯಚೂರು, ಬಳ್ಳಾರಿ, ಕೊಪ್ಪಳ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ದಾವಣಗೆರೆಯಲ್ಲಿ ಮಂಗಳವಾರ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT